ರೈತರಿಗೆ ಸಿಹಿಸುದ್ದಿ; ಬಿಳಿ ಜೋಳಕ್ಕೆ ಬೆಂಬಲ ಬೆಲೆ ಘೋಷಣೆ

ಬಳ್ಳಾರಿ, ಮಾರ್ಚ್ 17: ಜೋಳ ಬೆಳೆದ ರೈತರಿಗೆ ಸಿಹಿಸುದ್ದಿಯೊಂದಿದೆ. 2023-24ನೇ ಸಾಲಿನ ಋತುವಿನಲ್ಲಿ ಬೆಳೆದ ಬಿಳಿ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಮಾಡಲಾಗುತ್ತದೆ. ಇದಕ್ಕಾಗಿ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದೆ.

ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ. "ರೈತರಿಂದ ನೇರವಾಗಿ ಬಿಳಿ ಜೋಳ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ತೀರ್ಮಾನಿಸಿದ್ದು, ಎಫ್.ಎ.ಕ್ಯೂ. ಗುಣಮಟ್ಟದ ಜೋಳವನ್ನು ರೈತರಿಂದ ಖರೀದಿಸಲಾಗುವುದು" ಎಂದು ಹೇಳಿದರು.

MSP Announced For White Jowar Farmer To Register Name

"ರಾಜ್ಯ ಸರ್ಕಾರವು 1 ಲಕ್ಷ ಮೆಟ್ರಿಕ್ ಟನ್ ಗುರಿಯನ್ನು ತಲುಪುವ ತನಕ ಖರೀದಿಸಲು ಸೂಚಿಸಿದ್ದರಿಂದ ರೈತರು ತಕ್ಷಣವೇ ನೋಂದಣಿ ಮತ್ತು ಖರೀದಿಯ ಉಪಯೋಗವನ್ನು ಸದುಪಯೋಗಪಡೆದುಕೊಳ್ಳಬೇಕು" ಎಂದು ಡಿಸಿ ಕರೆ ನೀಡಿದ್ದಾರೆ.

ಎಷ್ಟು ಬೆಂಬಲ ಬೆಲೆ?: ರೈತರಿಂದ ಬಿಳಿ ಜೋಳ ಖರೀದಿಗೆ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಮಾಲ್ದಂಡಿ ಬಿಳಿ ಜೋಳಕ್ಕೆ ರೂ.3,225 (ಪ್ರತಿ ಕ್ವಿಂಟಾಲ್‍ಗೆ) ಮತ್ತು ಹೈಬ್ರಿಡ್ ಬಿಳಿ ಜೋಳಕ್ಕೆ ರೂ. 3,180 (ಪ್ರತಿ ಕ್ವಿಂಟಾಲ್‍ಗೆ) ಬೆಲೆ ನಿಗದಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ, ಬೆಂಗಳೂರು. ಇವರು ಖರೀದಿಸುವ ಏಜೆನ್ಸಿಯಾಗಿರುತ್ತಾರೆ. ಹಿಂಗಾರು ಋತುವಿನ ರೈತರ ನೋಂದಣಿ ಪ್ರಾರಂಭವಾಗಿದೆ. ಹಿಂಗಾರು ಋತುವಿನ ಖರೀದಿ ಪ್ರಾರಂಭ ಮತ್ತು ಮುಕ್ತಾಯದ ದಿನವು ಏಪ್ರಿಲ್ 1 ರಿಂದ ಮೇ 31ರ ವರೆಗೆ ಇರುತ್ತದೆ.

ಬಳ್ಳಾರಿ ಜಿಲ್ಲೆಯಲ್ಲಿ ತೆರೆದಿರುವ ಖರೀದಿ ಕೇಂದ್ರದ ಬಗ್ಗೆ ಮಾಹಿತಿಗಾಗಿ ಬಳ್ಳಾರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಬಳ್ಳಾರಿ ಘಟಕ-1&2 ರ ನರಸಿಂಹ ಅವರನ್ನು 9900677875, ಕಂಪ್ಲಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ರಂಗಪ್ಪ ಅವರನ್ನು 9740838910 ಸಂಖ್ಯೆ ಮೂಲಕ ಸಂಪರ್ಕಿಸಬಹುದು.

ಸಿರುಗುಪ್ಪದ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮೋಹನ ಕುಮಾರ ಅವರನ್ನು 9731421918, ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಎ.ಪಿ.ಎಮ್.ಸಿಯ ಹುಸೇನ್ ಸಾಹೆಬ್ ಅವರನ್ನು 8951307333, ಸಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಎ.ಪಿ.ಎಮ್.ಸಿಯ ಶಿವಲಿಂಗಪ್ಪ ಅವರನ್ನು 9945940350 ಸಂಖ್ಯೆ ಮೂಲಕ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

ರೈತರಿಂದ ಬಿಳಿ ಜೋಳ ಖರೀದಿ ಮಾಡಲು ಷರತ್ತುಗಳನ್ನು ಸಹ ವಿಧಿಸಲಾಗಿದೆ. ಹೆಸರು ನೋಂದಣಿ ಮಾಡುವ ರೈತರು ಸ್ವತಃ ಖರೀದಿ ಕೇಂದ್ರಗಳಿಗೆ ಬಂದು ಬಯೋಮೆಟ್ರಿಕ್ ಮುಖಾಂತರ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಬಿಳಿ ಜೋಳ ನೋಂದಾಯಿಸಿಕೊಂಡ ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಾಲ್‍ನಂತೆ ರೈತನ ಜಮೀನಿಗನುಗುಣವಾಗಿ ಬಿಳಿ ಜೋಳವನ್ನು ಖರೀದಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

ರೈತರಿಗೆ ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಐಡಿಯನ್ನು (ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ) ನೋಂದಣಿ ಅಥವಾ ಖರೀದಿ ಕೇಂದ್ರಕ್ಕೆ ತಂದು ಬೆಂಬಲ ಬೆಲೆ ಯೋಜನೆಯಡಿ ಜೋಳ ಮಾರಾಟ ಮಾಡಲು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ರೈತರು ಸರಬರಾಜು ಮಾಡುವ ಜೋಳ ಗುಣಮಟ್ಟವನ್ನು ಕೃಷಿ ಇಲಾಖೆಯು ನಿಯೋಜಿಸಿದ ಗುಣಮಟ್ಟ ಪರಿವೀಕ್ಷಕರು ಪರಿಶೀಲಿಸಿ ದೃಢೀಕರಿಸಿದ ನಂತರವೇ ಜೋಳ ಖರೀದಿಸಲಾಗುವುದು. ರೈತರು ತಮ್ಮ ಸ್ವಂತ ಖರ್ಚಿನಲ್ಲಿ ನಿಗದಿಪಡಿಸಿದ ಖರೀದಿ ಕೇಂದ್ರಕ್ಕೆ ಬಿಳಿ ಜೋಳ ಉತ್ಪನ್ನಗಳನ್ನು ಸರಬರಾಜು ಮಾಡಬೇಕು. ರೈತರಿಂದ ಖರೀದಿಸುವ ಜೋಳ ಸರಕಿನ ಮೌಲ್ಯವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುತ್ತದೆ.

ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಖರೀದಿ ಕೇಂದ್ರಗಳಿಗೆ ಜೋಳ ತಂದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಖರೀದಿ ಏಜೆನ್ಸಿಯಾದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಜಿಲ್ಲಾ ಕಚೇರಿಯ ಜಿಲ್ಲಾ ವ್ಯವಸ್ಥಾಪಕ ಆಶಿಕ್ ಅಲಿ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9686935278.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+