ರಾಜ್ಯದ ಸಾಲಮನ್ನಾವನ್ನು ಟೀಕಿಸಿದ್ದ ಮೋದಿಗೆ ಕುಮಾರಸ್ವಾಮಿ ಉತ್ತರ
Recommended Video

ಬೆಂಗಳೂರು, ಡಿಸೆಂಬರ್ 30: ಕರ್ನಾಟಕ ಸರ್ಕಾರದ ಸಾಲಮನ್ನಾ ಘೋಷಣೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುಮಾರಸ್ವಾಮಿ ಟ್ವೀಟ್ ಮೂಲಕ ಮಾಹಿತಿಪೂರ್ಣ ಉತ್ತರ ನೀಡಿದ್ದಾರೆ.
ಮೋದಿ ಅವರ ಟೀಕೆಗೆ ಉತ್ತರಿಸಿರುವ ಕುಮಾರಸ್ವಾಮಿ, ಟ್ವಿಟ್ಟರ್ ಖಾತೆಯಲ್ಲಿ ಸಾಲಮನ್ನಾದ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಪ್ರಧಾನಿಯೊಬ್ಬರು ಸಾಲಮನ್ನಾ ಯೋಜನೆಯನ್ನು ಟೀಕಿಸಿದ್ದು ಅತ್ಯಂತ ದುರದೃಷ್ಠಕರ ಎಂದು ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ರೈತರು ಮಾಡಿದ ಸರಣಿ ಪ್ರತಿಭಟನೆಗಳ ಬಗ್ಗೆ ಗಮನ ವಹಿಸದೆ ಈಗ ಕರ್ನಾಟಕ ಸರ್ಕಾರವು ಸಾಲಮನ್ನಾ ಮಾಡಲು ಅನುಸರಿಸುತ್ತಿರುವ ಪಾರದರ್ಶಕ ಕ್ರಮಗಳ ಬಗ್ಗೆ ಬೊಟ್ಟು ಮಾಡುತ್ತಿದ್ದಾರೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಟ್ವಿಟ್ಟರ್‌ನಲ್ಲಿ ಸಾಲಮನ್ನಾದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ಯಾವ ಜಿಲ್ಲೆಯಲ್ಲಿ ಎಷ್ಟು ಸಾಲಮನ್ನಾ ಆಗಲಿದೆ, ಸಾಲಮನ್ನಾ ಆಗಲಿರುವ ಒಟ್ಟು ಮೊತ್ತವೆಷ್ಟು ಎಂಬಿತ್ಯಾದಿ ಮಾಹಿತಿಯನ್ನು ನೇರವಾಗಿ ಮೋದಿ ಅವರ ಟ್ವಿಟ್ಟರ್ ಖಾತೆಗೆ ಟ್ವೀಟ್ ಮಾಡಿದ್ದಾರೆ.
|
ಸಾಲಮನ್ನಾ ಬಗ್ಗೆ 12 ಅಂಶಗಳು
ಸಾಲಮನ್ನಾ ಮಾಡಲು ಸರ್ಕಾರ ಅನುಸರಿಸುತ್ತಿರುವ 12 ಅಂಶಗಳ ಕ್ರಮಗಳ ಬಗ್ಗೆಯೂ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಸಾಲಮನ್ನಾವು ತೆರೆದ ಪುಸ್ತಕದಂತಿದೆ. ಸಾಲಮನ್ನಾದ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ, ಅಲ್ಲಿ ಯಾರು ಬೇಕಾದರು ಮಾಹಿತಿ ಪಡೆದುಕೊಳ್ಳಬಹುದು ಎಂದು ಸಿಎಂ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈವರೆಗೆ 60 ಸಾವಿರ ರೈತರ ಸಾಲಮನ್ನಾ
ಈ ವರೆಗೆ ಸುಮಾರು 60 ಸಾವಿರ ರೈತರ 350 ಕೋಟಿ ರೂ. ಸಾಲ ಮನ್ನಾದ ಮೊತ್ತವನ್ನು ನೇರವಾಗಿ ಅವರುಗಳ ಖಾತೆಗೆ ವಿದ್ಯುನ್ಮಾನ (ಇಲೆಕ್ಟ್ರಾನಿಕ್) ಮಾದರಿಯಲ್ಲಿ ಮಾಡಲಾಗಿದೆ. ಪ್ರತಿ ವಾರ ಸಾಲ ಮನ್ನಾದ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ವಿದ್ಯುನ್ಮಾನ ಮಾದರಿಯಲ್ಲಿ ತುಂಬಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.

2019 ಜನವರಿಗೆ ಪೂರ್ಣ
ಈ ಪ್ರಕ್ರಿಯೆ 2019ರ ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಈ ಅವಧಿಯೊಳಗೆ ಎಲ್ಲಾ ಅರ್ಹ ರೈತರನ್ನು ನೊಂದಾಯಿಸಲಾಗುವುದು. ಈ ಯೋಜನೆಯ ಪಾರದರ್ಶಕ ಹಾಗೂ ಯಶಸ್ವಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಅತ್ಯಂತ ಬದ್ಧತೆಯಿಂದ ಹಗಲಿರುಳು ಶ್ರಮಿಸುತ್ತಿದ್ದಾರೆ ಅವರ ಶ್ರಮವನ್ನು ನೀವು ಅವಮಾನಿಸಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರೈತರ ಖಾತೆಗೆ ಸಾಲಮನ್ನಾದ ಹಣ
ಈ ವರೆಗೆ ಸುಮಾರು 60 ಸಾವಿರ ರೈತರ 350 ಕೋಟಿ ರೂ. ಸಾಲ ಮನ್ನಾದ ಮೊತ್ತವನ್ನು ನೇರವಾಗಿ ಅವರುಗಳ ಖಾತೆಗೆ ವಿದ್ಯುನ್ಮಾನ (ಇಲೆಕ್ಟ್ರಾನಿಕ್) ಮಾದರಿಯಲ್ಲಿ ಮಾಡಲಾಗಿದೆ. ಮುಂದಿನ ವಾರದಲ್ಲಿ ಇನ್ನೂ 1 ಲಕ್ಷ ರೈತರಿಗೆ 400 ಕೋಟಿ ರೂ.ಗಳನ್ನು ಅವರುಗಳ ಖಾತೆಗೆ ಜಮೆ ಮಾಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.











Click it and Unblock the Notifications