ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಜಂತರ್‌ ಮಂತರ್‌ನಲ್ಲಿ ರೈತರ ಬೃಹತ್‌ ಪ್ರತಿಭಟನೆ

|
Google Oneindia Kannada News

ನವದೆಹಲಿ, ಆಗಸ್ಟ್‌ 22: ಸಂಯುಕ್ತ ಕಿಸಾನ್ ಮೋರ್ಚಾದಿಂದ ಸೋಮವಾರ ದೆಹಲಿಯ ಜಂತರ್ ಮಂತರ್‌ನಲ್ಲಿ 'ಮಹಾಪಂಚಾಯತ್' ಪ್ರತಿಭಟನೆಗೆ ಕರೆ ನೀಡಿದ್ದು, ವಿವಿಧ ರಾಜ್ಯಗಳ ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಪ್ರತಿಭಟನೆಗೆ ಅನುಮತಿ ನಿರಾಕರಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಲಖೀಂಪುರ ಖೇರಿಯ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವುದು ಮತ್ತು ಜೈಲಿನಿಂದ ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆಗೆಗೆ ಕರೆ ನೀಡಲಾಗಿದೆ. ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಅವರ ಪುತ್ರ ಆಶಿಶ್ ಅವರನ್ನು ಬಂಧಿಸುವಂತೆ ರೈತರು ಒತ್ತಾಯಿಸುತ್ತಿದ್ದಾರೆ.

ದೆಹಲಿಗೆ ಬರುತ್ತಿದ್ದ ರೈತ ಮುಖಂಡ ಟಿಕಾಯತ್ ಪೊಲೀಸ್ ವಶಕ್ಕೆದೆಹಲಿಗೆ ಬರುತ್ತಿದ್ದ ರೈತ ಮುಖಂಡ ಟಿಕಾಯತ್ ಪೊಲೀಸ್ ವಶಕ್ಕೆ

ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವನ್ನು ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಲು ಕಾನೂನು ರೂಪಿಸುವಂತೆ ರೈತರು ಒತ್ತಾಯಿಸಲಿದ್ದಾರೆ. ಈಗಾಗಲೇ ರಾಷ್ಟ್ರ ರಾಜಧಾನಿಯಾದ್ಯಂತ ಸೆಕ್ಷನ್ 144 ವಿಧಿಸಿರುವುದರಿಂದ ಸಭೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಈಗಾಗಲೇ ಹರಿಯಾಣದ ಟಿಕ್ರಿ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಅಹಿತಕರ ಘಟನೆಯನ್ನು ತಪ್ಪಿಸಲು ಹೊರ ಜಿಲ್ಲೆಯ ಟಿಕ್ರಿ ಗಡಿಯಲ್ಲಿ ಪ್ರಮುಖ ಸ್ಥಳಗಳು ರೈಲ್ವೆ ಹಳಿಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸ್ಥಳೀಯ ಪೊಲೀಸರು ಮತ್ತು ಹೊರಗಿನ ಪಡೆಗಳನ್ನು ಸಮರ್ಪಕವಾಗಿ ನಿಯೋಜಿಸಲಾಗುವುದು. ಇದಲ್ಲದೆ, ಸಂಪೂರ್ಣ ಪುರಾವೆ ಕಾನೂನು ಮತ್ತು ಸುವ್ಯವಸ್ಥೆ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದೆ. ಈ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಹೊರ ದೆಹಲಿ) ಸಮೀರ್ ಶರ್ಮಾ ಹೇಳಿದ್ದಾರೆ.

ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ

ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ

ದೆಹಲಿ ಟ್ರಾಫಿಕ್ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದು ಸೋಮವಾರ ಜಂತರ್ ಮಂತರ್‌ನಲ್ಲಿ ಸುಮಾರು 4,000-5,000 ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ. ಇದರಿಂದಾಗಿ ಟಾಲ್‌ಸ್ಟಾಯ್ ಮತ್ತು ಸಂಸದ್ ಮಾರ್ಗದಲ್ಲಿ ಸಂಚಾರ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕನ್ನಾಟ್ ಪ್ಲೇಸ್‌ನಿಂದ ವಿಂಡ್ಸರ್ ಪ್ಲೇಸ್, ಅಶೋಕ ರಸ್ತೆ, ಜನಪಥ್, ಬಾಬಾ ಖಡಕ್ ಸಿಂಗ್ ಮಾರ್ಗ ಮತ್ತು ಪಂಡಿತ್ ಪಂತ್ ಮಾರ್ಗದ ಕಡೆಗೆ ಹೋಗುವ ರಸ್ತೆಗಳನ್ನು ತಪ್ಪಿಸಲು ಸಂಚಾರ ಪೊಲೀಸರು ಜನರಿಗೆ ಸೂಚಿಸಿದ್ದಾರೆ.

ಪಿಎಂ ಕಿಸಾನ್ ಇ-ಕೆವೈಸಿ, ರೈತರಿಗೆ ಆ. 31ರ ತನಕ ಗಡುವುಪಿಎಂ ಕಿಸಾನ್ ಇ-ಕೆವೈಸಿ, ರೈತರಿಗೆ ಆ. 31ರ ತನಕ ಗಡುವು

ಕೇಂದ್ರದ ಕುಮ್ಮಕ್ಕಿನಂತೆ ಪೊಲೀಸರ ವರ್ತನೆ

ಕೇಂದ್ರದ ಕುಮ್ಮಕ್ಕಿನಂತೆ ಪೊಲೀಸರ ವರ್ತನೆ

ಭಾನುವಾರ, ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ರೈತ ನಾಯಕ ರಾಕೇಶ್ ಟಿಕಾಯತ್‌ ಅವರನ್ನು ಗಾಜಿಪುರ ಗಡಿಯಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್‌ ಅವರು, ದೆಹಲಿ ಪೊಲೀಸರು ಕೇಂದ್ರದ ಕುಮ್ಮಕ್ಕಿನಂತೆ ಕೆಲಸ ಮಾಡುತ್ತಿದ್ದಾರೆ ಮತ್ತು ನಿರುದ್ಯೋಗಿ ಯುವಕರನ್ನು ಭೇಟಿ ಮಾಡಲು ಅವಕಾಶ ನೀಡಲಿಲ್ಲ ಎಂದು ಅವರು ಆರೋಪಿಸಿದರು.

ಪೈಕಿ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯ

ಪೈಕಿ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯ

ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಪದಚ್ಯುತಗೊಳಿಸುವುದು ಮತ್ತು ಇತರ ಬೇಡಿಕೆಗಳ ಪೈಕಿ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಒತ್ತಾಯಿಸಿ ಮಾಡುತ್ತಿದ್ದ ರೈತರ ಪ್ರತಿಭಟನೆಯನ್ನು ಶನಿವಾರದಂದು ಲಖಿಂಪುರ ಖೇರಿಯಲ್ಲಿ ಜಿಲ್ಲಾ ಉನ್ನತ ಅಧಿಕಾರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿದ ನಂತರ ಹಿಂಪಡೆಯಲಾಯಿತು.

ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರ

ಅಕ್ಟೋಬರ್ 3 ರಂದು ಲಖಿಂಪುರ ಖೇರಿ ಹಿಂಸಾಚಾರ

ರೈತರನ್ನು ಉದ್ದೇಶಿಸಿ ಮಾತನಾಡಿದ ರಾಕೇಶ್ ಟಿಕಾಯತ್‌, ಸೆಪ್ಟೆಂಬರ್ 6 ರಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ (ಎಸ್‌ಕೆಎಂ) ಭವಿಷ್ಯದ ಕಾರ್ಯತಂತ್ರವನ್ನು ರೂಪಿಸಲಾಗುವುದು. ಲಖಿಂಪುರ ಖೇರಿಯನ್ನು ಲೋಕಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಮಿಶ್ರಾ ಪ್ರತಿನಿಧಿಸುತ್ತಾರೆ. ಕಳೆದ ವರ್ಷ ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರು ಸೇರಿದಂತೆ ಎಂಟು ಜನರ ಹತ್ಯೆಯಲ್ಲಿ ಅವರ ಪುತ್ರ ಆಶಿಶ್ ಮಿಶ್ರಾ ಆರೋಪಿಯಾಗಿದ್ದಾರೆ.

English summary
Samyukta Kisan Morcha has called for a 'Mahapanchayat' protest at Delhi's Jantar Mantar on Monday, in which farmers from various states are expected to participate. But the Delhi Police said that they refused permission for the protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X