ರಾಮನಗರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಸಹಕಾರ ಸಚಿವ

ರಾಮನಗರ, ಏಪ್ರಿಲ್ 19: ರಾಮನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಇಂದು ಬೆಳ್ಳಂಬೆಳಿಗ್ಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಮಾರುಕಟ್ಟೆ ಪರಿಶೀಲನೆ ನಡೆಸಿದರು.

ತರಕಾರಿ ಹಾಗೂ ಹಣ್ಣುಗಳ ಬೆಲೆಗಳ ಬಗ್ಗೆ ಮಾಹಿತಿಯನ್ನು ಪಡೆದು ಮಾರಾಟಗಾರರ ಸಮಸ್ಯೆಗಳನ್ನು ಆಲಿಸಿದ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಅನೂಪ್ ಶೆಟ್ಟಿ, ಕೃಷಿ ಇಲಾಖೆ ಅಧಿಕಾರಿಗಳ ಸಾಥ್ ನೀಡಿದ್ದಾರೆ.

Minister ST Somashekhar Visit To Ramanagara APMC Market

ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ರೈತರು ಮತ್ತು ವರ್ತಕರಿಗೆ ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ನೀಡುವ ನಿಟ್ಟಿನಲ್ಲಿ ಮಾರುಕಟ್ಟೆ ಪ್ರವೇಶ ದ್ವಾರದಲ್ಲಿ ಅಳವಡಿಸಿರುವ ಕೊರೊನಾ ವೈರಸ್ ಸೋಂಕು ನಿವಾರಣ ಟನಲ್ ನ್ನು ಬಳಸದೇ ಸಚಿವರು ಕಾರಿನಲ್ಲೇ ಮಾರುಕಟ್ಟೆ ಪ್ರವೇಶಿಸಿದರು.

Minister ST Somashekhar Visit To Ramanagara APMC Market

ಸಾಮಾಜಿಕ ಅಂತರ ಕಾಪಾಡಿ ಎಂದು ಸಚಿವರು ಪದೇ ಪದೇ ಹೇಳುತ್ತಿದ್ದರೂ, ಜನರು ಹಾಗೂ ಕಾರ್ಯಕರ್ತರು ಕ್ಯಾರೆ ಎನ್ನದೇ ಸಚಿವರ ಸುತ್ತಮುತ್ತ ಗುಂಪುಗೂಡಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+