ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹವಾಮಾನ ಆಧಾರಿತ ಬೆಳೆ ವಿಮೆ; ಹಸಿಮೆಣಸಿನಕಾಯಿ ಸೇರ್ಪಡೆ

|
Google Oneindia Kannada News

ಧಾರವಾಡ, ಮೇ 19; ಈ ಬಾರಿಯ ಮುಂಗಾರು ಹಂಗಾಮಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಮರು ವಿನ್ಯಾಸಗೊಳಿಸಲಾಗಿದೆ. ತೋಟಗಾರಿಕೆ ಬೆಳೆಯಾದ ಹಸಿಮೆಣಸಿನಕಾಯಿ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಧಾರವಾಡ ಜಿಲ್ಲಾಡಳಿತ ಈ ಕುರಿತು ಮಾಹಿತಿ ನೀಡಿದೆ. ಮೆಣಸಿನಕಾಯಿ ಬೆಳೆಯುವ ರೈತರು ಈ ಬೆಳೆ ವಿಮೆ ಯೋಜನೆ ಉಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ರಾಮನಗರ; ಶೇಕಡಾ 90 ರಷ್ಟು ಮಾವು ಬೆಳೆ ನಾಶ, ಪರಿಹಾರಕ್ಕೆ ರೈತರ ಮೊರೆ ರಾಮನಗರ; ಶೇಕಡಾ 90 ರಷ್ಟು ಮಾವು ಬೆಳೆ ನಾಶ, ಪರಿಹಾರಕ್ಕೆ ರೈತರ ಮೊರೆ

2022-23ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ಧಾರವಾಡ, ಅಮ್ಮಿನಬಾವಿ, ಗರಗ, ಧುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಹಸಿಮೆಣಸಿನಕಾಯಿ ಬೆಳೆಯ ರೈತರನ್ನು ವಿಮೆ ವ್ಯಾಪ್ತಿಗೆ ತರಲಾಗಿದೆ.

ಬೆಳೆ ವಿಮೆ ನೋಂದಣಿ ಸಂದರ್ಭದಲ್ಲಿಯೇ ನಾಮಿನಿ ಹೆಸರು ಸೇರಿಸಬೇಕು: ಕೃಷಿ ಸಚಿವಬೆಳೆ ವಿಮೆ ನೋಂದಣಿ ಸಂದರ್ಭದಲ್ಲಿಯೇ ನಾಮಿನಿ ಹೆಸರು ಸೇರಿಸಬೇಕು: ಕೃಷಿ ಸಚಿವ

Monsoon Crop Insurance Scheme Chilli Crop Adopted

ಧಾರವಾಡ ಜಿಲ್ಲೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಇನ್ಸೂರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ಹಸಿಮೆಣಸಿನಕಾಯಿ ಬೆಳೆಗೆ ರೂ.3,350 ಪ್ರತಿ ಹೆಕ್ಟೇರ್‌ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ವಿಮಾ ಕಂತು ಪಾವತಿಸಲು ಜೂನ್ 30 ಕೊನೆಯ ದಿನವಾಗಿದೆ.

ದೆಹಲಿ ಮಾದರಿಯಲ್ಲಿ ರಾಜ್ಯ ವಕೀಲರಿಗೆ ಆರೋಗ್ಯ ವಿಮೆ ಸೌಲಭ್ಯದೆಹಲಿ ಮಾದರಿಯಲ್ಲಿ ರಾಜ್ಯ ವಕೀಲರಿಗೆ ಆರೋಗ್ಯ ವಿಮೆ ಸೌಲಭ್ಯ

ಈ ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಾಲ ಪಡೆಯದ ರೈತರು ಹತ್ತಿರದ ಬ್ಯಾಂಕುಗಳಿಗೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಪಹಣಿ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಸ್ವಯಂ ಘೋಷಿತ ಬೆಳೆ ಪ್ರಮಾಣ ಪತ್ರದೊಂದಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Monsoon Crop Insurance Scheme Chilli Crop Adopted

ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಹಾಗೂ ಕಲಘಟಗಿ ತಾಲೂಕುಗಳ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳೀಯ ವಾಣಿಜ್ಯ ಹಾಗೂ ಗ್ರಾಮೀಣ ಸಹಕಾರಿ ಬ್ಯಾಂಕ್ ಅಥವಾ ಹತ್ತಿರದ ಬ್ಯಾಂಕ್‌ಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಕೃಷಿ ಮೇಳ ಮುಂದೂಡಿಕೆ; ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮೇ 27, 28, 29ರಂದು ಮಳೆಯಾಗುವ, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗುವ ಕಾರಣ ಕೃಷಿ ಮೇಳವನ್ನು ಮೂಂದೂಡಲಾಗಿದೆ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯ ಹೇಳಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ರೈತರು ಬಿತ್ತನೆ ಪೂರ್ವ ಮತ್ತು ಬಿತ್ತನೆ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಮತ್ತು ವಿವಿಧ ಚುನಾವಣೆಗೆಳ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿರುವುದರಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ.

ಕೃಷಿ ಮೇಳ ನಡೆಯುವ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಮತ್ತು ವಿಶ್ವವಿದ್ಯಾಲಯದಲ್ಲಿ ಬೀಜಗಳ ಮಾರಾಟವು ಮೇ 23 ರಿಂದ ಪ್ರಾರಂಭವಾಗುತ್ತದೆ ಎಂದು ಕೃಷಿ ವಿಶ್ವವಿದ್ಯಾಲಯದ ಪ್ರಕಟಣೆ ಹೇಳಿದೆ.

ಮಾವು ಮೇಳಕ್ಕೆ ಹೆಸರು ನೋಂದಾಯಿಸಿ; ಕೊಪ್ಪಳ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ ಮತ್ತು ಕೊಪ್ಪಳ ಜಿಲ್ಲೆಯ ನಾಗರಿಕರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಯೋಗ್ಯ ಬೆಲೆಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ರೈತರಿಂದ ನೇರವಾಗಿ ಗ್ರಾಹಕರಿಗೆ ಒದಗಿಸುವ ಉದ್ದೇಶದಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯಿಂದ ಮೇ 23 ರಿಂದ 30 ರವರೆಗೆ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ಭಾಗವಹಿಸುವ ಜಿಲ್ಲೆಯ ಆಸಕ್ತ ಮಾವು ಬೆಳೆಗಾರರು ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಮುಂಗಡವಾಗಿ ಮಾರಾಟ ಮಳಿಗೆಗಳನ್ನು ಕಾಯ್ದಿರಿಸಲು ತಮ್ಮ ಹೆಸರನ್ನು ನೋಂದಾಯಿಸಬೇಕು.

ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಆಸಕ್ತ ರೈತರು ತಮ್ಮ ಪಹಣಿ ಪ್ರತಿಯೊಂದಿಗೆ, ತಮ್ಮ ಹೆಸರು, ವಿಳಾಸ, ಸರ್ವೆ ನಂಬರ್, ಬೆಳೆ, ತಳಿಗಳು ಹಾಗೂ ವಿಸ್ತೀರ್ಣ ಮುಂತಾದ ವಿವರಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ. ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರೆಯಲು ಹಾಗೂ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 9844874822, 9481305830, 8861697989, 9611888607, 9972634118, 9482672039.

Recommended Video

Umran Malik ಭಾರತಕ್ಕಿಂತ ಪಾಕಿಸ್ತಾನದಲ್ಲಿದ್ದಿದ್ರೆ ಎಂಥ ಅದೃಷ್ಟ ಒಲಿಯುತ್ತಿತ್ತು ಗೊತ್ತಾ? | Oneindia Kannada

English summary
Chilli crop adopted for monsoon crop insurance scheme at Dharwad district. Farmers can apply for insurance till June 30, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X