ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರಿಗೆ ಸಿಹಿ ಸುದ್ದಿ; ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭ

|
Google Oneindia Kannada News

ಬೆಂಗಳೂರು, ಮೇ 12 : ಕರ್ನಾಟಕ ಸರ್ಕಾರ ಕೆ. ಎಂ. ಎಫ್. ಮುಖಂಡರ ಜೊತೆಗೆ ನಡೆಸಿದ ಮಾತುಕತೆ ಸಫಲವಾಗಿದೆ. ರಾಜ್ಯದ ಎಲ್ಲಾ ಪಶು ಆಹಾರ ಉತ್ಪನ್ನ ಘಟಕಗಳಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.

Recommended Video

ತುಮಕೂರಿನ ಗಾರ್ಮೆಂಟ್ಸ್‌ ಕಾರ್ಖಾನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಹಲ್ಲೆ | Tumkur | Oneindia Kannada

ಯಾವುದೇ ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ಮೆಕ್ಕೆಜೋಳ ಬೆಳೆಗಾರರು ಅದರಲ್ಲೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರು ಗರಿಷ್ಟ 50ಕ್ವಿಂಟಾಲ್‍ ವರೆಗಿನ ಉತ್ಪನ್ನವನ್ನು ಪಶು ಆಹಾರ ಉತ್ಪನ್ನ ಘಟಕ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ದೆಹಲಿಗೂ ಪಪ್ಪಾಯ ಕಳಿಸಿ ಮಾದರಿಯಾದ ಕೊಪ್ಪಳದ ರೈತ ದೆಹಲಿಗೂ ಪಪ್ಪಾಯ ಕಳಿಸಿ ಮಾದರಿಯಾದ ಕೊಪ್ಪಳದ ರೈತ

ಪ್ರತಿ ಕ್ವಿಂಟಾಲ್‍ಗೆ 2,000 ರೂ. ಇದ್ದ ಮೆಕ್ಕೆಜೋಳದ ದರ ಈಗ ಮಾರುಕಟ್ಟೆಯಲ್ಲಿ 1,200 ರೂ.ಗೆ ಬಂದು ನಿಂತಿದೆ. ಇದರಿಂದಾಗಿ ರೈತರಿಗೆ ನಷ್ಟವಾಗಲಿದೆ. ಪಶು ಆಹಾರ ಉತ್ಪನ್ನ ಘಟಕದಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳದ ಖರೀದಿ ನಡೆಯಲಿದೆ.

ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ! ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!

Maize

ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ ಮತ್ತು ಶಿವಮೊಗ್ಗದ ಕೇಂದ್ರಗಳಲ್ಲಿ ಸುಮಾರು 22,000 ಮೆಟ್ರಿಕ್ ಟನ್‍ನಷ್ಟು ಮೆಕ್ಕೆಜೋಳ ಖರೀದಿಯಾಗಲಿದೆ ಎಂದು ಅಂದಾಜಿಸಲಾಗಿದೆ.

ಕೊರೊನಾ ಲಾಕ್ ಡೌನ್; ಸಂಕಷ್ಟಕ್ಕೆ ಸಿಲುಕಿದ ಮಾವು ಬೆಳೆದ ರೈತ ಕೊರೊನಾ ಲಾಕ್ ಡೌನ್; ಸಂಕಷ್ಟಕ್ಕೆ ಸಿಲುಕಿದ ಮಾವು ಬೆಳೆದ ರೈತ

ಹಿಂಗಾರು, ಮುಂಗಾರು ಮತ್ತು ಬೇಸಿಗೆ ಹಂಗಾಮು ಸೇರಿ ರೈತರು ರಾಜ್ಯದಲ್ಲಿ 13.14 ಲಕ್ಷ ಹೆಕ್ಟೇರ್ ಭೂ ಪ್ರದೇಶದಲ್ಲಿ 4397000 ಮೆಟ್ರಿಕ್ ಟನ್‍ನಷ್ಟು ಮೆಕ್ಕೆಜೋಳ ಬೆಳೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಸಮೀಕ್ಷೆಯಂತೆ ಇನ್ನೂ ಮಾರಾಟವಾಗದೇ ಹಲವು ಟನ್‌ ಗಳಷ್ಟು ಜೋಳ ರೈತರ ಬಳಿ ಉಳಿದಿದೆ.

ಮಾರಾಟ ಮಾಡುವಾಗ ರೈತರು ತಮ್ಮ ಹೊಲದಲ್ಲಿ ಬೆಳೆದ ಕೃಷಿ ಉತ್ಪನ್ನವನ್ನು ಪಹಣಿಯಲ್ಲಿ ಗುರುತಿಸಿಕೊಂಡಿರಬೇಕು. ಒಂದು ವೇಳೆ ನಮೂದಾಗಿರದಿದ್ದರೆ ಬೆಳೆದ ಬೆಳೆಯನ್ನು ಗಮನಿಸಿ ದೃಢೀಕರಣ ಪತ್ರ ನೀಡುವಂತೆ ಸೂಚನೆ ನೀಡಲಾಗಿದೆ.

English summary
After Karnataka government talk with KMF maize buying start at Karnataka from May 1, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X