• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಈ ಬಾರಿ ಮಾವು ಮೇಳವಿಲ್ಲ; ಮನೆ ಬಾಗಿಲಿಗೆ ಬರಲಿದೆ ರುಚಿಯಾದ ಹಣ್ಣು

|

ಬೆಂಗಳೂರು, ಮೇ 13 : ಕೊರೊನಾ ಲಾಕ್ ಡೌನ್ ಪರಿಣಾಮ ಈ ಬಾರಿ ಮಾವು ಮೇಳವನ್ನು ಆಯೋಜನೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ, ಜನರ ಮನೆ ಬಾಗಿಲಿಗೆ ಪ್ಯಾಕ್ ಮಾಡಿದ ಮಾವಿನ ಹಣ್ಣನ್ನು ತಲುಪಿಸುವ ಮೂಲಕ ರೈತರಿಗೆ ನೆರವಾಗಲು ಯೋಜನೆ ರೂಪಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಈ ಕುರಿತ ಪ್ರಕ್ರಿಯೆ ಆರಂಭವಾಗಿವೆ.

ಮಂಡ್ಯ ಜಿಲ್ಲೆಯಲ್ಲಿ ಈಗಾಗಲೇ ಗ್ರಾಹಕರ ಮನೆ ಬಾಗಿಲಿಗೆ ಮಾವಿನ ಹಣ್ಣು ತಲುಪಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕೊಪ್ಪಳದಲ್ಲಿ ಮೇ 15ರಿಂದ 'ಕೊಪ್ಪಳ ಮಾವು' ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ. ಕೃಷಿ ಸಚಿವ ಬಿ. ಸಿ. ಪಾಟೀಲ್ ಇದಕ್ಕೆ ಚಾಲನೆ ನೀಡಲಿದ್ದಾರೆ.

ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!

ಕೊರೊನಾ ಹರಡದಂತೆ ತಡೆಯಲು ಲಾಕ್‌ ಡೌನ್ ಜಾರಿಯಲ್ಲಿರುವ ಕಾರಣ ಈ ಬಾರಿ ಜಿಲ್ಲೆಗಳಲ್ಲಿ ಮಾವು ಮೇಳ ಆಯೋಜನೆ ಮಾಡಲಾಗುತ್ತಿಲ್ಲ. ಆದ್ದರಿಂದ, ತೋಟಗಾರಿಕಾ ಇಲಾಖೆ, ಬೆಂಗಳೂರಿನ ಮಾವು ಮಾರಾಟ ಮಂಡಳಿ ಸೇರಿ ಜಿಲ್ಲಾಡಳಿತದ ಸಹಕಾರದಿಂದ ಮನೆ ಬಾಗಿಲಿಗೆ ಮಾವಿನ ಹಣ್ಣು ಪೂರೈಕೆ ಮಾಡಲಿವೆ.

ಮಾರುಕಟ್ಟೆಗೆ ಬಂದ ಹಾವೇರಿ ಆಲ್ಫಾನ್ಸೋ ಮಾವು; ರುಚಿ ನೋಡಿದ್ರಾ?

ಕೊಪ್ಪಳ ಜಿಲ್ಲೆಯಲ್ಲಿ ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗಾಳಿ ಆಡುವ ಕೋರೋಗೆಟೆಡ್ ರಟ್ಟಿನ ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ 'ಕೊಪ್ಪಳ ಮಾವು' ಶೀರ್ಷಿಕೆಯಡಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಮೇ 15ರಂದು ಇದಕ್ಕೆ ಚಾಲನೆ ಸಿಗಲಿದೆ.

ಕೊರೊನಾ ಲಾಕ್ ಡೌನ್; ಸಂಕಷ್ಟಕ್ಕೆ ಸಿಲುಕಿದ ಮಾವು ಬೆಳೆದ ರೈತ

ಮಂಡ್ಯ ಜಿಲ್ಲೆಯಲ್ಲಿ ಮಾವಿನ ಹಣ್ಣುನ್ನು ಮನೆ ಮನೆಗಳಿಗೆ ತಲುಪಿಸಲು ಆನ್‌ ಲೈನ್ ಮೂಲಕ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಆರ್ಡರ್ ನೀಡಿದ ಒಂದೇ ದಿನದಲ್ಲಿ ಗ್ರಾಹಕರ ಮನೆಗೆ ಮಾವಿನ ಹಣ್ಣು ಸಿಗಲಿದೆ. ಸದ್ಯ, ಮಂಡ್ಯ ನಗರದಲ್ಲಿ ಮಾತ್ರ ಇದನ್ನು ಜಾರಿಗೆ ತರಲಾಗುತ್ತಿದೆ.

ಕೊರೊನಾ ಪರಿಣಾಮ ಈ ಬಾರಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲಿಯೂ ಮಾವು ಬೆಳೆ ಮಾರುಕಟ್ಟೆಗೆ ಬಂದ ಸಂದರ್ಭದಲ್ಲಿಯೇ ಲಾಕ್ ಡೌನ್ ಜಾರಿಗೆ ಬಂದಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ಬೆಂಗಳೂರು ನಗರದಲ್ಲಿ ನಡೆಯುತ್ತಿದ್ದ ಮಾವು ಮತ್ತು ಹಲಸು ಮೇಳ ಸಹ ಈ ಬಾರಿ ನಡೆಯುವ ಸಾಧ್ಯತೆಗಳಿಲ್ಲ.

English summary
Mango mela cancelled in the district due to Coronavirus lock down. Horticulture department will delivery mango to home in Mandya and Koppal district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X