• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಿಜೆಪಿ ಸರ್ಕಾರದ ವಿರುದ್ಧ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

|

ಮುಂಬೈ, ಫೆಬ್ರವರಿ 21: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವು ರೈತರನ್ನು ವಂಚಿಸಿದೆ, ಅಧಿಕಾರಕ್ಕೆ ಬರುವುದಕ್ಕೂ ಮುನ್ನ ನೀಡಿದ್ದ ಆಶ್ವಾಸನೆಗಳು ಹುಸಿಯಾಗಿವೆ ಎಂದು ಆರೋಪಿಸಿ ರೈತ ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ನಾಸಿಕ್ ನಿಂದ ಮುಂಬೈ ತನಕ ಸುಮಾರು 180 ಕಿ.ಮೀ ದೂರದ ತನಕ ತೆರಳಿದ ಈ ಮೆರವಣಿಗೆಯಲ್ಲಿ ಸುಮಾರು 50,000ಕ್ಕೂ ಅಧಿಕ ರೈತರು ಪಾಲ್ಗೊಂಡಿದರು.

ಅಖಿಲ ಭಾರತ ಕಿಸಾನ್ ಸಭಾ(ಎಐಕೆಎಸ್) ಆಯೋಜನೆಯ ಈ ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ರೈತ ಸಮೂಹವನ್ನು ಕಾಣಬಹುದಾಗಿದೆ.

ಮುಂಬೈಯಲ್ಲಿ 50,000 ರೈತರಿಂದ ಬೃಹತ್ ಪ್ರತಿಭಟನೆ

ಮಹಾರಾಷ್ಟ್ರದ 23 ಜಿಲ್ಲೆಗಳಿಂದ ಬಂದಿರುವ ರೈತರ ಈ ಸಮಾವೇಶ, ಪ್ರತಿಭಟನಾ ಮೆರವಣಿಗೆಗೆ ಫೆಬ್ರವರಿ 20ರಂದೇ ಚಾಲನೆ ಸಿಕ್ಕಿತ್ತು. ಕಮ್ಯೂನಿಸ್ಟ್ ನಾಯಕ ಗೋವಿಂದ್ ಪನ್ಸಾರೆ ಅವರ ನಾಲ್ಕನೇ ಪುಣ್ಯತಿಥಿಯ ಸಂದರ್ಭದಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.

11 ತಿಂಗಳ ಹಿಂದೆ ಇದೇ ರೀತಿ ಬೃಹತ್ ಜಾಥಾ ನಡೆಸಲಾಗಿತ್ತು. ಆಗ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಕನಿಷ್ಠ ಬೆಂಬಲ ಬೆಲೆ, ಸಾಲಮನ್ನಾ, ಬರಪೀಡಿತ ಪ್ರದೇಶಗಳಿಗೆ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾರ್ಚ್ 2018ರಲ್ಲಿ ಜಾಥಾ ನಡೆಸಲಾಗಿತ್ತು. ಅದರೆ, ಯಾವುದೇ ಭರವಸೆಯನ್ನು ಈಡೇಸಿರಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Accusing the BJP-led governments at the Centre and Maharashtra of betraying farmers, over 50,000 farmers embarked on a 180-km march from Nashik to Mumbai on Thursday to protest against what they termed as the "betrayal" of peasants.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X