ಮುಂಗಾರು ಮಳೆ: ರೈತರಿಗೆ ಆತಂಕ ಬೇಡ, ರಸಗೂಬ್ಬರ ದಾಸ್ತಾನು ಸಾಕಷ್ಟಿದೆ
ಶಿವಮೊಗ್ಗ, ಜೂನ್ 18: ನೈಋತ್ಯ ಮುಂಗಾರು ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗೆ ಚಾಲನೆ ಸಿಕ್ಕಿದೆ. ಆದರೆ ರೈತರು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಆತಂಕಗೊಳ್ಳುವ ಅಗತ್ಯವಿಲ್ಲ. ಕೃಷಿ ಇಲಾಖೆ ಈ ಕುರಿತು ನಿರಂತರವಾಗಿ ಗಮನವನ್ನು ಹರಿಸುತ್ತಿದೆ.
ಶಿವಮೊಗ್ಗ ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿ. ಮೀ. ಆಗಿದೆ. ಜೂನ್ 15ರ ತನಕ ಜಿಲ್ಲೆಯಲ್ಲಿ ಸರಾಸರಿ 107.79 ಮಿ. ಮೀ. ಮಳೆ ದಾಖಲಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಶಿವಮೊಗ್ಗದ ಜಂಟಿ ಕೃಷಿ ನಿರ್ದೇಶಕರು, ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇದೆ. ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ. ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ದಾಸ್ತಾನುಗೊಳಿಸಲಾಗಿದೆ" ಎಂದು ಹೇಳಿದ್ದಾರೆ.
ರೈತರಿಗೆ ಕೃಷಿ ಇಲಾಖೆ ಅಭಯ: ಶಿವಮೊಗ್ಗ ಜಿಲ್ಲೆಯ ರೈತರು ಬೆಳೆಗಳಿಗೆ ಸಾಮಾನ್ಯವಾಗಿ ಸಾರಜನಕ ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರವನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಆದರೆ ಈ ರಸಗೂಬ್ಬರದಲ್ಲಿ ಪೊಟ್ಯಾಷ್ ಅಂಶ ಇರುವುದಿಲ್ಲ.
ಪೊಟ್ಯಾಷ್ ಪೋಷಕಾಂಶಗಳು ಬೆಳೆಗಳ ಇಳುವರಿಯು ಹೆಚ್ಚಾಗುವಂತೆ ಮಾಡುತ್ತವೆ. ಈ ಕಾರಣಕ್ಕೆ ರೈತರು ಬಿತ್ತನೆ ಸಮಯದಲ್ಲಿ ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಅಂಶಗಳನ್ನು ಹೊಂದಿರುವ ರಸಗೂಬ್ಬರಗಳಾದ 10:26:26, 15:15:15, 12:36:16, 14:35:14, 17:17:17, 14:28:14, 19:19:19, 20:10:10 ಬಳಸುವುದು ಸೂಕ್ತ ಎಂದು ಕೃಷಿ ಇಲಾಖೆ ಹೇಳಿದೆ.
ರೈತರು ಬೆಳೆಗಳಿಗೆ ಸಾರಜನಕ ಹೆಚ್ಚು ಬಳಕೆ ಮಾಡುತ್ತಿದ್ದು. ಇದರಿಂದ ಬೆಳೆಗಳಿಗೆ ರೋಗ ಮತ್ತು ಕೀಟ ಬಾಧೆಗಳು ಹೆಚ್ಚು ಆಗುವ ಸಾಧ್ಯತೆ ಇರುವ ಕಾರಣ ಹವಾಮಾನ ಆಧರಿಸಿ ಶಿಫಾರಸ್ಸು ಮಾಡಿದ ಪ್ರಮಾಣದಲ್ಲಿ ಸಾರಜನಕ ರಸಗೊಬ್ಬರ ಬಳಕೆ ಮಾಡಬೇಕು ಎಂದು ಸಲಹೆ ನೀಡಲಾಗಿದೆ.
ರೈತರು ಅಧಿಕೃತ ಮಾರಾಟಗಾರರಿಂದ ಬಿಲ್ ಪಡೆದು ಕೃಷಿ ಪರಿಕರಗಳನ್ನು ಖರೀದಿಸಬೇಕು ಹಾಗೂ ನಕಲಿ ಬಿತ್ತನೆ ಬೀಜ, ರಸಗೂಬ್ಬರ ಹಾಗೂ ಕೀಟನಾಶಕಗಳ ಮಾರಾಟ ಕಂಡುಬಂದಲ್ಲಿ ಕೂಡಲೇ ಇಲಾಖೆಗೆ ದೂರು ಸಲ್ಲಿಸುವಂತೆ ಮನವಿ ಮಾಡಲಾಗಿದೆ.
ಜಿಲ್ಲಾಡಳಿತ ಈಗಾಗಲೇ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡುವವರ ಜೊತೆ ಸಭೆಯನ್ನು ನಡೆಸಿದೆ. ಸರಕಾರದಿಂದ ನಿಗದಿ ಮಾಡಿರುವ ದರವನ್ನು ಪಡೆಯಬೇಕು. ಹೆಚ್ಚುವರಿ ದರ ವಸೂಲಿ, ಕೃತಕ ಅಭಾವ ಸೃಷ್ಟಿಸಿದರೆ ಸಂಬಂದಿಸಿದ ಮಾರಾಟಗಾರರ ಮೇಲೆ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಲೈಸನ್ಸ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈ ವರ್ಷ ಶಿವಮೊಗ್ಗ ಜಿಲ್ಲೆಯಲ್ಲಿಯೂ ಬರ ಆವರಿಸಿತ್ತು. ಆದರೆ ತಾಲೂಕುಗಳಲ್ಲಿ ಮೇ ತಿಂಗಳಿನಲ್ಲಿ ಸುರಿದ ಪೂರ್ವ ಮುಂಗಾರು ಮಳೆ ರೈತರಲ್ಲಿ ಸಂತಸ ಮೂಡಿಸಿದೆ. ಉತ್ತಮವಾಗಿ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳಬಹುದಾದ ಕೀಟ/ ರೋಗ ಬಾಧೆ, ಅವಶ್ಯವಾದ ಕೀಟನಾಶಕಗಳನ್ನು ಸಹ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿರುತ್ತದೆ. ರೈತರು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಲಾಗಿದೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications