2024-25ನೇ ಸಾಲಿನ ಭತ್ತ, ರಾಗಿ ಬೆಂಬಲ ಬೆಲೆ ನಿಗದಿ: ಇಲ್ಲಿದೆ ವಿವರ

ಮೈಸೂರು, ನವೆಂಬರ್‌ 11:2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ರಾಗಿ, ಭತ್ತ, ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 2300, ರೂ., ರಾಗಿ ಕ್ವಿಂಟಾಲ್‌ಗೆ 4290 ರೂಪಾಯಿ ನಿಗದಿ ಮಾಡಲಾಗಿದೆ. ಈ ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ. ಸರ್ಕಾರದ ಮಾನದಂಡಗಳ ಅನ್ವಯ ಎಫ್ಎಕ್ಯು ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು ಎಂದು ತಿಳಿಸಿದರು.

Minimum Support Prices Fixed For For paddy And Millet For The Year 2024-25

ಸೂಕ್ತ ದಾಸ್ತಾನಿಗಾಗಿ ಭತ್ತ, ರಾಗಿ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟ ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತ, ರಾಗಿಯನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ನೀಡಿದರು. ಜೊತೆಗೆ ಭತ್ತ, ರಾಗಿ ಖರೀದಿ ನೋಂದಣಿ ಪ್ರಾರಂಭವಾಗುವ ದಿನಾಂಕದ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡಬೇಕು. ರೈತರು, ನೊಂದಣಿ ಕೇಂದ್ರಗಳು, ಭತ, ರಾಗಿ ಖರೀದಿ ಕೇಂದ್ರಗಳ ಕುರಿತು ವಿವರ ನೀಡಬೇಕು ಎಂದು ತಿಳಿಸಿದರು.

ಇನ್ನು ಭತ್ತ, ರಾಗಿ ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳೆದ ಭತ್ತ, ರಾಗಿಯನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ, ರಾಗಿ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೊಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ತಿಳಿಸಿದರು.

Minimum Support Prices Fixed For For paddy And Millet For The Year 2024-25

ಇಂದಿನ ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರವಿ, ವಾರ್ತಾಧಿಕಾರಿ ಹರೀಶ್, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು, ಸೇರಿದಂತೆ ಇತರರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+