ಸೆ.25ರಿಂದ ದಸರಾ ಫಲಪುಷ್ಪ ಪ್ರದರ್ಶನ

ಮೈಸೂರು, ಸೆ. 23 : ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸುವ ದಸರಾ ಫಲಪುಷ್ಪ ಪ್ರದರ್ಶನಕ್ಕೆ ಸೆ.25ರಂದು ಚಾಲನೆ ದೊರೆಯಲಿದೆ. ಈ ಬಾರಿ ಕುಪ್ಪಣ್ಣ ಪಾರ್ಕ್‌ನಲ್ಲಿ ಪ್ರದರ್ಶನ ಆಯೋಜಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ದಸರಾ ಮಹೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ಮೈಸೂರು ಹಾಗೂ ಜಿಲ್ಲಾ ತೋಟಗಾರಿಕೆ ಸಂಘ ಜಂಟಿಯಾಗಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿವೆ. 77ನೇ ದಸರಾ ಫಲಪುಷ್ಪ ಪ್ರದರ್ಶನವನ್ನು ಈ ಬಾರಿ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ನಡೆಸಲಾಗುತ್ತಿದೆ. 1985ರ ನಂತರ ಕರ್ಜನ್ ಪಾರ್ಕ್ ಆವರಣದಲ್ಲಿ ಪ್ರದರ್ಶನ ನಡೆಸಲಾಗುತ್ತಿತ್ತು. [ಮೈಸೂರು ದಸರಾ ಚಿತ್ರಗಳು]

Flower Show

ಸೆ.25ರಂದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದರ್ಶನವನ್ನು ಉದ್ಘಾಟಿಸಲಿದ್ದು, ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಡಾ. ಶಾಮನೂರು ಶಿವಶಂಕರಪ್ಪ, ಕಂದಾಯ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಶ್ರೀನಿವಾಸ್ ಪ್ರಸಾದ್, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ದಸರಾ ಫಲಪುಷ್ಪ ಪ್ರದರ್ಶನದ ಸ್ಥಳ ಬದಲಾವಣೆ]

1 ಲಕ್ಷ ಗುಲಾಬಿ ಹೂ : ದಸರಾ ಫಲಪುಷ್ಪ ಪ್ರದರ್ಶನಕ್ಕಾಗಿ ಸುಮಾರು 1 ಲಕ್ಷ ಗುಲಾಬಿ ಹೂವುಗಳನ್ನು ತರಿಸಲಾಗುತ್ತಿದೆ. ವಿವಿಧ ಬಗೆಯ ಆರ್ಕಿಡ್ ಹಾಗೂ ಇತರೆ ಹೂವುಗಳನ್ನು ಪ್ರದರ್ಶಿಸಲಾಗುತ್ತದೆ. ಮ್ಯೂಸಿಕಲ್ ಫೌಂಟೇನ್-ವರ್ಟಿಕಲ್ ಗಾರ್ಡನ್, ಹಸಿರು ಆನೆ ಮಾದರಿ ಪ್ರದರ್ಶನ ಈ ವರ್ಷದ ವಿಶೇಷ ಆಕರ್ಷಣೆಗಳಾಗಿವೆ. [ಬೆಂಗಳೂರು ಮೈಸೂರು ಅರಮನೆ ನೋಡಿ]

ಫಲಪುಷ್ಪ ಪ್ರದರ್ಶನದಲ್ಲಿ ಮೊದಲ ಬಾರಿಗೆ ಜೇನು ಮಹೋತ್ಸವ, ದಾಳಿಂಬೆ ಮೇಳ ಹಾಗೂ ಸಾವಯವ ಮೇಳಗಳನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು, ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಹಾಗೂ ತೋಟಗಾರಿಕೆ ಮಹಾವಿದ್ಯಾಲಯಗಳು ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+