ಕೊಪ್ಪಳಕ್ಕೆ ಬಂದಿದೆ ಜಗತ್ತಿನ ದುಬಾರಿ ಮಾವು; ಕೆಜಿಗೆ 2.50 ಲಕ್ಷ!

ಕೊಪ್ಪಳ, ಮೇ 24; ರೈತರಿಂದಲೇ ನೇರವಾಗಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮಾವಿನ ಹಣ್ಣುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲು ಕೊಪ್ಪಳದಲ್ಲಿ 'ಕೊಪ್ಪಳ ಮಾವು ಮೇಳ-2023' ಆರಂಭವಾಗಿದೆ. ಮೇ 23 ರಿಂದ 31ರ ತನಕ ಈ ಪ್ರದರ್ಶನ, ಮಾರಾಟ ಮೇಳ ನಡೆಯಲಿದೆ.

ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಕೊಪ್ಪಳ ಮಾವು ಮೇಳ-2023 ಆಯೋಜನೆ ಮಾಡಲಾಗಿದೆ. ಮಾವು ಮೇಳಕ್ಕೆ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಚಾಲನೆ ನೀಡಿದರು.

Koppal Mango Mela 2023 Miyazaki Mango Main Attraction

ಈ ಮೇಳದಲ್ಲಿ ಪಾಲ್ಗೊಳ್ಳಲು 51ಕ್ಕೂ ಹೆಚ್ಚಿನ ರೈತರು ನೋಂದಣಿ ಮಾಡಿಕೊಂಡಿದ್ದಾರೆ. ರೈತರಿಗಾಗಿ ಉಚಿತವಾಗಿ 22ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ನಿರ್ಮಿಸಿ ಕೊಡಲಾಗಿದೆ ಮತ್ತು ಪ್ರದರ್ಶನದಲ್ಲಿ 100ಕ್ಕೂ ಹೆಚ್ಚಿನ ದೇಶಿ ಮತ್ತು ವಿದೇಶಿ ಮಾವಿನ ತಳಿಗಳು ಇವೆ. 10ಕ್ಕೂ ಹೆಚ್ಚಿನ ತೋಟಗಾರಿಕೆ ರೈತ ಉತ್ಪಾದಕ ಕಂಪನಿಗಳಲ್ಲದೇ ಜಿಲ್ಲಾ ಹಾಪಕಾಮ್ಸ್ ಸಂಸ್ಥೆಗಳಿಗೆ ಮಾವಿನ ಹಣ್ಣು ಮಾರಲು ಸ್ಟಾಲ್‌ ವ್ಯವಸ್ಥೆ ಮಾಡಲಾಗಿದೆ.

ಜಗತ್ತಿನ ದುಬಾರಿ ಮಾವು; 'ಕೊಪ್ಪಳ ಮಾವು ಮೇಳ-2023'ರಲ್ಲಿ ಜಗತ್ತಿನ ಅತ್ಯಂತ ದುಬಾರಿ ಮಾವು 'ಮೀಯಾ ಜಾಕಿ' ಎಂಬ ಜಪಾನ್ ತಳಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ. ಈ ಮಾವಿನ ಹಣ್ಣಿನ ರುಚಿಗಿಂತ ಬೆಲೆ ಜನರ ಗಮನಸೆಳೆಯುತ್ತಿದೆ. ಉತ್ತಮ ಗುಣಮಟ್ಟ, ಅಸಾಧಾರಣ ರುಚಿಯನ್ನು ಹೊಂದಿರುವ ಈ ಮಾವಿನ ಹಣ್ಣಿನ ಬೆಲೆ ಕೆಜಿಗೆ 2.50 ಲಕ್ಷ ರೂ.ಗಳು.

ಮಾವು ಬೆಳೆಯುವ ಕೊಪ್ಪಳ ಜಿಲ್ಲೆಯ ರೈತರಿಗೆ ಈ ತಳಿ ಪರಿಚಯಿಸುವ ಉದ್ದೇಶದಿಂದ 40 ಸಾವಿರ ರೂ. ನೀಡಿ ಒಂದು ಹಣ್ಣನ್ನು ಖರೀದಿಸಿ ಪ್ರದರ್ಶನಕ್ಕೆ ಇಡಲಾಗಿದೆ. ಈ ತಳಿಯ ಮಾವಿನ ಹಣ್ಣು ಒಂದು ಕೆಜಿಗೆ 5 ರಿಂದ 6 ಹಣ್ಣು ಬರುತ್ತದೆ.

