• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡದು: ಕೃಷಿ ಸಚಿವ ಬಿ.ಸಿ.ಪಾಟೀಲ್

By ಕೊಪ್ಪಳ ಪ್ರತಿನಿಧಿ
|

ಕೊಪ್ಪಳ, ಮೇ 27: "ಸರ್ಕಾರ ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ. ರೈತರನ್ನು ಎಂದಿಗೂ ಕೈಬಿಡುವುದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರ ಪರ ಹೋರಾಟ ಮಾಡಿಕೊಂಡು ಬಂದವರು. ನೀತಿ ನಿಯಮಗಳಡಿಯಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರ ಒದಗಿಸಲಾಗುವುದು. ಇದರಲ್ಲಿ ಯಾವುದೇ ಸಂಶಯ ಬೇಡ. ವಿಪಕ್ಷಗಳ ಅನಗತ್ಯ ಟೀಕೆಗೆ ಗಮನ ಕೊಡುವ ಅವಶ್ಯಕತೆಯೂ ಇಲ್ಲ" ಎಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕಳೆದ ವಾರ ರಾಜ್ಯದಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ನೀಡುವಂತಹ ಐತಿಹಾಸಿಕ ತೀರ್ಪನ್ನು ಮುಖ್ಯಮಂತ್ರಿಗಳು ಘೋಷಿಸಿದ್ದರು. 10 ಲಕ್ಷ ರೈತರಿಗೆ ತಲಾ 5 ಸಾವಿರ ರೂ.ನಂತೆ ಒಟ್ಟು 500 ಕೋಟಿ ರೂ.ಗಳ ಹಣ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸರ್ಕಾರದಿಂದ ಮಂಗಳವಾರ ಮಾರ್ಗಸೂಚಿ ಹೊರಡಿಸಲಾಗಿದೆ. ಮಾರ್ಗಸೂಚಿಗಳಂತೆ ಫಲಾನುಭವಿಗಳ ಆಯ್ಕೆ ಮಾಡಿ ಸೂಕ್ತ ಆರ್ಥಿಕ ನೆರವು ನೀಡಲಾಗುವುದು" ಎಂದು ತಿಳಿಸಿದರು.

ಸಿಎಂ 3ನೇ ಪ್ಯಾಕೇಜ್: ಮೆಕ್ಕೆಜೋಳ ಬೆಳೆಗಾರರಿಗೆ, ಆಶಾ ಕಾರ್ಯಕರ್ತೆರಿಗೆ ಬಂಪರ್

ಹೋಬಳಿ ಮಟ್ಟದಿಂದ ರಾಜ್ಯಮಟ್ಟದವರೆಗೆ ಸಮಿತಿ ರಚನೆ: ಸಹಾಯಕ ಕೃಷಿ ಅಧಿಕಾರಿ, ಕೃಷಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಿಗರನ್ನೊಳಗೊಂಡ ಹೋಬಳಿ ಮಟ್ಟದ ಸಮಿತಿ, ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನೊಳಗೊಂಡ ತಾಲೂಕು ಸಮಿತಿ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಹಾಗೂ ಉಪ ಕೃಷಿ ನಿರ್ದೇಶಕರನ್ನೊಳಗೊಂಡ ಸಮಿತಿ ಹಾಗೂ ಕೃಷಿ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಕೃಷಿ ನಿರ್ದೇಶಕರು, ಅಪರ ಕೃಷಿನಿರ್ದೇಶಕರು ಮತ್ತು ಜಂಟಿ ಕೃಷಿನಿರ್ದೇಶಕರನ್ನೊಳಗೊಂಡ ರಾಜ್ಯಮಟ್ಟದ ಸಮಿತಿ ರಚಿಸಲಾಗಿದೆ. ಸದ್ಯದಲ್ಲಿಯೇ ಮೆಕ್ಕೆಜೋಳ ರೈತರಿಗೆ ಪರಿಹಾರದ ಹಣ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಲಾಕ್ ಡೌನ್ ಸಮಯದಲ್ಲಿ ಮೂವತ್ತು ಜಿಲ್ಲೆಗಳಿಗೆ ಮೂವತ್ತು ದಿನಗಳ ಕಾಲ ಪ್ರವಾಸ ಮಾಡಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಅವಲೋಕಿಸಿ, ಕೈಗೊಂಡ ಕ್ರಮಗಳು, ಸಲಹೆ ಸೂಚನೆಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಬಹುತೇಕ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಬಿಜಾಪುರದಲ್ಲಿ ಆನ್ ಲೈನ್ ದ್ರಾಕ್ಷಿ ಮಾರಾಟ, ಕೊಪ್ಪಳ ಅಕಾಲಿಕ ಮಳೆ ಬೆಳೆ ನಷ್ಟ ಪರಿಹಾರ, ತರಕಾರಿ, ಹೂವು ಹಣ್ಣು ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಒದಗಿಸಿದೆ. ಮೆಕ್ಕೆಜೋಳ ಖರೀದಿಗೆ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. 1610 ಕೋಟಿ ರೂ.ಪ್ಯಾಕೇಜ್ ಘೋಷಿಸಿದ್ದಾರೆ ಎಂದು ತಿಳಿಸಿದರು.

English summary
"Government wont step back. we wont leave farmers. Maize farmers will be compensated under policies definitely" clarified agriculture minister BC Patil in koppala
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X