ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ; ರೈತರು ಇದನ್ನು ತಿಳಿಯಿರಿ

ಕೊಪ್ಪಳ, ಡಿಸೆಂಬರ್ 09 : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಕರ್ನಾಟಕ ಸರ್ಕಾರ ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.

2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಣೆ ಮಾಡಲಾಗಿದೆ. ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 75 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುತ್ತದೆ.

ಈ ಹಿಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನಂತೆ, ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿತ್ತು.

MSP For Paddy Crop Farmers Should Know

ಬೆಂಬಲ ಬೆಲೆಯನ್ನು ಸಾಮಾನ್ಯ ಭತ್ತಕ್ಕೆ ರೂ.1868 ಹಾಗೂ ಗ್ರೇಡ್-ಎ ಭತ್ತಕ್ಕೆ ರೂ.1888 ಗಳನ್ನು ಮೊದಲಿನ ಆದೇಶದಂತೆ ನಿಗದಿಪಡಿಸಲಾಗಿದೆ. ಆಸಕ್ತ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.

ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ, ಗಂಗಾವತಿ, ಕಾರಟಗಿ, ಶ್ರೀರಾಮನಗರ ಹಾಗೂ ಸಿದ್ದಾಪುರಗಳಲ್ಲಿ 5 ಭತ್ತ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+