ಮೈಸೂರು: ಸಾಲ ಕಟ್ಟಲಾಗದೆ ಕೆ.ಆರ್.ನಗರದಲ್ಲಿ ರೈತ ಆತ್ಮಹತ್ಯೆ

ಮೈಸೂರು, ಅಕ್ಟೋಬರ್ 15: ಸಾಲಬಾಧೆಯಿಂದ ರೈತನೋರ್ವ ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕಂಚಿನಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಗ್ರಾಮದ ನಿವಾಸಿ ರೈತ ಬಸವರಾಜು (45) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬಸವರಾಜು ಅವರು ತನ್ನ ಎರಡು ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆದಿದ್ದರು, ಕಬ್ಬು ಬೆಳೆಗಾಗಿ ಸಮೀಪದ ಚಿಕ್ಕವಡ್ಡರಗುಡಿ ಗ್ರಾಮದ ಕೃಷಿಪತ್ತಿನ ಸಹಕಾರ ಸಂಘದಿಂದ ನಾಲ್ಕು ಲಕ್ಷ ರೂ. ಹಾಗೂ ಸಾರ್ವಜನಿಕರಿಂದ ಮೂರು ಲಕ್ಷ ರೂ. ಕೈ ಸಾಲ ಮಾಡಿದ್ದರು.

Mysuru: Debt ridden farmer ends life KR Nagar

ಆದರೆ, ನಿರೀಕ್ಷೆಯಂತೆ ಫಸಲು ಬಾರದ ಕಾರಣದಿಂದಾಗಿ ನಷ್ಟ ಹೊಂದಿದ್ದು ಬಡ್ಡಿ ಕಟ್ಟಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಇದರಿಂದ ನೊಂದಿದ್ದ ಬಸವರಾಜು ಅವರು ಎರಡು ದಿನಗಳ ಹಿಂದೆ ಜಮೀನಿನಲ್ಲಿ ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ವಿಷ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ನೋಡಿದ ಗ್ರಾಮಸ್ಥರೊಬ್ಬರು ಕುಟುಂಬದವರಿಗೆ ತಿಳಿಸಿದ ಹಿನ್ನಲೆಯಲ್ಲಿ ಕೂಡಲೇ ತುರ್ತುವಾಹನದ ಮೂಲಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರದೊಯ್ದು ಚಿಕ್ಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಕೆ.ಆರ್.ಆಸ್ಪತ್ರೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಮೃತರುಯ ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್‍ಇನ್ಸ್ಪೆಕ್ಟರ್ ಮಹೇಶ್ ಮುಂದಿನ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+