ಚಿತ್ರದುರ್ಗದ ರೈತರ ಕಷ್ಟ ನೀಗಿಸಲು‘ನಿಜಲಿಂಗಪ್ಪ ನೀರಾವರಿ ಯೋಜನೆ’: ಕೃಷ್ಣ
ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ರೈತರಿಗೆ ನೀರಾವರಿ ಸೌಕರ್ಯ ಕಲ್ಪಿಸಬೇಕೆಂಬ ಮಹದಾಸೆ ಹೊತ್ತಿದ್ದ ದಿವಂಗತ ನಿಜಲಿಂಗಪ್ಪನವರ ಕನಸನ್ನು ನನಸಾಗಿಸಲು ಬೃಹತ್ ನೀರಾವರಿ ಯೋಜನೆಯನ್ನು ಅವರ ಹೆಸರಲ್ಲೇ ಸರ್ಕಾರ ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದಾರೆ.
ತಮ್ಮೂರು ಹಾಗೂ ಸುತ್ತಮುತ್ತಲ ರೈತರು ವ್ಯವಸಾಯಕ್ಕೆ ಮಳೆಯನ್ನೇ ನೆಚ್ಚಿಕೊಂಡಿದ್ದಾರೆ. ಮಳೆ ಕೈಕೊಟ್ಟರೆ ಅವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ. ಹೀಗಾಗಿ ಈ ಪ್ರದೇಶಗಳಲ್ಲಿ ನೀರಾವರಿ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ನಿಜಲಿಂಗಪ್ಪ ಪದೇ ಪದೇ ಹೇಳುತ್ತಿದ್ದರು. ಅವರ ಜೀವಿತದ ಕಾಲದಲ್ಲಂತೂ ಅದು ಈಡೇರಲಿಲ್ಲ. ಅವರ ಈ ಕನಸನ್ನು ಈಗಲಾದರೂ ಈಡೇರಿಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಶೀಘ್ರದಲ್ಲೇ ಮಂತ್ರಿಮಂಡಲವು ಬೃಹತ್ ನೀರಾವರಿ ಯೋಜನೆಯಾಂದನ್ನು ಸಿದ್ಧಪಡಿಸಲಿದ್ದು, ಯೋಜನೆಗೆ ನಿಜಲಿಂಗಪ್ಪನವರ ಹೆಸರನ್ನೇ ಇಡಲಾಗುವುದು ಎಂದು ಕೃಷ್ಣ -ಹೇ-ಳಿದರು.
ಉಪರಾಷ್ಟ್ರಪತಿ ಆಗಮನದ ನಿರೀಕ್ಷೆ : ಹಿರಿಯ ರಾಜಕೀಯ ಮುತ್ಸದ್ಧಿ ನಿಜಲಿಂಗಪ್ಪ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಬುಧವಾರ ನಡೆಯಲಿದ್ದು, ಉಪರಾಷ್ಟ್ರಪತಿ ಕೃಷ್ಣಕಾಂತ್ ಆಗಮಿಸುವ ನಿರೀಕ್ಷೆ ಇದೆ. ಬೆಂಗಳೂರಿಗೆ ಮಧ್ಯಾಹ್ನ 2 ಗಂಟೆಗೆ ಆಗಮಿಸಲಿರುವ ಉಪರಾಷ್ಟ್ರಪತಿಯವರು, ದುರ್ಗಕ್ಕೆ ತೆರಳಲಿದ್ದಾರೆ.
-
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್












Click it and Unblock the Notifications