ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಮಾತು

|
Google Oneindia Kannada News

ಮಂಗಳೂರು, ಜುಲೈ 3: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಮಲೆನಾಡು ಪ್ರದೇಶದ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು.

ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರ ಈ ಕೂಡಲೇ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

 ಲೋಕಸಭೆಯಲ್ಲಿ ಪ್ರತಿಧ್ವನಿಸಿದ ರನ್ ವೇಯಿಂದ ವಿಮಾನ ಜಾರಿದ ಘಟನೆ ಲೋಕಸಭೆಯಲ್ಲಿ ಪ್ರತಿಧ್ವನಿಸಿದ ರನ್ ವೇಯಿಂದ ವಿಮಾನ ಜಾರಿದ ಘಟನೆ

ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು, ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ, ಹಳದಿ ರೋಗಗಳಂಥ ಮಾರಕ ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 5 ಸಾವಿರ ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

mp nalinkumar discussed arecanut farmers issue in parliament

ಆದ್ದರಿಂದ ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವುದಕ್ಕೆ ಕೇಂದ್ರ ಸರ್ಕಾರ ವಿಶೇಷ ಗಮನಹರಿಸಬೇಕು ಹಾಗೂ ಈ ಬಗ್ಗೆ ವಿಶೇಷ ತನಿಖಾ ದಳವನ್ನು ನೇಮಿಸಬೇಕು ಎಂದು ಅವರು ಒತ್ತಾಯಿಸಿದರು.

 ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ಹೆಸರು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ- ಚೆನ್ನಯ ಹೆಸರು

ಅಲ್ಲದೇ ಭಾರತದಲ್ಲಿ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸುವಂತೆ ಸಂಸದರು ಆಗ್ರಹಿಸಿದರು.

English summary
MP Nalin Kumar Kateel discussed arecanut farmers problems in parliament. He requested central government to look after the problems of the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X