ಎಪಿಎಂಸಿಯಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ಲಭ್ಯ
ಬೆಂಗಳೂರು, ಜುಲೈ 07 : ಗಗನಮುಖಿಯಾಗಿರುವ ತೊಗರಿ ಬೇಳೆ ಬೆಲೆ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ 130 ರೂ.ಗಳಿಗೆ ತೊಗರಿ ಬೇಳೆ ದೊರೆಯಲಿದೆ. ಮೂರು ತಿಂಗಳ ತನಕ ಇದೇ ಬೆಲೆಯಲ್ಲಿ ಬೇಳೆ ಗ್ರಾಹಕರಿಗೆ ಲಭ್ಯವಾಗಲಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಆಹಾರ ಧಾನ್ಯಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿ, ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಇದರಿಂದ ಬೆಲೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ' ಎಂದು ಅವರು ಹೇಳಿದ್ದಾರೆ. [ಗಮನಿಸಿ, 120 ರು.ಗಿಂತ ಹೆಚ್ಚಿನ ದರಕ್ಕೆ ಬೇಳೆಕಾಳು ಮಾರುವಂತಿಲ್ಲ]

ರಾಜ್ಯದ 144 ಎಪಿಎಂಸಿಗಳಲ್ಲಿ ಗ್ರೇಡ್ - 1 ಬೇಳೆ ಪ್ರತಿ ಕೆಜಿಗೆ ರೂ. 145 ಮತ್ತು ಗ್ರೇಡ್ -2 ಬೇಳೆ ಪ್ರತಿ ಕೆಜಿಗೆ ರೂ. 130 ದರದಲ್ಲಿ ಮಾರಾಟ ಮಾಡಲಾಗುತ್ತದೆ. ಈ ದರದಲ್ಲೇ ಮುಂದಿನ ಮೂರು ತಿಂಗಳ ಕಾಲ ತೊಗರಿ ಬೇಳೆ ಮಾರಾಟ ಮಾಡುತ್ತದೆ. ಜುಲೈ 8ರಿಂದ ಎಪಿಎಂಸಿಗಳಲ್ಲಿ ಈ ಬೆಲೆಯಲ್ಲಿ ಬೇಳೆ ಖರೀದಿ ಮಾಡಬಹುದು. [ಬೇಳೆಕಾಳು ಖರೀದಿಗೆ ಟೆಂಡರ್ ಆಹ್ವಾನಿಸಿದ ರಾಜ್ಯ ಸರ್ಕಾರ]
ಮೋರ್ ಮೇಲೆ ದಾಳಿ ನಡೆದಿತ್ತು : ಕಳೆದ ವಾರ ಬೆಂಗಳೂರು ನಗರದಲ್ಲಿನ ಹಲವು ಮೋರ್ ಮಳಿಗೆಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿತ್ತು. 300 ಮತ್ತು 315 ರೂ.ಗಳಿಗೆ ಬೇಳೆಯನ್ನು ಮಾರಾಟ ಮಾಡುತ್ತಿರುವುದು ಈ ಸಮಯದಲ್ಲಿ ಬೆಳಕಿಗೆ ಬಂದಿತ್ತು. ಇಂತಹ ಮಳಿಗೆಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. [ಅಬ್ಬಾ...ದ್ವಿಶತಕದ ಗಡಿಬಿಟ್ಟು ಕೆಳಗಿಳಿದ ಬೇಳೆ ಕಾಳು]
-
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications