ಮಂಡ್ಯದಲ್ಲಿ ಕಣ್ಣೀರು ಹಾಕಿದ ಎಚ್.ಡಿ.ಕುಮಾರಸ್ವಾಮಿ
ಮಂಡ್ಯ, ಆಗಸ್ಟ್ 3 : ಜೆಡಿಎಸ್ ರಾಜ್ಯಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ ರೈತ ಕುಟುಂಬದ ಸ್ಥಿತಿ ಕಂಡು ಕಣ್ಣೀರು ಹಾಕಿದರು.
ಸೋಮವಾರ ಕುಮಾರಸ್ವಾಮಿ ಅವರು ಮಳವಳ್ಳಿ ತಾಲೂಕಿನ ಕರಳಕಟ್ಟೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಉಮೇಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತ ರೈತನ ಕುಟುಂಬದ ಸ್ಥಿತಿ ನೋಡಿ ದುಖಃವಾಗಿದೆ ಎಂದು ಕಣ್ಣೀರು ಹಾಕಿದರು. [ಕಬ್ಬು ಬೆಳೆಗಾರರ ಆತ್ಮಹತ್ಯೆ ಸರಣಿಗೆ ಕೊನೆಯಿಲ್ಲ]

ರೈತನ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, 'ವಿರೋಧ ಪಕ್ಷಗಳು ಹೇಳುವಂತೆ ನಾನು ಮೊಸಳೆ ಕಣ್ಣೀರು ಸುರಿಸುತ್ತಿಲ್ಲ, ರಾಜಕೀಯ ಮಾಡಲು ನಾನು ಕಣ್ಣೀರು ಹಾಕುತ್ತಿಲ್ಲ. ರೈತರ ಕಷ್ಟ ಕಂಡು ದುಖಃವಾಗುತ್ತಿದೆ' ಎಂದರು. [ಮಂಡ್ಯಕ್ಕೆ ಭೇಟಿ ನೀಡಿದ ಮಾಜಿ ಸಂಸದೆ ರಮ್ಯಾ ಹೇಳಿದ್ದೇನು?]
ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ : 'ರೈತರ ಸಾಲ ಮತ್ತು ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಿದರೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತೇನೆ' ಎಂದ ಸವಾಲು ಹಾಕಿದರು.
ಕಳೆದ ವಾರ ನಟಿ, ಮಾಜಿ ಸಂಸದೆ ರಮ್ಯಾ ಅವರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. ಮದ್ದೂರು ತಾಲೂಕು ಸಾದೊಳಲು ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶಿವಣ್ಣ, ಪಾಂಡವಪುರದಲ್ಲಿ ಆತ್ಮಹತ್ಯೆಗೆ ಶರಣಾದ ನಿಂಗೇಗೌಡರ ಮನೆಗಳಿಗೆ ಭೇಟಿ ನೀಡಿ 50 ಸಾವಿರ ರೂ. ಪರಿಹಾರ ನೀಡಿದ್ದರು.












Click it and Unblock the Notifications