• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರೈತರನ್ನು ಉತ್ತೇಜಿಸುವ 'ಕೃಷಿ ಪಂಡಿತ', 'ಕೃಷಿ ಪ್ರಶಸ್ತಿ' ಪ್ರದಾನ

|

ಬೆಂಗಳೂರು, ಮಾರ್ಚ್ 2 : ಕೃಷಿ ವಲಯದಲ್ಲಿ ಹೊಸ ಆನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಹಾಗೂ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ "ಕೃಷಿ ಪಂಡಿತ" ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ರೈತರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವವನ್ನು ಉಂಟುಮಾಡಿ, ಅತಿ ಹೆಚ್ಚು ಬೆಳೆ ಇಳುವರಿ ಪಡೆದು, ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಉತ್ತೇಜನವಾಗಿರುವ ರೈತರಿಗೆ 'ಕೃಷಿ ಪ್ರಶಸ್ತಿ'ಯನ್ನು ಪ್ರದಾನ ಮಾಡಿ ಗೌರವಿಸಲಾಗುತ್ತದೆ.

ಉತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ ಬೆಂಗಳೂರು ಕೃಷಿ ವಿವಿ

ರಾಜ್ಯ ಮಟ್ಟದ ಕೃಷಿ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾರ್ಚ್ 6ರ ಬುಧವಾರ ಬೆಳಿಗ್ಗೆ 11.30 ಗಂಟೆಗೆ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. ಈ ಸಮಾರಂಭದಲ್ಲಿ 2016-17 ಹಾಗೂ 2017-18ನೇ ಸಾಲಿನ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಗುತ್ತದೆ.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಲಿರುವರು. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಆರ್. ರೋಷನ್ ಬೇಗ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಉಪಸ್ಥಿತರಿರುವರು.

ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್, ಪಶುಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ತೋಟಗಾರಿಕಾ ಸಚಿವ ಎಂ.ಸಿ. ಮನಗುಳಿ, ರೇಷ್ಮೆ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಅರಣ್ಯ, ಪರಿಸರ, ಜೀವಶಾಸ್ತ್ರ ಸಚಿವ ಸತೀಶ್ ಎಲ್. ಜಾರಕಿಹೊಳಿ, ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕೃಷಿ ವಿವಿಯಿಂದ ಇಬ್ಬರು ಕೃಷಿಕರಿಗೆ ಎಚ್‌ಡಿ ದೇವೇಗೌಡ ಹೆಸರಲ್ಲಿ ಪ್ರಶಸ್ತಿ

ಸಮಾರಂಭದಲ್ಲಿ 7 ಕೃಷಿ ಪಂಡಿತರನ್ನು ಹಾಗೂ 14 ಕೃಷಿ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಗುವುದು. ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ರೈತ ಬಾಂಧವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

English summary
Krishi Pandit and Krishi Prashasti awards to encourage agriculture will be presented to farmers on 6th March at banquet hall in Vidhana Soudha by chief minister of Karnataka H D Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X