ಸಾಲಮನ್ನಾದಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ: ವೆಂಕಯ್ಯ ನಾಯ್ಡು
ಬೆಂಗಳೂರು, ಜನವರಿ 7: "ಉಚಿತ ವಿದ್ಯುತ್ ಹಾಗೂ ಸಾಲಮನ್ನಾ ಯೋಜನೆಗಳಿಂದ ರೈತರ ಸಮಸ್ಯೆ ಪರಿಹಾರವಾಗಲ್ಲ. ಇವು ತಾತ್ಕಾಲಿಕ ಪರಿಹಾರ ಅಷ್ಟೇ' ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, "ರೈತರ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಬೇಕಿಲ್ಲ. ರೈತರಿಗೆ ಬದುಕಿನ ಭದ್ರತೆ ನೀಡಿ, ಶಾಶ್ವತ ಪರಿಹಾರ ಕಲ್ಪಿಸಿ. ಇದರಿಂದ ರೈತ ಸ್ವಾವಲಂಬಿಯಾಗಿ ಬದುಕಲು ಅವಕಾಶ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ವಿಜ್ಞಾನದ ಹಾಗೂ ತಂತ್ರಜ್ಞಾನದ ಅಳವಡಿಕೆ ಆಗಬೇಕು. ಹಾಗಾದಾಗ ಅವರ ಬದುಕು ಅವರೇ ಕಟ್ಟಿಕೊಳ್ಳಲಿದ್ದಾರೆ' ಎಂದು ಹೇಳಿದರು.
"ದೇಶದ ವಿವಿಧ ಭಾಗದಿಂದ ವಿಜ್ಞಾನಿಗಳು, ಯುವ ವಿಜ್ಞಾನಿಗಳು, ಆಸಕ್ತರು ಕಳೆದ ಐದು ದಿನ ಉತ್ತಮ ಜ್ಞಾನವನ್ನು ವಿಜ್ಞಾನದ ಮೂಲಕ ನೀಡಿದ್ದಾರೆ. ಕೃಷಿ ದೇಶದ ಮೂಲ ಸಂಸ್ಕೃತಿಯಾಗಿದೆ. ಇದನ್ನು ಬುಳಿಸಿಕೊಂಡು ಸಾಗಬೇಕಿದೆ. ಇದರಿಂದ ವಿಜ್ಞಾನಿಗಳು ಹೆಚ್ಚಿನ ಸಂಶೋಧನೆಯನ್ನು ಕೃಷಿ ವಿಚಾರದಲ್ಲಿ ಮಾಡಿ. ಗ್ರಾಮೀಣ ಭಾಗದ ರೈತರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ಪರಿಹಾರ ಕಲ್ಪಿಸಿ ಅವರ ಬದುಕು ಹಸನಾಗಿಸಬೇಕು' ಎಂದರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, "ಐದು ದಿನದ ಕಾರ್ಯಕ್ರಮದಲ್ಲಿ ಮೊದಲ ದಿನದಿಂದಲೂ ಉತ್ತಮ ಆಸಕ್ತಿ ಕಂಡಿದ್ದೇನೆ. ವಿಜ್ಞಾನ, ತಂತ್ರಜ್ಞಾನದ ವಿಚಾರದಲ್ಲಿಕಾಣಿಸಿದ ಆಸಕ್ತಿ ಗಮನಿಸಿದ್ದೇನೆ. ಈ ಐದು ದಿನ ಸಾವಿರಾರು ವಿಜ್ಞಾನಿಗಳು, ಯುವಕರು ಪಾಲ್ಗೊಂಡು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಂಡಿದ್ದಾರೆ. ಜ್ಞಾನ ನಿಂತ ನೀರಾಗಬಾರದು. ವಿಜ್ಞಾನ, ತಂತ್ರಜ್ಞಾನ ಬೇರೆ ಬೇರೆ ಅಲ್ಲ. ಇವು ಒಂದಾಗಿ ಜನೋಪಕಾರಿಯಾಗಲು ಶ್ರಮಿಸಬೇಕು ಎಂದರು.
ಸಮಾರಂಭದಲ್ಲಿ ಕೋಲ್ಕತ್ತಾ ಐಎಸ್ಸಿಎ ಪ್ರಧಾನ ಅಧ್ಯಕ್ಷ ಫ್ರೊ. ಕೆ.ಎಸ್.ರಂಗಪ್ಪ, 2021ರ ಐಎಸ್ಸಿಎ ಕೋಲ್ಕತಾ ಚುನಾಯಿತ ಪ್ರಧಾನ ಅಧ್ಯಕ್ಷೆ ಪ್ರೋ. ವಿಜಯಲಕ್ಷ್ಮಿ ಸಕ್ಸೇನಾ, ಕೃಷಿ ವಿವಿ ಉಪಕುಲಪತಿ ಪ್ರೋ. ರಾಜೇಂದ್ರ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಇಸ್ಕಾ ಪ್ರಶಸ್ತಿಯ ವಿವಿಧ ವಿಭಾಗದ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಫ್ರೊ. ಕೆ.ಎಸ್. ರಂಗಪ್ಪ ಅವರು ವಿಜ್ಞಾನ ಜ್ಯೋತಿಯನ್ನು 2021ರ ಐಎಸ್ಸಿಎ ಕೋಲ್ಕತಾ ಚುನಾಯಿತ ಪ್ರಧಾನ ಅಧ್ಯಕ್ಷೆ ಪ್ರೋ. ವಿಜಯಲಕ್ಷ್ಮಿ ಸಕ್ಸೇನಾ ಅವರಿಗೆ ಹಸ್ತಾಂತರ ಮಾಡಿದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications