Get Updates
Get notified of breaking news, exclusive insights, and must-see stories!

Mango Mela 2023: ಮೇ 26ರಂದು ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ಅದ್ಧೂರಿ ಚಾಲನೆ, ಸಮಯದ ವಿವರ ಇಲ್ಲಿದೆ

ಮೈಸೂರು, ಮೇ, 25: ಮಾವು ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು ಹಾಗೂ ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವ ಉದ್ದೇಶದೊಂದಿಗೆ ತೋಟಗಾರಿಕೆ ಇಲಾಖೆ ಅನೇಕ ವರ್ಷಗಳಿಂದ ಮಾವು ಮೇಳ ಏರ್ಪಡಿಸುತ್ತಿದೆ. ಹಾಗೆಯೆ ಈ ಬಾರಿಯೂ ಮೇ 26ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಕೆ.ಹರೀಶ್‌ಗೌಡ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ರುದ್ರೇಶ್ ಮಾತನಾಡಿ, ನಾಳೆಯಿಂದ ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 5:30 ರವರೆಗೆ ಮಾವು ಮೇಳ ನಡೆಯಲಿದ್ದು, ಮೇಳದಲ್ಲಿ ಸಾರ್ವಜನಿಕರು ಭಾಗಿ ಆಗಬಹುದಾಗಿದೆ. ಹಾಗೆಯೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಂದ ನೇರವಾಗಿ ಸಾರ್ವಜನಿಕರಿಗೆ ರಾಸಾಯನಿಕ ಮುಕ್ತ ಮಾವಿನ ಹಣ್ಣುಗಳನ್ನು ತಲುಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಮಾವು ಮೇಳ ಆಯೋಜಿಸಲಾಗಿದೆ ಎಂದರು.

Mango Mela 2023: Mango Mela at Kuppanna Park, Mysuru on May 26, know timings details

40ಕ್ಕೂ ಹಚ್ಚು ತಳಿಯ ಹಣ್ಣುಗಳ ಮಾರಾಟ

"ಕುಪ್ಪಣ್ಣ ಪಾರ್ಕ್‌ನ ಒಂದು ಭಾಗದಲ್ಲಿ 24 ಮಳಿಗೆಗಳನ್ನು ನಿರ್ಮಿಸಲಾಗಿದೆ. ಮಾನಕೂರ, ಆಮ್ಲೆಟ್, ಚೈತ್ರಪೈರಿ, ಸೇಲಂ, ಶಿರಸಿ ಲೋಕಲ್, ರತ್ನಗಿರಿ (ಆಲನ್ಸ್), ಬಾದಾಮಿ, ರಸಪುರಿ, ಮಲಗೋವ, ಮಲ್ಲಿಕಾ, ಸೇಂದೂರಾ, ತೋತಾಪುರಿ, ಬಾಗನಪಲ್ಲಿ, ದಶೇರಿ, ಕಾಲಾಪ ಹಾಡ್, ಕೇಶರ್, ಸಕ್ಕರೆ ಗುತ್ತಿ, ಅಮ್ರಪಾಲಿ, ದಿಲ್‌ಪಸಂದ್ ಸೇರಿದಂತೆ 40ಕ್ಕೂ ಹಚ್ಚು ತಳಿಯ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ," ಎಂದರು.

ಅಲ್ಲದೆ ಈ ಬಾರಿ ಶೇಕಡಾ 50ರಷ್ಟು ಇಳುವರಿ ಕಡಿಮೆ ಆಗಿರುವುದರಿಂದ ಮಾರುಕಟ್ಟೆಯಲ್ಲಿ ಹೆಚ್ಚಿನ ದರವಿದೆ. ರೈತರಿಗೆ, ಸಾರ್ವಜನಿಕರಿಗೆ ಅನ್ಯಾಯ ಆಗದಂತೆ ದರ ನಿಗದಿ ಮಾಡಲಾಗುತ್ತದೆ ಎಂದರು.

"ತೋಟಗಾರಿಕೆ ಬೆಳೆಗೆ ಇಲಾಖೆಯಿಂದ ಪ್ರೋತ್ಸಾಹ ನೀಡಲಾಗುತ್ತಿದ್ದು, ರೈತರಿಗೆ ರಿಯಾಯಿತಿ ದರದಲ್ಲಿ ತೆಂಗಿನ ಗಿಡಗಳನ್ನು ನೀಡಲಾಗುತ್ತಿದೆ. ಒಂದೂವರೆ ಲಕ್ಷಕ್ಕೂ ಹೆಚ್ಚು ತೆಂಗಿನ ಗಿಡಗಳು ಲಭ್ಯವಿದ್ದು, ಇವಗಳನ್ನು ರೈತರು ಖರೀದಿಸಬಹುದು. ಜೊತೆಗೆ ತಾಳೆ ಬೆಳೆಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದು," ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ರುದ್ರೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಶಿಧರ್, ಸಹಾಯಕ ನಿರ್ದೇಶಕರಾದ ಅಶ್ವಿನಿ, ಶಬೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಗುಣಮಟ್ಟದ ಹಣ್ಣುಗಳಿಗೆ ಹೆಚ್ಚಿನ ಆದ್ಯತೆ

ಗುಣಮಟ್ಟದ ಹಣ್ಣುಗಳನ್ನು ಗ್ರಾಹಕರಿಗೆ ತಲುಪಿಸುವ ವೇದಿಕೆ ಆಗಿರುವ ಮಾವಿನ ಮೇಳದಲ್ಲಿ 20 ಮಳಿಗೆಗಳಲ್ಲಿ ಮಾವಿನಹಣ್ಣು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಇಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮೈಸೂರು ಜಿಲ್ಲೆಯ ಮಾವು ಬೆಳೆಗಾರರು ಈ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಇಲ್ಲಿ ಮಾರಾಟಕ್ಕಿಡುವ ಮಾವಿನ ಹಣ್ಣುಗಳಲ್ಲಿ ರಾಸಾಯನಿಕ ವಸ್ತು ಬಳಸಿ ಹಣ್ಣು ಮಾಡಲಾಗಿದೆಯೇ ಎಂದು ಪರಿಶೀಲನೆ ನಡೆಸಲಾಗುತ್ತದೆ.

