krishi mela 2024: ನಾಳೆಯಿಂದ ಧಾರವಾಡ ಕೃಷಿ ಮೇಳ, ಈ ಕಾರಣಕ್ಕೆ ಮಿಸ್ ಮಾಡ್ಬೇಡಿ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಂತೆಯೇ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ನಾಳೆಯಿಂದ ಅಂದರೆ, ಸೆಪ್ಟೆಂಬರ್ 21ರಿಂದ ಪ್ರಾರಂಭವಾಗಲಿದ್ದು, ನಾಲ್ಕು ದಿನ ಈ ಕೃಷಿ ಮೇಳ ನಡೆಯಲಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 24ರ ವರೆಗೆ ಕೃಷಿ ಮೇಳ ನಡೆಯಲಿದ್ದು, ಕೃಷಿ ಮೇಳ ಹಲವು ಕಾರಣಗಳಿಂದ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಬಾರಿಯ ಕೃಷಿ ಮೇಳದ ವಿಶೇಷತೆಗಳೇನು, ಕೃಷಿ ಮೇಳದಲ್ಲಿ ಏನೆಲ್ಲ ಇರಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ -2024 ಈ ಬಾರಿ ರೈತರಿಗೆ ವಿಶೇಷವಾಗಿ ಹವಾಮಾನ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಾಮುಖ್ಯತೆ ಪಡೆದುಕೊಂಡಿದೆ. "ಹವಾಮಾನ ವೈಪರೀತ್ಯ ನಿರ್ವಹಣೆಗೆ ಕೃಷಿ ತಾಂತ್ರಿಕತೆಗಳು" ಎನ್ನುವ ಘೋಷಾವಾಕ್ಯದೊಂದಿಗೆ ಈ ಬಾರಿ ಕೃಷಿ ಮೇಳ ನಡೆಯುತ್ತಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕೃಷಿ ಮೇಳ ನಡೆಯಲಿದೆ. ಧಾರವಾಡದ ಕೃಷಿ ಮೇಳವನ್ನು ರೈತರ ಜಾತ್ರೆ ಎಂದೇ ಹೇಳಲಾಗುತ್ತದೆ. ಈ ಕೃಷಿ ಮೇಳಕ್ಕೆ ಪ್ರತಿ ವರ್ಷವೂ ಲಕ್ಷಾಂತರ ಜನ ಬಂದು ಸೇರುತ್ತಾರೆ. ಕೃಷಿ ಮೇಳದಲ್ಲಿ ಕೃಷಿ ಪದಾರ್ಥಗಳ ಮಾರಾಟ ಹಾಗೂ ಪ್ರದರ್ನ ನಡೆಯುತ್ತದೆ. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮಾಡುವ ಆವಿಷ್ಕಾರವನ್ನು ಸಹ ಇಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲದೇ ವಿವಿಧ ಬೆಳೆಗಳು, ಅದನ್ನು ಬೆಳೆಯುವ ವಿಧಾನ, ಜಾನುವಾರುಗಳು, ಹೂವು ಸೇರಿದಂತೆ ಕೃಷಿ ಹಾಗೂ ಉಪ ಕಸುಬಿನ ಅನಾವರಣವೇ ಕೃಷಿ ಮೇಳದಲ್ಲಿ ಆಗುತ್ತದೆ. 2023ನೇ ಸಾಲಿನಲ್ಲಿ ನಡೆದ ಧಾರವಾಡ ಕೃಷಿ ಮೇಳಕ್ಕೆ ಬರೋಬ್ಬರಿ 10 ಲಕ್ಷಕ್ಕೂ ಹೆಚ್ಚು ಜನ ಭೇಟಿ ನೀಡಿದ್ದರು. ಈ ಬಾರಿಯೂ ಲಕ್ಷಾಂತರ ಜನ ಕೃಷಿ ಮೇಳಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ.

