PM Kisan 13th Installment : ಪಿಎಂ ಕಿಸಾನ್ ಸಮ್ಮಾನ್; 13ನೇ ಕಂತು ಸೋಮವಾರ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

ಬೆಳಗಾವಿ, ಫೆಬ್ರವರಿ 26; ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಮೋದಿ ಶಿವಮೊಗ್ಗ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಹೃತ್ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದೇ ಸಮಾವೇಶದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ 13ನೇ ಕಂತು ಬಿಡುಗಡೆ ಮಾಡಲಿದ್ದಾರೆ. ಸುಮಾರು 10 ಲಕ್ಷ ರೈತರಿಗೆ ಈ ಯೋಜನೆಯ ಅನ್ವಯ ಅನುಕೂಲವಾಗಲಿದೆ.

Narendra Modi To Release PM Kisan 13th Installment At Belagavi On February 27

ಮೋದಿ ಸೋಮವಾರ ಬೆಳಗ್ಗೆ ಶಿವಮೊಗ್ಗಕ್ಕೂ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಈ ಕುರಿತು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು, 'ಸನ್ಯಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರು ಫೆ.27 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಅನುದಾನ ದೇಶದ ಅಂದಾಜು 9 ಕೋಟಿ ಅರ್ಹ ರೈತರಿಗೆ ತಲಾ 2,000/- ದಂತೆ ಒಟ್ಟು ಸುಮಾರು 18000 ಕೋಟಿ ಮೊತ್ತವನ್ನು ಡಿ.ಬಿ.ಟಿ. ಮೂಲಕ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ' ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮೋದಿ ಕೃಷಿ ಸಮ್ಮಾನ್ ಯೋಜನೆಯ ನಿಧಿ ವರ್ಗಾವಣೆ, ರೈಲ್ವೆ ಅಭಿವೃದ್ಧಿ ಯೋಜನೆಗಳು ಹಾಗೂ ಜಲಜೀವನ ಮಿಷನ್ ಯೋಜನೆಯ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯೋಜನೆ ಕುರಿತು; ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು 24 ಫೆಬ್ರವರಿ 2019ರಂದು ಆರಂಭಿಸಿತು. ದೇಶಾದ್ಯಂತ ಎಲ್ಲಾ ಸಣ್ಣ ಮತ್ತು ಮಧ್ಯಮ ಗಾತ್ರದ ಭೂ ಹಿಡುವಳಿದಾರ ರೈತರ ಕುಟುಂಬಗಳಿಗೆ ಆದಾಯದ ನೆರವು ನೀಡುವುದು, ಆ ಮೂಲಕ ಅವರಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳು ಹಾಗೂ ದೈನಂದಿನ ಕೌಟುಂಬಿಕ ಅಗತ್ಯಗಳ ಖರ್ಚು, ವೆಚ್ಚಗಳನ್ನು ಭರಿಸಲು ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

Narendra Modi To Release PM Kisan 13th Installment At Belagavi On February 27

ಈ ಯೋಜನೆಯಡಿ 2 ಹೆಕ್ಟೇರ್‌ವರೆಗೆ ಸಾಗುವಳಿ ಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಕೆಲವೊಂದು ವಿನಾಯಿತಿಗಳ ಹೊರತಾಗಿ ರೈತರಿಗೆ ವಾರ್ಷಿಕ 6000 ರೂ. ನೆರವು ನೀಡಲಾಗುತ್ತದೆ. ಕೇಂದ್ರ ಸರ್ಕಾರ ನಗದು ನೇರ ವರ್ಗಾವಣೆ ಯೋಜನೆಯಡಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ 4 ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ತಲಾ 2000 ರೂ.ಗಳನ್ನು ವರ್ಗಾವಣೆ ಮಾಡುತ್ತದೆ.

ಯೋಜನೆಗೆ ಫಲಾನುಭವಿಗಳನ್ನು ಗುರುತಿಸುವ ಜವಾಬ್ದಾರಿಯನ್ನು ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲಾಗಿತ್ತು. ಇದಕ್ಕಾಗಿ www.pmkisan.gov.in ಎಂಬ ಪ್ರತ್ಯೇಕ ವೆಬ್‌ಸೈಟ್‌ ಆರಂಭಿಸಲಾಗಿದೆ. ರೈತರು ಸಿದ್ಧಪಡಿಸಿದ ಮತ್ತು ಅಪ್‌ಲೋಡ್ ಮಾಡಿದ ಮಾಹಿತಿ ಆಧರಿಸಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.

ಮೋದಿ ಬೆಳಗಾವಿ ಕಾರ್ಯಕ್ರಮಗಳು

* ಬೆಳಗಾವಿ ಜಿಲ್ಲೆಯಲ್ಲಿ 1132 ಕೋಟಿ ವೆಚ್ಚದ ಐದು ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ.

* ಬೆಳಗಾವಿ-ಧಾರವಾಡ ರೈಲುಮಾರ್ಗ ಸೇರಿದಂತೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

* ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ನಿಧಿಯನ್ನು ರೈತರ ಖಾತೆಗೆ ಜಮೆ ಮಾಡಲು ಚಾಲನೆ

* ಬೆಳಗಾವಿ ನಗರದಲ್ಲಿ ಸುಮಾರು 8 ಕಿ. ಮೀ. ರೋಡ್ ಶೋ.

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಯೋಜನೆಯ ಫಲಾನುಭವಿಗಳನ್ನು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಕರೆತರಲು ಸುಮಾರು 1500 ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಊಟ, ನೀರು ಮತ್ತು ಮಜ್ಜಿಗೆಯನ್ನು ಸಮರ್ಪಕವಾಗಿ ವಿತರಿಸಲು ತಂಡಗಳನ್ನು ನಿಯೋಜಿಸಲಾಗಿದೆ.

ಸಮಾವೇಶ ನಡೆಯುವ ಪ್ರಧಾನ ವೇದಿಕೆ, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಗ್ರೀನ್ ರೂಮ್, ತಾತ್ಕಾಲಿಕ ರಸ್ತೆ, ಊಟದ ವ್ಯವಸ್ಥೆಯ ಕುರಿತು ಜಿಲ್ಲಾಡಳಿತ ಕ್ಷಣ-ಕ್ಷಣದ ಮಾಹಿತಿ ಪಡೆದುಕೊಂಡು ಅಂತಿಮ ಹಂತದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

ಪ್ರಧಾನಿ ಮುಖ್ಯ ವೇದಿಕೆಗೆ ಆಗಮಿಸುವುದಕ್ಕಿಂತ ಮುಂಚೆ ಕನ್ನಡದ ಖ್ಯಾತ ಟಿವಿ ವಾಹಿನಿಯ ಕಲಾವಿದರು ಪರ್ಯಾಯ ವೇದಿಕೆಯಲ್ಲಿ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ನೀಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+