ಮೇಳಕ್ಕೆ ಬರುವ ಎಲ್ಲ ರೈತರಿಗೂ ಮೊದಲೇ ಎಚ್ಚರಿಕೆ ನೀಡಲಾಗಿದ್ದು, ನೈಸರ್ಗಿಕ ಪದ್ಧತಿಯಲ್ಲಿ ಮಾಗಿಸಿದ ಹಣ್ಣುಗಳನ್ನಷ್ಟೇ ತರುವಂತೆ ಸೂಚನೆ ನೀಡಲಾಗಿದೆ. ರಾಸಾಯನಿಕ ವಸ್ತು ಬಳಸಿದ್ದರೆ ಅದನ್ನು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಸಿ ಪತ್ತೆಹಚ್ಚಲಿದ್ದಾರೆ.

ಮಾವಿನ ಕಾಯಿಯನ್ನು ಬಹುಬೇಗ ಹಣ್ಣು ಮಾಡಲು ಕ್ಯಾಲ್ಸಿಯಂ ಕಾರ್ಬೆಟ್ ಬಳಸಲಾಗುತ್ತದೆ. ಇದು ಆರೋಗ್ಯದ ದೃಷ್ಟಿಯಿಂದ ಹಾನಿಕರವಾಗಿದ್ದು, ಇದನ್ನು ತಡೆಯುವ ಕೆಲಸವೂ ನಡೆಯುತ್ತಿದೆ. ಈ ಬಗ್ಗೆ ದೂರು ಕೇಳಿಬಂದಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಸಾಯನಿಕ ವಸ್ತು ಬಳಕೆ ಮಾಡಿದ ಹಣ್ಣುಗಳ ಮಾರಾಟವನ್ನು ಮಾವಿನ ಮೇಳದಲ್ಲಿ ನಿರ್ಬಂಧಿಸಲಾಗಿದೆ.

ರಾಸಾಯನಿಕ ಬಳಸಿ ಮಾಡಿರುವ ಹಣ್ಣುಗಳು ನೋಡಲು ಹೆಚ್ಚು ಆಕರ್ಷಕವಾಗಿ, ಗಾಢ ಬಣ್ಣದಿಂದ ಕೂಡಿರುತ್ತವೆ. ಹೀಗಾಗಿ ಅವುಗಳನ್ನು ಮೇಲ್ನೋಟದಿಂದಲೇ ಗುರುತಿಸಬಹುದಾಗಿದೆ. ಇಂತಹ ಹಣ್ಣುಗಳಿಗೆ ಅವಕಾಶವಿಲ್ಲ ಎಂದು ಸೂಚಿಸಲಾಗಿದೆ. ಹಾಗೆಯೆ ಮಾವಿನ ಮೇಳದಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುವುದನ್ನು ತಪ್ಪಿಸುವ ಸಲುವಾಗಿ ಹಾಪ್‌ಕಾಮ್ಸ್, ಎಪಿಎಂಸಿಯಲ್ಲಿರುವ ಬೆಲೆಗೆ ಅನುಗುಣವಾಗಿ ಹಣ್ಣುಗಳನ್ನು ಮಾರಾಟ ಮಾಡಲು ಹಣ್ಣುಗಳಬೆ ಲೆಯನ್ನು ನಿಗದಿಪಡಿಸಲಾಗಿದೆ.

ಪ್ರತಿದಿನ ಮಾವಿನ ಹಣ್ಣಿನ ಬೆಲೆ ನಿಗದಿ ಮಾಡಿ, ಮಳಿಗೆ ಮುಂದೆ ದರಗಳ ಫಲಕ ಹಾಕುವುದು ಕಡ್ಡಾಯವಾಗಿದೆ. ಮಾವಿನ ಮೇಳದ ಜೊತೆಗೆ ರೈತರಿಗೆ ಮತ್ತು ಗಿಡಗಳನ್ನು ನೆಟ್ಟು ಬೆಳೆಸುವ ಆಸಕ್ತಿ ಹೊಂದಿದವರಿಗಾಗಿ ಮಾವು ಮೇಳದಲ್ಲಿ ವಿವಿಧ ಸಸ್ಯಗಳ ಮಾರಾಟಕ್ಕೂ ವ್ಯವಸ್ಥೆ ಮಾಡಲಾಗಿದೆ. ತೋಟಗಾರಿಕಾ ಇಲಾಖೆಯ ನರ್ಸರಿಯಲ್ಲಿರುವ ತೆಂಗಿನಗಿಡ, ಮಾವು, ಹಲಸು, ಸೀಬೆ, ನೇರಳೆ, ಜಂಬುನೇರಳೆ, ನುಗ್ಗೆ ಸೇರಿದಂತೆ ವಿವಿಧ ಹಣ್ಣು ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+