ಕನಿಷ್ಟ ಬೆಂಬಲ ಬೆಲೆ; ರೈತರಿಂದ ಭತ್ತ ಖರೀದಿ ಡಿ. 1ಕ್ಕೆ ಆರಂಭ

ಬೆಂಗಳೂರು, ನವೆಂಬರ್ 10; ಭತ್ತ ಬೆಳೆದ ರೈತರಿಗೆ ಸಿಹಿಸುದ್ದಿ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1ರಿಂದ ಆರಂಭವಾಗಲಿದ್ದು ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಲಾಗಿದೆ.

ಈ ಕುರಿತು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಅವರು 2023-24ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯನ್ನು ನಡೆಸಿದರು.

puddy-perches-from-farmers

ಕೇಂದ್ರ ಸರ್ಕಾರದ ಆದೇಶದಂತೆ 2023-24ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಕೃಷಿಕರಲ್ಲಿ ಮನವಿ ಮಾಡಿದರು. ರೈತರ ನೋಂದಣಿ ಸಂಬಂಧ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಎಷ್ಟು ದರ ನಿಗದಿ ಮಾಡಲಾಗಿದೆ?; ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಕುಮುದಾ ಶರತ್ ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯಾಗಿ ಸರ್ಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್‌ನಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ. ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್ ಗೆ 2183 ರೂ. ದರ ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಾಲ್ ಗೆ 3846 ರೂ. ನಿಗದಿಪಡಿಸಲಾಗಿದೆ.

ರೈತರಿಗೆ ಅನುಕೂಲ ಆಗುವಂತೆ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಖರೀದಿ ಕೇಂದ್ರದ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ.

ಒಂದು ವೇಳೆ ಬೇಡಿಕೆ ಬಂದರೆ ಅದಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಖರೀದಿ ಮಾಡಿದ ಭತ್ತದ ಸೂಕ್ತ ದಾಸ್ತಾನಿಗಾಗಿ ಹಾಗೂ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ಕೊಟ್ಟರು.

ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+