• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಾಕ್ ಡೌನ್ ಸಂಕಷ್ಟದಲ್ಲಿ ಮೆಕ್ಕೆಜೋಳ ಬೆಳೆಗಾರರು

|

ಚಾಮರಾಜನಗರ, ಮೇ 17: ಮೊದಲೇ ಸಂಕಷ್ಟದಲ್ಲಿರುವ ರೈತ ವರ್ಗಕ್ಕೆ ಕೊರೊನಾ ವೈರಸ್ ನಿಂದಾಗಿ ಮತ್ತಷ್ಟು ನಷ್ಟವಾಗುವ ಪರಿಸ್ಥಿತಿಗಳು ಎದುರಾಗುತ್ತಿವೆ. ಖರೀದಿದಾರರಿಲ್ಲದೇ ಸಾವಿರಾರು ಟನ್ ಮೆಕ್ಕೆಜೋಳವು ಹುಳ-ಉಪ್ಪಟ, ಹೆಗ್ಗಣಗಳ ಪಾಲಾಗುತ್ತಿದೆ.

ಕೊರೊನಾದಿಂದಾಗಿ ದೇಶಾದ್ಯಂತ ಲಾಕ್ ಡೌನ್ ನಿಯಮ ಜಾರಿಗೆ ತರಲಾಗಿತ್ತು. ಇದರಿಂದಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮೆಕ್ಕೆಜೋಳ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದಾವಣಗೆರೆಯಲ್ಲಿ ಕ್ಯಾರೆಟ್, ಬೀದರ್‌ನಲ್ಲಿ ಕಲ್ಲಂಗಡಿ ನಾಶ

1,760 ರುಪಾಯಿ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರ ತೆರೆಯುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ. 4ಜಿ ವಿನಾಯಿತಿಯಡಿ ಕೆಎಂಎಫ್ ನಿಂದ ಮೆಕ್ಕೆಜೋಳವನ್ನು ಖರೀದಿ ಮಾಡುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ.

ಗಡಿ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪನೆಗೆ ಸರ್ಕಾರದ ಮೀನಾಮೇಷದಿಂದ ರೈತರು ಕಂಗಾಲಾಗಿದ್ದಾರೆ. ಒಂದು ಕ್ವಿಂಟಲ್ ಮೆಕ್ಕೆಜೋಳಕ್ಕೆ ಒಂದು ಸಾವಿರದೊಳಗೆ ಬೆಲೆ ನಿಗದಿ ಪಡಿಸಿ ಮದ್ಯವರ್ತಿಗಳು ಖರೀದಿಸಲು ಮುಂದಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದು ರೈತನ ನೆರೆವಿಗೆ ಧಾವಿಸುವಂತೆ ಮೆಕ್ಕೆಜೋಳ ಬೆಳೆಗಾರರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

English summary
Lockdown rules were implemented nationwide due to Corona. maize growers in Hanoor taluk in Chamarajanagar district are in trouble.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X