ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಲಕ್ಷಣ್ ಸವದಿ ನೇಮಕ

ಬೆಂಗಳೂರು, ಜೂನ್ 01 : ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾಗಿ ಲಕ್ಷಣ್ ಸವದಿ ಅವರನ್ನು ನೇಮಕ ಮಾಡಲಾಗಿದೆ. 2018ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು.

ಶುಕ್ರವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಲಕ್ಷಣ್ ಸವದಿ ಅವರನ್ನು ನೇಮಕ ಮಾಡಿದ್ದಾರೆ. ನೇಮಕಗೊಂಡಿರುವ ಪತ್ರವನ್ನು ಲಕ್ಷಣ್ ಸವದಿ ಅವರಿಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಹಸ್ತಾಂತರ ಮಾಡಿದರು.

Laxman Savadi appointed as BJP Raitha Morcha president

2018ರ ಚುನಾವಣೆಗೆ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲಕ್ಷಣ್ ಸಂಗಪ್ಪ ಸವದಿ 2331 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಈರಣ್ಣಗೌಡ ಕುಮಟಹಳ್ಳಿ ವಿರುದ್ಧ ಸೋಲು ಕಂಡಿದ್ದರು. ಚುನಾವಣೆಯಲ್ಲೂ ಸೋತರೂ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನೀಡಲಾಗಿದೆ.

2008ರ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಗೆದ್ದಿದ್ದ ಲಕ್ಷಣ್ ಸವದಿ ಅವರು ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. 2013ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಅವರು ಸೋಲು ಕಂಡಿದ್ದಾರೆ.

2019ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಕ್ಷಣ್ ಸವದಿ ಅವರನ್ನು ರೈತ ಮೋರ್ಚಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಗಮನಹರಿಸಲು ಬಿಜೆಪಿ ತಂತ್ರ ರೂಪಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+