ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 11,750 ರೂಪಾಯಿ ಕನಿಷ್ಠ ಬೆಂಬಲ ಬೆಲೆ: ಹೆಸರು ನೋಂದಾಯಿಸಲು ಮಂಡ್ಯ ಡಿಸಿ ಕರೆ
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಸರ್ಕಾರ 11,750 ರೂಪಾಯಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಸಲಹೆ ನೀಡಿದರು.
ಮಂಡ್ಯ, ಫೆಬ್ರವರಿ, 13: ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಸರ್ಕಾರ 11,750 ರೂಪಾಯಿ ಕನಿಷ್ಠ ಬೆಂಬಲ ಬೆಲೆ ಘೋಷಿಸಿದ್ದು, ಅರ್ಹ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಚ್.ಎನ್. ಗೋಪಾಲಕೃಷ್ಣ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತಾನಾಡಿದರು. ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದಾರೆ. ನಾಗಮಂಗಲ ತಾಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎಪಿಎಂಸಿ ಆವರಣದಲ್ಲಿ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.
ರೈತರ ನೋಂದಣಿ ಪ್ರಕ್ರಿಯೆಯ ವಿವರ
ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಹೆಕ್ಟೇರ್‌ಗೆ 6 ಕ್ವಿಂಟಾಲ್‌ನಂತೆ ಖರೀದಿಸಬೇಕು. ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳವರೆಗೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ನೋಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಯನ್ನು ನೇಮಕ ಮಾಡಲು ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿಯನ್ನು ಪ್ರಾರಂಭಿಸುವುದು ಸೂಕ್ತ ಎಂದರು.

ಅಧಿಕಾರಿಗಳು ಹೇಳಿದ್ದೇನು?
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖವಾಗಿ ಕೆ.ಆರ್ ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿವೆ. ಜಿಲ್ಲೆಯಲ್ಲಿ ಒಟ್ಟು 68,466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿದ್ದು, ಒಟ್ಟು ಉತ್ಪಾದನೆ 5,096 ಲಕ್ಷ ಕಾಯಿಕಳಾಗಿರುತ್ತವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಎಪಿಎಂಸಿ ಉಪ ನಿರ್ದೆಶಕ ಕೆ.ಶ್ರೀನಿವಾಸ ರೆಡ್ಡಿ, ಕೆ.ಆರ್ ಪೇಟೆ ಎಪಿಎಂಸಿ ಕಾರ್ಯದರ್ಶಿ ರಫಿಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications