ಗ್ರಾಮೀಣ ಕುಡಿವ ನೀರಿನ ಅನುದಾನ ಕಟ್: ಕೃಷ್ಣ ಬೈರೇಗೌಡ ಆಕ್ರೋಶ
ಬೆಂಗಳೂರು, ಜೂನ್ 12: ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಶೇ.50ರಷ್ಟು ಅನುದಾನವನ್ನು ಕೇವಲ ಶೇ.12ಕ್ಕೆ ಇಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಅನುದಾನ ಕುಂಠಿತವಾಗಿದೆ. 3 ವರ್ಷದ ಹಿಂದೆ ಕೇಂದ್ರ, ರಾಜ್ಯ ಶೇ.50ರಷ್ಟು ಇತ್ತು. ಆದರೆ ಪ್ರಸ್ತುತ ಕೇಂದ್ರ ಶೇ.12, ರಾಜ್ಯ ಶೇ.88ರಷ್ಟು ಅನುದಾನ ವ್ಯತ್ಯಾಸವಾಗಿದೆ ಎಂದರು.
ಉದ್ಯೋಗ ಖಾತ್ರಿ ಬಾಬ್ತು 1050 ಕೋಟಿ ರೂ. ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ, ರಾಜ್ಯ ಸರ್ಕಾರದ ಹಣ ವಾಪಸ್ ಕೊಡಬೇಕಿದೆ. ಕೇಂದ್ರ ಸರ್ಕಾರ ಸಾಲದಲ್ಲಿದೆ ಎಂದರು. ಆಡಳಿತ ವ್ಯವಸ್ಥೆ 20 ವರ್ಷದಿಂದ ಕುಸಿದಿದೆ ಅದರ ಸುಧಾರಣೆ ನಮ್ಮ ಜವಾಬ್ದಾರಿಯಾಗಿದೆ., ಸದ್ಯ ನಾವು ಅದೇ ಪ್ರಯತ್ನವನ್ನು ಮಾಡುತ್ತಿದ್ದೇವೆ,ಎಲ್ಲಾ ಹಂತದಲ್ಲೂ ಭ್ರಷ್ಟಾಚಾರವಿದೆ.

ಮೇಲಿಂದ ಆರಂಭವಾಗಿ ಕೆಳಗಿನ ಹಂತದವರೆಗೂ ಇದೆ, ನಾನು 24 ಕ್ಯಾರೆಟ್ ಅಪರಂಜಿ ಎಂದು ಹೇಳಲು ಸಾಧ್ಯವಿಲ್ಲ ಹಾಗೆಂದರೆ ಆತ್ಮವಂಚನೆ ಮಾಡಿಕೊಂಡಂತೆ, ನಮ್ಮ ಕೆಲಸ ಪ್ರಾಮಾಣಿಕವಾಗಿ, ಆತ್ಮವಂಚನೆ ಇಲ್ಲದೇ ಮಾಡಲು ಮಾತ್ರ ಸಾಧ್ಯವಿದೆ ಎಂದು ಹೇಳಿದರು.
-
ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 324 ಗ್ರಾಮಗಳಿಗೆ ಟ್ಯಾಂಕರ್, ಬೋರ್ವೆಲ್ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications