ಭತ್ತದ ಬೆಳೆಯ ಕಟಾವು ಪ್ರಾರಂಭ: ಯಂತ್ರದ ಬಾಡಿಗೆ ದರ ನಿಗದಿ

ಮೈಸೂರು, ಡಿಸೆಂಬರ್ 8: ಭತ್ತದ ಬೆಳೆಯ ಕಟಾವು ಪ್ರಾರಂಭವಾಗಿದ್ದು, ಕೋವಿಡ್-19 ಸಂದರ್ಭದಲ್ಲಿ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ ಎಂದು ಮೈಸೂರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 1,02,000 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಸದ್ಯ ಭತ್ತದ ಬೆಳೆಯ ಕಟಾವು ಪ್ರಾರಂಭವಾಗಿದೆ ಎಂದರು.

ಮೈಸೂರು ಜಿಲ್ಲೆಯ ಶೇ.95% ರೈತರು ಭತ್ತದ ಬೆಳೆಯನ್ನು ಭತ್ತಕಟಾವು ಯಂತ್ರಗಳ (Combined Harvestor) ಮೂಲಕ ಕಟಾವು ಮಾಡುತ್ತಿದ್ದು, ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ತಿಳಿಸಿದರು.

Mysuru: Start of Paddy Crop Harvesting: Fixed Rental Rate Of The Machine

ಖಾಸಗಿ ಭತ್ತಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2,500 ರೂ. ನಿಂದ 3,000 ರೂ. ಗಳವರೆಗೆ ಬಾಡಿಗೆ ಹಣ ನಿಗದಿ ಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ.

ಕೋವಿಡ್-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ 2,300 ರೂ. ಟೈರ್ ಟೈಪ್ ಭತ್ತಕಟಾವು ಯಂತ್ರಕ್ಕೆ ಪ್ರತಿಘಂಟೆಗೆ 1,500 ರೂ. ಮೀರದಂತೆ ಬಾಡಿಗೆಯನ್ನು ನಿಗದಿ ಮಾಡಬೇಕು. ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್-19 ಸಂಕಷ್ಟದ ದಿನಗಳಲ್ಲಿ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+