ಮುಂಗಾರು ಆರಂಭ; ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆಗೆ ಸಲಹೆಗಳು

ನೈಋತ್ಯ ಮುಂಗಾರು ಆರಂಭವಾಗುವ ಹಂತದಲ್ಲಿದೆ. ಶಿವಮೊಗ್ಗ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾದಲ್ಲಿ ಎಲೆಚುಕ್ಕೆ ರೋಗ ಉಲ್ಬಣವಾಗುವ ಸಂಭವವಿರುತ್ತದೆ. ಆದ್ದರಿಂದ ಈ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರೈತರು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಲಾಗಿದೆ.

ಈಗಾಗಲೇ ಎಲೆಚುಕ್ಕೆ ರೋಗದಿಂದಾಗಿ ಹಲವಾರು ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಕಳೆದ ವರ್ಷ ಕಾಣಿಸಿಕೊಂಡ ರೋಗದಿಂದಾಗಿ ಅಡಿಕೆ ಮರಗಳಿಗೆ ಹಾನಿಯಾಗಿದೆ. ಮರಗಳು ಬದುಕುತ್ತವೆಯೋ?, ಇಲ್ಲವೋ? ಎಂದು ರೈತರು ಚಿಂತೆಗೀಡಾಗಿದ್ದಾರೆ.

Monsoon Season 2023 Tips To Control Leaf Spot Disease In Arecanut

ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಮತ್ತೆ ಎಲೆಚುಕ್ಕೆ ರೋಗ ಉಲ್ಬಣವಾಗುವ ಸಂಭವವಿರುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ತುಂತುರು ಮಳೆ ಆರಂಭವಾಗಿದೆ. ಆದ್ದರಿಂದ ರೈತರಿಗೆ ರೋಗ ಹತೋಟಿಗೆ ಸಲಹೆಗಳನ್ನು ನೀಡಲಾಗಿದೆ.

ನಿರ್ವಹಣೆಯ ಕ್ರಮಗಳು: ಅಡಿಕೆ ತೋಟಗಳಲ್ಲಿ ಕಳೆದ ಬಾರಿಯ ರೋಗಬಾಧಿತ ಒಣಗಿರುವ ಮತ್ತು ಹಳದಿಯಾಗಿರುವ ಗರಿಗಳನ್ನು ತೆಗೆದು ರಾಶಿಹಾಕಿ ಸುಡುವುದರಿಂದ ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿಯಾಗಿದೆ.

ಮುಂಗಾರು ಪ್ರಾರಂಭದಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ ಎಲೆಗಳಿಗೂ ಸಿಂಪರಣೆ ಮಾಡಬೇಕು. ಹೆಚ್ಚು ಬಾಧೆಯಿರುವ ತೋಟಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಇಲ್ಲದಾಗ ಪ್ರೋಪಿಕೋನಝೋಲ್ (Propiconazole 25, EC) ಶಿಲೀಂದ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿ ಲೀಟರ್ ಪ್ರಮಾಣದಂತೆ ಎಲೆಗಳಿಗೆ ಸಿಂಪಡಣೆ ಮಾಡಬೇಕು.

ಎರಡನೇ ಸಿಂಪಡಣೆಗೆ ಕಾರ್ಬರ್ಬೆನ್ಡಜಿಮ್ 12% + ಮ್ಯಾಂಕೋಜೆಟ್ 63% + (ಒಂದು ಲೀಟರ್ ನೀರಿಗೆ ಎರಡು ಗ್ರಾಂ) ಅಥವಾ ಅಂರ್ತವ್ಯಾಪಿ ಶಿಲೀಂದ್ರನಾಶಕಗಳಾದ ಹೆಕ್ಸಾಕೊನಝೋಲ್ (Hexaconazole 5 %) ಅಥವಾ ಟೆಬುಕೊನಝೋಲ್ (Tebuconazole, 38.9 %) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿ ಲೀಟರ್ ಪ್ರಮಾಣದಂತೆ ಬಳಸಬಹುದು.

ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಉತ್ತಮ. ಸಾಮಾನ್ಯವಾಗಿ ಅಡಿಕೆ ಮರಕ್ಕೆ 12 ಕಿಲೋಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ (220 ಗ್ರಾಂ), ರಾಕ್ ಫಾಸ್ಫೇಟ್ (200 ಗ್ರಾಂ) ಮತ್ತು ಪೋಟಾಷ್ (240-350 ಗ್ರಾಂ) ನೀಡಬೇಕು. ರಸಗೊಬ್ಬರಗಳನ್ನು ಕನಿಷ್ಟ ಎರಡು ಕಂತುಗಳಲ್ಲಿ ನೀಡಬೇಕು. ಇದರ ಜೊತೆಗೆ ಲಘುಪೋಷಕಾಂಶಗಳಾದ ಸತುವಿನ ಸಲ್ಫೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು.

ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಬಹು ಮುಖ್ಯವಾಗುತ್ತವೆ.

ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯ ಪಡೆಯಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+