ಜು.29ರಂದು ಬೆಳಗಾವಿಗೆ ನರೇಂದ್ರ ಮೋದಿ ಭೇಟಿ
ಬೆಳಗಾವಿ, ಜುಲೈ 20 : ಪ್ರಧಾನಿ ನರೇಂದ್ರ ಮೋದಿ ಜುಲೈ 29ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಗೆ ನರೇಂದ್ರ ಮೋದಿ ಅವರು ಜುಲೈ 29ರಂದು ಭೇಟಿ ನೀಡಲಿದ್ದಾರೆ. ಚಿಕ್ಕೋಡಿಯಲ್ಲಿ ರೈತ ಸಮಾವೇಶ ಆಯೋಜನೆ ಮಾಡಲಾಗಿದ್ದು, ಅದರಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಮೋದಿ ಭೇಟಿಯ ಕುರಿತು ಚರ್ಚೆ ನಡೆಸಲು ಜುಲೈ 22ರಂದು ಚಿಕ್ಕೋಡಿಯ ಬಸವಪ್ರಭು ಕೋರೆ ಕಾಲೇಜು ಸಭಾಂಗಣದಲ್ಲಿ ಪ್ರಭಾಕರ ಕೋರೆ ಅಧ್ಯಕ್ಷತೆಯಲ್ಲಿ ಸಭೆ ಏರ್ಪಡಿಸಲಾಗಿದೆ.

ಕರ್ನಾಟಕ ಮತ್ತು ಮಹಾರಾಷ್ಟ್ರ ಭಾಗದ ರೈತರ ಸಮಾವೇಶವನ್ನು ಚಿಕ್ಕೋಡಿಯಲ್ಲಿ ಆಯೋಜಿಸಲಾಗಿದೆ. ಬೆಂಬಲ ಬೆಲೆ, ರೈತಪರವಾದ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಅವರು ಸಮಾವೇಶದಲ್ಲಿ ಮಾತನಾಡಲಿದ್ದಾರೆ.
ಕರ್ನಾಟಕ ವಿಧಾನಸಭೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಮೋದಿ ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಮೂರು ತಿಂಗಳಿನಲ್ಲಿ ಮತ್ತೊಮ್ಮೆ ಅವರು ಚಿಕ್ಕೋಡಿಗೆ ಆಗಮಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.











Click it and Unblock the Notifications