ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ ರದ್ದು

ಬೆಳಗಾವಿ, ಜುಲೈ 23 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ. ಬೆಳಗಾವಿಯಲ್ಲಿ ರೈತ ಸಮಾವೇಶ ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಬೇಕಿತ್ತು.

ಜುಲೈ 29ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ರೈತ ಸಮಾವೇಶ ಆಯೋಜಿಸಲಾಗಿತ್ತು. ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರದ ರೈತರು ಸಹ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಪ್ರಭಾಕರ ಕೋರೆ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮಳೆ, ನೆರೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆಯಲ್ಲಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಮುಂದೂಡಲಾಗಿದೆ' ಎಂದು ಹೇಳಿದರು.

Narendra Modis rally in Belagavi cancelled

ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ದೇಶಾದ್ಯಂತ 50 ಸಮಾವೇಶಗಳನ್ನು ಆಯೋಜಿಸುತ್ತಿದೆ. ಈ ಸಮಾವೇಶಗಳನ್ನು ಉದ್ದೇಶಿಸಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿಯೇ ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಲಾಗಿತ್ತು.

ಜುಲೈ 29ರಂದು ಚಿಕ್ಕೋಡಿಯಲ್ಲಿ ರೈತ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಹಾರಾಷ್ಟ್ರದ ರೈತರು ಸಹ ಪಾಲ್ಗೊಳ್ಳಬೇಕಿತ್ತು. ರೈತರ ಬೆಳೆಗಳಿಗೆ ಪ್ರೋತ್ಸಾಹ ಧನ ಘೋಷಣೆಯ ಹಿನ್ನಲೆಯಲ್ಲಿ ಸಮಾವೇಶ ಆಯೋಜಿಸಲಾಗಿತ್ತು.

ಕರ್ನಾಟಕ ವಿಧಾನಸಭೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಮೋದಿ ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಈ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಆದ್ದರಿಂದ, ಚಿಕ್ಕೋಡಿಯಲ್ಲಿಯೇ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+