ರೈತರಿಂದ ಶೇಂಗಾ ಖರೀದಿ: ಬೆಂಬಲ ಬೆಲೆ ಘೋಷಣೆ, ಎಷ್ಟು ಕ್ವಿಂಟಾಲ್ ಖರೀದಿ?

ದಾವಣಗೆರೆ, ನವೆಂಬರ್ 03: ಶೇಂಗಾ ಬೆಳೆದಿರುವ ರೈತರಿಗೆ ಸಿಹಿಸುದ್ದಿ ಇದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಮಾಡುವ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 202425ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರಸ್ವಾಮಿ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಟಾಸ್ಕ್ ಪೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರೆಗೆ 3 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್ಎಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 6,783ಗಳಂತೆ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದರು.

Minimum Support Price For Groundnut Purchase Announced For Farmers

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಅನುಸಾರ ನ್ಯಾಫೆಡ್ ಸಂಸ್ಥೆಯನ್ನು ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ, ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಖರೀದಿಸಿದ ಶೇಂಗಾವನ್ನು ದಾಸ್ತಾನು ಮಾಡಲು ಜಿಲ್ಲೆಯಲ್ಲಿರುವ ರಾಜ್ಯ ಹಾಗೂ ಕೇಂದ್ರ ಉಗ್ರಾಣಗಳಲ್ಲಿ ಸ್ಥಳ ಕಾಯ್ದಿರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ರೈತರ ಖಾತೆಗೆ ಹಣ ಜಮೆ: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಮಾಡುವ ಮೊದಲು ರೈತರ ನೋಂದಣಿಗೆ 45 ದಿನಗಳ ಕಾಲಾವಧಿಯನ್ನು, ಖರೀದಿಗೆ 90 ಅವಧಿಯನ್ನು ನಿಗದಿಪಡಿಸಲಾಗಿದೆ. ರೈತರು ಫ್ರೂಟ್ಸ್ ಐಡಿಯೊಂದಿಗೆ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ದಾವಣಗೆರೆ, ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ, ಜಗಳೂರು ಈ ಸ್ಥಳಗಳಲ್ಲಿನ ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಂಡು ಶೇಂಗಾ ಮಾರಾಟ ಮಾಡಬಹುದು.

ಶೇಂಗಾ ಮಾರಾಟ ಮಾಡಿದ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಹಣವನ್ನು ನೀಡಲಾಗುತ್ತದೆ. ಮಾರಾಟ ಮಾಡಿದ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವಂತೆ ಪಾವತಿ ಮಾಡಲಾಗುತ್ತದೆ.

ಪ್ರತಿನಿತ್ಯ ಖರೀದಿಸುವ ಪ್ರಗತಿಯ ವಿವರವನ್ನು ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇ-ಮೇಲ್ ಮೂಲಕ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗುಣಮಟ್ಟ ಪರಿಶೀಲನೆಗಾಗಿ ಗ್ರೇಡರ್‌ಗಳನ್ನು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ನೇಮಕ ಮಾಡಲು ಹಾಗೂ ಸಿಬ್ಬಂದಿಗಳಿಗೆ ಎಫ್ಎಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಮಧ್ಯವರ್ತಿಗಳ ಹಾವಳಿ ತಡೆಯಲು ಸರ್ಕಾರ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ಶೇಂಗಾ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಖರೀದಿ ಮಾಡುತ್ತದೆ. ಇದಕ್ಕಾಗಿ ರೈತರು ಮೊದಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯನ್ನು ಮಾಡಿಸಿರಬೇಕು. ರೈತರಿಂದ ಬೆಳೆ ಖರೀದಿಗೆ ಸಂಬಂಧಿಸಿದಂತೆ ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಮೊದಲು ಸರ್ಕಾರ ರೈತರಿಂದ ಖರೀದಿ ಮಾಡುವ ಬೆಂಬಲ ಬೆಲೆಯನ್ನು ನಿಗದಿ ಮಾಡುತ್ತದೆ. ಖರೀದಿಗೆ ಸಂಬಂಧಿಸಿದಂತೆ ಈಗಾಗಲೇ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಿಂದ ರೈತರ ಮಾಹಿತಿ ಪಡೆಯಲಾಗುತ್ತದೆ. ಆದ್ದರಿಂದ ಬೆಳೆ ಮಾರಾಟ ಮಾಡಬಯಸುವ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಪ್ಪದೇ ನೋಂದಣಿ ಮಾಡಿಸಬೇಕು. ನೋಂದಣಿ ಮಾಡಿಸಿದ ರೈತರ ಬೆಳೆಯನ್ನು ಮಾತ್ರ ಬೆಂಬಲ ಬೆಲೆಯಡಿ ಖರೀದಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+