ಲಾಲ್‌ಬಾಗ್‌ನಲ್ಲಿ ನೋಡಿ ಮೈಸೂರು ಅರಮನೆ

ಬೆಂಗಳೂರು, ಆ.6 : ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆ.8ರಿಂದ 17ರವರೆಗೆ ನಡೆಯಲಿದೆ. ಮೈಸೂರು ಅರಮನೆ ಈ ಬಾರಿಯ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದರ್ಶನವನ್ನು ಆ.8ರಂದು ಉದ್ಘಾಟಿಸಲಿದ್ದಾರೆ.

ಬುಧವಾರ ಮರೀಗೌಡ ಸ್ಮಾರಕ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ತೋಟಗಾರಿಕೆ ಇಲಾಖೆಯ ನಿರ್ದೇಶಕ ಡಿ.ಕೆ.ರಾಮಕೃಷ್ಣಪ್ಪ ಅವರು ಫಲಪುಷ್ಪ ಪ್ರದರ್ಶನದ ಬಗ್ಗೆ ಮಾಹಿತಿ ನೀಡಿದರು. ಆ.8 ರಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದರ್ಶನ ಉದ್ಘಾಟಿಸಲಿದ್ದಾರೆ ಎಂದರು.

Lal Bagh

ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಅನಂತ್ ಕುಮಾರ್, ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ, ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ, ಬೆಂಗಳೂರು ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಪಾಲ್ಗೊಳ್ಳಲಿದ್ದಾರೆ.

ಆ.8ರಿಂದ 17ರವರೆಗೆ ಬೆಳಗ್ಗೆ 9ರಿಂದ ಸಂಜೆ 6 ಗಂಟೆಯ ತನಕ ಫಲಪುಪ್ಪ ಪ್ರದರ್ಶನ ನಡೆಯಲಿದೆ. ತರಕಾರಿ ಕೆತ್ತನೆ, ಪುಪ್ಪಭಾರತಿ, ಬೋನ್ಸಾಯ್, ಡಚ್ ಹೂವಿನ ಜೋಡಣೆ, ಒಣ ಹೂವಿನ ಜೋಡಣೆ ಈ ಬಾರಿಯ ಪ್ರದರ್ಶನದ ವಿಶೇಷಗಳಾಗಿವೆ.

ಮೈಸೂರು ಅರಮನೆ ನೋಡಿ : ಪ್ರದರ್ಶನದ ಪ್ರಮುಖ ಆಕರ್ಷಣೆ ಮೈಸೂರು ಅರಮನೆಯಾಗಿದೆ. ಗುಲಾಬಿ ಹೂವಿನಿಂದ ನಿರ್ಮಿಸಿದ ಮೈಸೂರು ಅರಮನೆಯ ಪ್ರತಿರೂಪವನ್ನು ಗಾಜಿನ ಮನೆಯಲ್ಲಿ ಪ್ರದರ್ಶಿಸಲಾಗುತ್ತದೆ. ತೋಟಗಾರಿಕೆ ಚಟುವಟಿಕೆಗೆ ಸಂಬಂಧಿಸಿದ ಮಳಿಗೆಗಳು, ಸಸ್ಯಸಂತೆ ಸಹ ಪ್ರದರ್ಶನದಲ್ಲಿರುತ್ತದೆ ರಾಮಕೃಷ್ಣಪ್ಪ ಮಾಹಿತಿ ನೀಡಿದರು.

ಉಚಿತ ಪ್ರವೇಶ : ಪ್ರದರ್ಶನಕ್ಕೆ ಆಗಮಿಸುವ ಜನರು ಸಾಮಾನ್ಯ ದಿನಗಳಲ್ಲಿ 40 ರೂ., ರಜಾ ದಿನಗಳಲ್ಲಿ 50 ರೂ. ಪ್ರವೇಶ ಶುಲ್ಕ ಪಾವತಿ ಮಾಡಬೇಕಾಗಿದೆ. ಎಲ್ಲಾ ದಿನಗಳಲ್ಲಿ 12 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಪ್ರದರ್ಶನಕ್ಕೆ ಆ.13 ಹಾಗೂ 14 ರಂದು ಶಾಲಾ ಮಕ್ಕಳಿಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+