ಆಗಸ್ಟ್‌ 10ರಿಂದ ಸಿಎಂ ರಾಜ್ಯ ಪ್ರವಾಸ, ಇಸ್ರೇಲ್ ಮಾದರಿ ಕೃಷಿಗೆ ಚಾಲನೆ

ಬೆಂಗಳೂರು, ಆಗಸ್ಟ್‌ 09: ನಾಳೆ (ಆಗಸ್ಟ್‌ 10)ರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಮೂರು ದಿನಗಳ ರಾಜ್ಯ ಪ್ರವಾಸ ಕೂಗೊಳ್ಳುತ್ತಿದ್ದು, ಇದೇ ಸಂದರ್ಭದಲ್ಲಿ ಇಸ್ರೇಲ್ ಮಾದರಿ ಕೃಷಿಗೆ ಚಾಲನೆ ನೀಡಲಿದ್ದಾರೆ.

ಮೂರು ದಿನಗಳ ಕಾಲ ಬಾಗಲಕೋಟೆ, ಧಾರವಾಡ, ವಿಜಯಪುರ, ಮಂಡ್ಯ, ಮೈಸೂರು ಜಿಲ್ಲೆಗಳ ಪ್ರವಾಸ ಮಾಡಲಿದ್ದು, ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು, ರೈತರು, ಯುವಕರೊಂದಿಗೆ ಒಡನಾಡಲಿದ್ದಾರೆ.

ಆಗಸ್ಟ್‌ 10ರಂದು ಸಂಜೆ ಮೈಸೂರಿಗೆ ತಲುಪುವ ಸಿಎಂ, ಶನಿವಾರ ಬೆಳಿಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಆ ನಂತರ ಶ್ರೀರಂಗಪಟ್ಟಣದ ಸೀತಾಪುರ ಗ್ರಾಮದ ರೈತರೊಂದಿಗೆ ಭತ್ತ ನಾಟಿ ಮಾಡುವ ಮೂಲಕ ಇಸ್ರೇಲ್ ಮಾದರಿ ಕೃಷಿಗೆ ಚಾಲನೆ ನೀಡಲಿದ್ದಾರೆ.

Kumaraswamy three days state tour begains from tomorrow

ಮಧ್ಯಾಹ್ನ ಕೆಆರ್‌ಎಸ್‌ಗೆ ಭೇಟಿ ಸಂಜೆ ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಚುಂಚನಕಟ್ಟೆ ಜಲಪಾತೋತ್ಸವ ಉದ್ಘಾಟಿಸಲಿದ್ದಾರೆ.

ಭಾನುವಾರ ಬೆಳಿಗ್ಗೆ ಕೆಲವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಹುಬ್ಬಳ್ಳಿಗೆ ತೆರಳಿ ಅಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ಮಾಡಲಿದ್ದಾರೆ. ಅಂದೇ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಿಸುವ ಕಾರ್ಯಕ್ರಮ ಸಹ ಇದೆ.

ಇದೇ ಪ್ರವಾಸದಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡುತ್ತಾರೆಂಬ ಸುದ್ದಿ ಬಂದಿತ್ತಾದರೂ ಅದು ಸುಳ್ಳಾಗಿದೆ. ಈ ಪ್ರವಾಸದಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+