ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧ
ಬೆಂಗಳೂರು, ಏ. 13 : ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧಿಸಲು ತೋಟಗಾರಿಕಾ ಇಲಾಖೆ ಹಾಗೂ ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. ಪ್ರಾಯೋಗಿಕವಾಗಿ ಭಾನುವಾರ ಮಾತ್ರ ವಾಹನ ಸಂಚಾರ ನಿಷೇಧ ಮಾಡಲಾಗುತ್ತದೆ.
ಕಬ್ಬನ್ ಪಾರ್ಕ್‌ನಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ತಡೆಗಟ್ಟಲು ವಾಹನ ಸಂಚಾರ ನಿಷೇಧಕ್ಕೆ ಅನುಮತಿ ನೀಡಬೇಕು ಎಂದು ತೋಟಗಾರಿಕಾ ಇಲಾಖೆ 2014ರ ಡಿಸೆಂಬರ್‌ನಲ್ಲಿ ಸರ್ಕಾರ ಮತ್ತು ಸಂಚಾರಿ ಪೊಲೀಸರಿಗೆ ಮನವಿ ಮಾಡಿತ್ತು. [ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ಬೇಡ]

ತೋಟಗಾರಿಕಾ ಇಲಾಖೆ ನಿರ್ದೇಶಕರು, ಸಂಚಾರಿ ಪೊಲೀಸರು ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ವಾಹನ ಸಂಚಾರ ನಿಷೇಧಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಏ.26ರಿಂದ ಪ್ರತಿ ಭಾನುವಾರ ವಾಹನ ಸಂಚಾರ ನಿಷೇಧಿಸುವ ಸಾಧ್ಯತೆ ಇದೆ. [ಕಬ್ಬನ್ ಪಾರ್ಕಿನಲ್ಲಿ 1 ಕಪ್ ಕಾಫಿಗೆ 100 ರೂ.]
ತೋಟಗಾರಿಕಾ ಇಲಾಖೆ ರಜಾ ದಿನಗಳು ಮತ್ತು ವಾರಂತ್ಯದಲ್ಲಿ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಸದ್ಯ, ಪ್ರಾಯೋಗಿಕವಾಗಿ ಭಾನುವಾರ ಮಾತ್ರ ಸಂಚಾರ ನಿಷೇಧಿಸಲು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. [ಕಬ್ಬನ್ ಪಾರ್ಕ್ ಬಗ್ಗೆ ತಿಳಿಯಿರಿ]
ಕಬ್ಬನ್ ಪಾರ್ಕ್‌ವೊಳಗೆ ವಾಹನ ಸಂಚಾರಕ್ಕೆ ಅವಕಾಶ ನೀಡಿರುವುದರಿಂದ ವಿಪರೀತ ಶಬ್ದ ಮಾಲಿನ್ಯವಾಗುತ್ತಿದೆ. ವಾಹನದ ಹೊಗೆಯಿಂದ ವಾಯುಮಾಲಿನ್ಯವಾಗುತ್ತಿದೆ. ವಾಹನಗಳ ಸಂಚಾರದಿಂದ ಪಾರ್ಕ್‌ನಲ್ಲಿ ಸಾರ್ವಜನಿಕರು ಸುಗಮವಾಗಿ ಸಂಚಾರ ನಡೆಸುವುದು ಕಷ್ಟವಾಗಿದೆ ಎಂದು ತೋಟಗಾರಿಕಾ ಇಲಾಖೆ ಪ್ರಸ್ತಾವನೆಯಲ್ಲಿ ತಿಳಿಸಿತ್ತು.
ವಾಹನ ನಿಲುಗಡೆ : ವಾಹನ ಸಂಚಾರದ ಜೊತೆ ಪಾರ್ಕ್‌ನಲ್ಲಿ ವಾಹನ ನಿಲುಗಡೆ ಮಾಡಲಾಗುತ್ತಿತ್ತು. ಕೇಂದ್ರ ಗ್ರಂಥಾಲಯ, ಬಾಲಭವನ, ಪ್ರೆಸ್ ಕ್ಲಬ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ, ಸೆಂಚುರಿ ಕ್ಲಬ್ ಸಮೀಪ ಹೀಗೆ ಹಲವು ಕಡೆ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು.
ಈ ನಿಷೇಧ ಜಾರಿಯಾದ ನಂತರ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೂ ನಿಷೇಧ ಹೇರಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯಾವ ಪ್ರದೇಶದಲ್ಲಿ ನಿಲುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ಚರ್ಚೆ ನಡೆಸುತ್ತಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications