ರೈತರಿಗೆ ಬಿ ಸಿ ಪಾಟೀಲ್ ಮನವಿ: ಆತಂಕ ಬೇಡ ಎಂದ ಸಚಿವ
ಬೆಂಗಳೂರು, ಜುಲೈ 8: ರಾಜ್ಯದ ರೈತರಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ. ರಸಗೊಬ್ಬರ ವಿಷಯದಲ್ಲಿ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
''ಈ ಸಾಲಿನ (2020-2021) ಮುಂಗಾರಿನಲ್ಲಿ ಏಪ್ರಿಲ್ 1 ರಿಂದ ಜುಲೈ 6 2020 ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4,98,000 ಮೆಟ್ರಿಕ್ ಟನ್ ಬೇಡಿಕೆ ಇದೆ. ಈವರೆಗೆ 4,35,700 ಮೆಟ್ರಿಕ್ ಟನ್ ಸರಬರಾಜಾಗಿದ್ದು, 2,06,750 ಮೆಟ್ರಿಕ್ ಟನ್ ದಾಸ್ತಾನು ಇದೆ'' ಎಂದಿದ್ದಾರೆ.
ನಕಲಿ ಬೀಜ ಮಾರಾಟಗಾರರ ಒತ್ತಡಕ್ಕೆ ಮಣಿದರೆ ತಾಯಿ ಮಗುವಿಗೆ ವಿಷವುಣಿಸಿದಂತೆ: ಬಿ.ಸಿ.ಪಾಟೀಲ್
ಯೂರಿಯಾ ರಸಗೊಬ್ಬರ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಈ ಬಾರಿ ಪೂರೈಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರ ಬೇಡಿಕೆಗೆ ತಕ್ಕ ಹಾಗೆ ಪೂರೈಕೆ ನೀಡಲಾಗುವುದು ಎಂದು ಬಿಸಿ ಪಾಟೀಲ್ ಹೇಳಿದ್ದಾರೆ.
ಮುಂಗಾರಿನಲ್ಲಿ ರಸಗೊಬ್ಬರ ಬೇಡಿಕೆ ಪ್ರಮಾಣ ಹೆಚ್ಚಾಗಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು 2,06,740 ಟನ್ ದಾಸ್ತಾನು ಇದೆ ಎಂದು ಬಿ ಸಿ ಪಾಟೀಲ್ ತಿಳಿಸಿದ್ದಾರೆ.