Koppal Mango Mela 2023 Miyazaki Mango Main Attraction

ಮಾವು ಮೇಳದಲ್ಲಿ ಕೇಸರ್, ಬೆನೆಶಾನ್, ದಶಹರಿ, ರಸಮರಿ, ಸ್ವರ್ಣರೇಖಾ, ಇಮಾಮ ಪಸಂಧ ಆಪೋಸು, ಮಲ್ಲಿಕಾ, ತೋತಾಪೂರಿ, ಪುನಾಸ್ ಸೇರಿದಂತೆ 100ಕ್ಕೂ ಅಧಿಕ ವಿವಿಧ ತಳಿಯ ಮಾವಿನ ಹಣ್ಣುಗಳಿವೆ. ಪುನಾಸ್ ಮತ್ತು ಮಂಡಪ್ಪ ಉಪ್ಪಿನಕಾಯಿ ತಳಿಯ ಮಾವು, ಉಪ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳನ್ನು ಸಹ ಪ್ರದರ್ಶಿಸಲಾಗಿದೆ.

ಈ ಬಾರಿಯ ಮೇಳದಲ್ಲಿ ಮೊದಲ ಬಾರಿಗೆ ಮೌಲ್ಯವರ್ಧಿತ ಉತ್ಪನ್ನಗಳಾದ ಮ್ಯಾಂಗೋ ರೋಲ್, ಮ್ಯಾಂಗೋ ಸ್ಪೈಷ್, ಮಾವಿನ ಪಲ್ಪ, ಮಾವಿನ ಸಿಖಂಡ ಹಾಗೂ ಇತರ ಉತ್ಪನ್ನಗಳನ್ನು ಸಹ ಮಾರಾಟಕ್ಕೆ ಇಡಲಾಗಿದೆ. ಮೌಲ್ಯವರ್ಧಿತ ಉತ್ಪನ್ನಗಳನ್ನು ಹೇಗೆ ತಯಾರಿಸಬಹುದು? ಎಂಬ ಬಗ್ಗೆ ಸಹ ಮಾಹಿತಿ ನೀಡಲಾಗುತ್ತಿದೆ.

ಕೊಪ್ಪಳ ಕೇಸರ್ ಮಾವು; ಮಾವು ಮೇಳದಲ್ಲಿ ಕೊಪ್ಪಳ ಕೇಸರ್ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಸಾರ್ವಜನಿಕರಿಗೆ ಬಾಕ್ಸ್‌ನಲ್ಲಿನ ಹಣ್ಣುಗಳನ್ನು ಸಿಗುವಂತೆ ಅನುಕೂಲ ಮಾಡಲಾಗಿದೆ. ಈ ಬಾರಿ ಮೇಳವನ್ನು ಪ್ಲಾಸ್ಟಿಕ್ ಮುಕ್ತವಾಗಿಡುವ ಉದ್ದೇಶದಿಂದ ಸಾರ್ವಜನಿಕರಿಗೆ ಹಣ್ಣುಗಳನ್ನು ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ ಇಲಾಖೆಯಿಂದ ಪೇಪರ್ ಬ್ಯಾಗ್ ನೀಡಲಾಗಿದೆ.

ಕೊಪ್ಪಳ ಪ್ರಸಿದ್ಧ ತಳಿಯಾದ ಕೇಸರ್ ಹೆಚ್ಚು ಜನಪ್ರಿಯಗೊಳಿಸುವ ಉದ್ದೇಶದಿಂದ ಮಾವಿನ ಹಣ್ಣುಗಳಲ್ಲಿ ಲಭ್ಯವಿರುವ ಪೋಷಕಾಂಶಗಳು, ಖನಿಜಗಳು ಮತ್ತು ಅವುಗಳ ಆರೋಗ್ಯದ ಬಗ್ಗೆ ತಿಳಿಸುವ ಬ್ಯಾನರ್‌ಗಳನ್ನು ಪ್ರದರ್ಶಿಸಿ ಜನರಿಗೆ, ರೈತರಿಗೆ ಮಾಹಿತಿ ನೀಡಲಾಗುತ್ತಿದೆ.

ಸೆಲ್ಪಿ ಪಾಯಿಂಟ್: ಈ ಬಾರಿಯ ಮಾವು ಮೇಳದಲ್ಲಿ ಮಕ್ಕಳು ಮತ್ತು ಸಾರ್ವಜನಿಕರಿಗೆ ಸೆಲ್ಫಿ ಪಾಯಿಂಟ್ ನಿರ್ಮಿಸಲಾಗಿದೆ. ಈ ಪಾಯಿಂಟ್ ಮಾವಿನ ಮಾದರಿ ಹೊಂದಿದ್ದು, ಜನರನ್ನು ಆಕರ್ಷಿಸಿಸುತ್ತಿದೆ. ಮೇ 31ರವರೆಗೆ ತೋಟಗಾರಿಕಾ ಇಲಾಖಾ ಆವರಣದಲ್ಲಿ ಮಾವು ಮೇಳ ನಡೆಯಲಿದೆ. ಮೇಳದಲ್ಲಿ 12ಕ್ಕೂ ಹೆಚ್ಚಿನ ಮಾವಿನ ತಳಿಗಳನ್ನು ರೈತರು ನೇರವಾಗಿ ಮಾರಾಟ ಮಾಡಲು ಅನುಕೂಲ ಕಲ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+