ಧಾರವಾಡ ಕೃಷಿ ಮೇಳ -2024 ಈ ಬಾರಿಯ ವಿಶೇಷವೇನು ?
ಈ ಬಾರಿ ಹಲವು ಕಾರಣಗಳಿಂದ ಧಾರವಾಡ ಕೃಷಿ ಮೇಳ ಪ್ರಸಿದ್ಧಿ ಗಳಿಸಿದೆ. ಅದರಲ್ಲಿ ಹವಾಮಾನ ವೈಪರೀತ್ಯ ನಿರ್ವಹಣೆ ಮಾಡುವುದು ಹಾಗೂ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದು ಪ್ರಮುಖವಾಗಿದೆ. ಈ ಬಾರಿಯ ಪ್ರಮುಖ ಆಕರ್ಷಣೆಗಳು ಈ ರೀತಿ ಇವೆ.
* ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿ.
* ಕೃಷಿಗೆ ಪೂರಕ ಪರಿಕರಗಳ ಮಾರಾಟ ಹಾಗೂ ಪ್ರದರ್ಶನ ನಡೆಯಲಿದೆ.
* ನೀರಾವರಿ ಸಾಧನಗಳ ಪ್ರದರ್ಶನ ಹಾಗೂ ಮಾರಾಟ
* ಮೌಲ್ಯಯುತವಾದ ಕೃಷಿ ಉತ್ಪನ್ನಗಳು ಇಲ್ಲಿ ಲಭ್ಯವಿರಲಿವೆ.
* ರೈತ ವಿಜ್ಞಾನಿಗಳೊಂದಿಗೆ ಸಂವಾದ ನಡೆಯಲಿದೆ.
* ಪರಿಕರಗಳ (ಕೃಷಿಯಲ್ಲಿ ಬಳಸುವ ಮೆಷನ್‌ಗಳು) ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಉತ್ಪನ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹೇಗೆ ಬಳಸುವುದು ಎನ್ನುವುದನ್ನು ತಿಳಿಸಲಾಗುತ್ತದೆ. ಅಲ್ಲದೇ ಎರಡನೇ ಹಂತದ ಕೃಷಿಯ ಬಗ್ಗೆಯೂ ಈ ಮೇಳದಲ್ಲಿ ರೈತರಿಗೆ ಮಾಹಿತಿ ನೀಡಲಾಗುತ್ತದೆ.
* ಬರ ನಿರ್ವಹಣೆ ಮಾಡುವುದು ಹೇಗೆ, ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡುವುದು ಹೇಗೆ ಎಂದು ತಿಳಿಸಲಾಗುತ್ತದೆ.
* ಹವಾಮಾನ ವೈಪರೀತ್ಯ ನಿರ್ವಹಣೆಯಲ್ಲಿ ಕೈಗೊಳ್ಳಬೇಕಾದ ಬೆಳೆ ಪದ್ಧತಿಗಳು ಹಾಗೂ ಕೃಷಿ ತಾಂತ್ರಿಕತೆಗಳ ಬಗ್ಗೆ ತಿಳಿಸಲಾಗುತ್ತದೆ.
* ಎಣ್ಣೆಕಾಳು ಹಾಗೂ ದ್ವಿದಳ ಧಾನ್ಯ ಉತ್ಪಾದನೆ ಹೆಚ್ಚಿಸಲು ಅಗತ್ಯ ಕೃಷಿ ತಾಂತ್ರಿಕಗಳ ಪರಿಚಯ ಇರಲಿದೆ.
* ಆಧುನಿಕ ಕೃಷಿ ಪದ್ಧತಿ ಹಾಗೂ ನವೋದ್ಯಮಿ, ಯುವಕರ (ಯುವ ಪೀಳಿಗೆ) ಪಾತ್ರದ ಬಗ್ಗೆಯೂ ಚರ್ಚೆ, ಸಂವಾದಗಳು ನಡೆಯಲಿವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications