ಮುಂಗಾರು ಋತು; ವಿವಿಧ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ಬೆಂಗಳೂರು, ನವೆಂಬರ್ 23: ಸರ್ಕಾರ 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ.

ರೈತರಿಗೆ ಸಹಾಯಕವಾಗುವಂತೆ ಮುಂಗಾರು ಬೆಳೆಗಳ ಖರೀದಿಗೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳಿಗೆ ಖರೀದಿ ಏಜೆನ್ಸಿಯನ್ನು ಸಹ ನೇಮಕ ಮಾಡಲಾಗುತ್ತಿದೆ. ಬೆಳೆಗಳ ಕಟಾವು ಆರಂಭವಾಗಿದ್ದು, ನವೆಂಬರ್ ಅಂತ್ಯ, ಡಿಸೆಂಬರ್‌ನಲ್ಲಿ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ.

Minimum Support Prices For Monsoon Crops 2023 Announced

ಬೆಳೆಗಳ ವಿವರ; ಭತ್ತ (ಸಾಮಾನ್ಯ) ಪ್ರತಿ ಕ್ವಿಂಟಾಲ್‌ಗೆ ದರ ರೂ. 2183, ಭತ್ತ (ಗ್ರೇಡ್-ಎ) ಪ್ರತಿ ಕ್ವಿಂಟಾಲ್‌ಗೆ ದರ ರೂ.2203, ಬಿಳಿಜೋಳ (ಹೈಬ್ರಿಡ್) ಪ್ರತಿ ಕ್ವಿಂಟಾಲ್‌ಗೆ ದರ ರೂ. 3180, ಬಿಳಿಜೋಳ ಮಾಲ್ದಂಡಿ ಪ್ರತಿ ಕ್ವಿಂಟಾಲ್‌ಗೆ ದರ ರೂ. 3225, ರಾಗಿ ಪ್ರತಿ ಕ್ವಿಂಟಾಲ್‌ಗೆ ದರ ರೂ. 3846ರಂತೆ ಸರ್ಕಾರ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.

ಮುಂಗಾರು ಬೆಳೆ ಖರೀದಿಗೆ ಸಂಬಂಧಿಸಿದಂತೆ ಖರೀದಿ ಏಜೆನ್ಸಿ ನೇಮಕ ಮಾಡಲಾಗಿದೆ. ಬೆಳೆಗಳ ಖರೀದಿಗೆ ರೈತರಿಂದ ನೋಂದಣಿ ಕಾರ್ಯವನ್ನು ವಿವಿಧ ಜಿಲ್ಲೆಗಳಲ್ಲಿ ಆರಂಭಿಸಲಾಗಿದೆ. ರೈತರು ನಿಗದಿತ ದಿನಾಂಕದೊಳಗೆ ಖರೀದಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕೇಂದ್ರ ಸರ್ಕಾರವು ನಿಗದಿಪಡಿಸಿದ ಎಫ್‌ಎಕ್ಯೂ ಗುಣಮಟ್ಟದ ಭತ್ತವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು ಹಾಗೂ ಭತ್ತವನ್ನು ಸರಬರಾಜು ಮಾಡಿದ ರೈತರಿಗೆ 15 ದಿನಗಳೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಹಣವನ್ನು ನೇರನಗದು ವರ್ಗಾವಣೆ (ಡಿಬಿಟಿ) ಮುಖಾಂತರ ಮಾಡಲಾಗುತ್ತದೆ.

ಜಿಲ್ಲೆಗಳಲ್ಲಿ ನಿಗದಿತ ಸ್ಥಳದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಪ್ರತಿ ಖರೀದಿ ಕೇಂದ್ರಗಳಿಗೆ ನುರಿತ ಗುಣಮಟ್ಟ ಪರೀಕ್ಷಕರನ್ನು ನೇಮಿಸಲಾಗುತ್ತದೆ ಹಾಗೂ ಗುಣಮಟ್ಟ ಪರಿಶೀಲನೆ ಹೆಸರಲ್ಲಿ ರೈತರಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರವಹಿಸಲಾಗುತ್ತದೆ.

ಬೆಂಬಲ ಬೆಲೆಗಳ ಬಗ್ಗೆ, ಖರೀದಿಯ ಬಗ್ಗೆ ಖರೀದಿ ಏಜೆನ್ಸಿಗಳು, ಕೃಷಿ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆಗಳು ಕರಪತ್ರ, ಡಂಗೂರ, ಬ್ಯಾನರ್ ಮೂಲಕ ಪ್ರಚಾರ ನೀಡಿ ರೈತರಿಗೆ ಮಾಹಿತಿ ನೀಡಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ.

ಖರೀದಿ ಕೇಂದ್ರದ ಕೊಠಡಿ, ಖರೀದಿ ಪ್ರಾಂಗಣ, ಬೆಳಕು, ಕುಡಿಯುವ ನೀರು, ನೆರಳು, ರೈತ ವಿಶ್ರಾಂತಿ, ತುರ್ತು ಟಾರ್ಪಲಿನ್, ರಕ್ಷಣಾ ವ್ಯವಸ್ಥೆ ಮಾಡಬೇಕು. ಗಾಳಿ, ಮಳೆ, ಬೆಳಕು ಮುಂತಾದ ಪ್ರಕೃತಿ ಅಥವಾ ಮಾನವ ವಿಕೋಪಗಳಿಂದ ಕೃಷಿ ಉತ್ಪನ್ನ ರಕ್ಷಿಸಲು ಅವಶ್ಯವಿರುವ ಹೊದಿಕೆ, ಹಾಸುಗಳು, ರಕ್ಷಣಾ ಸಾಮಗ್ರಿಗಳನ್ನು ಹಾಗೂ ಸ್ವಂತ ಕೇಂದ್ರಗಳಲ್ಲಿ ಎಲ್ಲಾ ಮೂಲ ಸೌಕರ್ಯಗಳನ್ನು ಮಾಡುವ ಜವಾಬ್ದಾರಿಯನ್ನು ಅಧಿಕಾರಿಗಳು ವಹಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕೃಷಿ ಇಲಾಖೆಯಿಂದ ಈಗಾಗಲೇ ಜಾರಿಗೊಳಿಸಿರುವ ಫ್ರೂಟ್ಸ್ ದತ್ತಾಂಶದಲ್ಲಿರುವ ರೈತರ ಫ್ರೂಟ್ಸ್ ಐಡಿ ಮಾಹಿತಿಯನ್ನು ಪಡೆದು, ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ಮಾಹಿತಿಗಳನ್ವಯ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಿ ಬೆಳೆಗಳನ್ನು ಮಾರಾಟ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+