ಬೆಂಗಳೂರಿನ ಮಾಲ್‌ಗಳಲ್ಲಿ ಸಾವಯವ ಉತ್ಪನ್ನಗಳು ದೊರೆಯಲಿದೆ
ಬೆಂಗಳೂರು, ಜು.18: ಇನ್ನುಮುಂದೆ ನಗರದಲ್ಲಿರುವ ಮಾಲ್‌ಗಳಲ್ಲಿ ಕೂಡ ಸಾವಯವ ಉತ್ಪನ್ನಗಳು ದೊರೆಯಲಿದೆ. ಸಾವಯವ ಕೃಷಿ ಉತ್ಪನ್ನಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಕೃಷಿ ಇಲಾಖೆಯು ಎಲ್ಲಾ ಮಾಲ್‌ಗಳಲ್ಲೂ ಸಾವಯವ ಉತ್ಪನ್ನಗಳನ್ನು ಇರಿಸಲು ಮುಂದಾಗಿದೆ.
ಕೃಷಿ ಇಲಾಖೆ ಹಾಗೂ ಕೃಷಿಕರ ಒಕ್ಕೂಟನಗರ ಸೂಪರ್ ಮಾರ್ಕೆಟ್ ಜತೆ ಸಂಯೋಜನೆ ಮಾಡಲು ನಿರ್ಧರಿಸಿದೆ.ರಾಜ್ಯದಲ್ಲಿ ಸುಮಾರು 95 ಸಾವಿರಕ್ಕೂ ಹೆಚ್ಚು ನೋಂದಾಯಿತ ಸಾವಯವ ಕೃಷಿಕರಿದ್ದು, ಹಣ್ಣು, ತರಕಾರಿ, ಏಕದಳ, ದ್ವಿದಳ ಧಾನ್ಯ, ಎಣ್ಣೆಕಾಳುಗಳು ಸೇರಿದಂತೆ ಹಲವು ಬೆಳೆಗಳನ್ನು ಸಾವಯವ ಕೃಷಿ ಪದ್ಧತಿ ಮೂಲಕ ಬೆಳೆಯುತ್ತಿದ್ದಾರೆ.
ಆದರೆ ಈ ಪದಾರ್ಥಗಳಿಗೆ ಸೂಕ್ತ ಮಾರುಕಟ್ಟೆಯಿಲ್ಲದೆ ರೈತರು ಕಂಗಾಲಾಗಿದ್ದರು, ಹಾಗೂ ಬೆಳೆಗಳನ್ನು ಬೆಳೆಯಲು ಹಿಂದೇಟು ಹಾಕುತ್ತಿದ್ದರು. ಈಗಾಗಲೇ ಕೆಲವು ಮಾಲ್‌ಗಳ ಆಹಾರ ವಿಭಾಗದಲ್ಲಿ ಆಯ್ದ ಸಾವಯವ ಉತ್ಪನ್ನಗಳ ಮಾರಾಟ ನಡೆದಿದೆ.

ಆದರೆ ಎಲ್ಲ ಉತ್ಪನ್ನಗಳು ಸಿಗುತ್ತಿಲ್ಲ. ಜನರು ಖರೀದಿಸಲು ಬಯಸಿದರೂ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಬಿಗ್ ಬಜಾರ್, ಫುಡ್ ವರ್ಲ್ಡ್, ಮೋರ್, ಸ್ಟಾರ್ ಬಜಾರ್ ರಿಯಲಯನ್ಸ್ ಮಾರ್ಟ್ ಸೇರಿದಂತೆ ಅನೇಕ ಸೂಪರ್ ಮಾರ್ಕೆಟ್‌ಗಳಲ್ಲಿ ಲಭ್ಯವಿರಲಿದೆ.
ಗ್ರಾಮೀಣ ಕೃಷಿ ಪ್ರದೇಶದಲ್ಲಿ ಸಾವಯವ ಕೃಷಿ ಮಾಡುವ ರೈತರ ಒಕ್ಕೂಟಗಳನ್ನು ರಚಿಸಲಾಗಿದೆ. ಈ ಒಕ್ಕೂಟದಲ್ಲಿ ಸಾವಯವ ಕೃಷಿಕರನ್ನು ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ನೋಂದಣಿಯಾದ ರೈತರು ಸಾವಯವ ಕೃಷಿ ಕೃಷಿ ಪದ್ಧತಿಯನ್ನು ಅನುಸರಿಸುವುದು ಕಡ್ಡಾಯವಾಗಿದೆ ಈ ಒಕ್ಕೂಟದ ರೈತರು 5 ಅಥವಾ 10 ರೂ.ಗಳಷ್ಟು ಷೇರುಗಳನ್ನು ಹಾಕಿ ಸ್ಥಳೀಯವಾಗಿ ಮಾರುಕಟ್ಟೆಯನ್ನು ನಿರ್ಮಾಣ ಮಾಡಿಕೊಂಡು ವ್ಯವಹರಿಸುತ್ತಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications