ರೈತರು ಕರೆ ನೀಡಿದ್ದ ದಾವಣಗೆರೆ ಬಂದ್ ವಾಪಸ್
ದಾವಣಗೆರೆ, ಮೇ 14 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಕರೆ ನೀಡಿದ್ದ ದಾವಣಗೆರೆ ಬಂದ್ ಅನ್ನು ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿದ ಬಳಿಕ ರೈತರು ನಿರ್ಧಾರವನ್ನು ಕೈಗೊಂಡಿದ್ದಾರೆ.
ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ದಾವಣಗೆರೆಯ ರೈತರ ನಿಯೋಗ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ನಂತರ ಮಾತನಾಡಿದ ಹುಚ್ಚವ್ವನಹಳ್ಳಿ ಮಂಜುನಾಥ್ ಮೇ 15ರ ಶುಕ್ರವಾರ ಕರೆ ನೀಡಿದ್ದ ದಾವಣಗೆರೆ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದರು. [ಚಿತ್ರಗಳು : ಕೋಲಾರದಲ್ಲಿ ಬೆಳೆಹಾನಿ]

ಬೇಡಿಕೆಗಳೇನು? : ಭತ್ತಕ್ಕೆ ಬೆಂಬಲ ಬೆಲೆ ಹೆಚ್ಚಳ ಮಾಡಬೇಕು, ಮೆಕ್ಕೆಜೋಳ ಬಿತ್ತನೆ ಬೀಜ ಖರೀದಿಗೆ ರಿಯಾಯಿತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಂದ್‌ಗೆ ಕರೆ ನೀಡಲಾಗಿತ್ತು. [ನೇಪಾಳದ ಸಂತ್ರಸ್ತರಿಗೆ ಮಾಗಡಿ ರೈತ ತೋರಿದ ಮಾನವೀಯತೆ]
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೈತರು, ಕೇಂದ್ರ ಸರ್ಕಾರ ಭತ್ತಕ್ಕೆ 1, 410 ರೂ. ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರ 1 ಸಾವಿರ ರೂ. ಬೆಂಬಲ ಬೆಲೆ ಕೊಡಬೇಕು ಹಾಗೂ ಮೆಕ್ಕೆಜೋಳ ಬಿತ್ತನೆ ಬೀಜಕ್ಕೆ ಕೆಜಿಗೆ 50 ರೂ. ರಿಯಾಯಿತಿ ನೀಡುವಂತೆ ಮನವಿ ಸಲ್ಲಿಸಿದರು. [ಕೊಪ್ಪಳ ರೈತರ ಬಾಯಲ್ಲಿ ಪಪ್ಪಾಯಿ ಜಪ!]
ರೈತರ ಮನವಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಬೆಂಬಲ ಬೆಲೆ ನೀಡುವುದರಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ. ರಾಜ್ಯ ಸರ್ಕಾರದಿಂದ ಸೂಕ್ತ ಬೆಂಬಲ ಬೆಲೆ ಕೊಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.












Click it and Unblock the Notifications