ಕಬ್ಬನ್ ಪಾರ್ಕ್ನಲ್ಲಿ 2ನೇ ಶನಿವಾರವೂ ವಾಹನ ಸಂಚಾರವಿಲ್ಲ
ಬೆಂಗಳೂರು, ಅಕ್ಟೋಬರ್ 30 : ಬೆಂಗಳೂರು ನಗರದ ಕಬ್ಬನ್ ಪಾರ್ಕ್ನಲ್ಲಿ ಪ್ರತಿ ಭಾನುವಾರ ವಾಹನ ಸಂಚಾರವನ್ನು ನಿಷೇಧಿಸಿರುವ ಸಂಚಾರಿ ಪೊಲೀಸರು ಇನ್ನು ಮುಂದೆ ಎರಡನೇ ಶನಿವಾರವೂ ವಾಹನ ಸಂಚಾರ ನಿಷೇಧಿಸಲು ಮುಂದಾಗಿದ್ದಾರೆ.
ನವೆಂಬರ್ 14ರ ಮಕ್ಕಳ ದಿನಾಚರಣೆ ದಿನದಿಂದ ಪ್ರಾಯೋಗಿಕವಾಗಿ ಎರಡನೇ ಶನಿವಾರದ ವಾಹನ ಸಂಚಾರ ನಿಷೇಧ ಜಾರಿಗೆ ಬರಲಿದೆ. ಈ ಪ್ರಯೋಗ ಯಶಸ್ವಿಯಾದರೆ ಇದನ್ನು ಜಾರಿಗೆ ತರಲಾಗುತ್ತದೆ. ಬೆಂಗಳೂರು ಸಂಚಾರಿ ಪೊಲೀಸರು ಈ ಕುರಿತು ಫೇಸ್ಬುಕ್ನಲ್ಲಿಯೂ ಮಾಹಿತಿ ನೀಡಿದ್ದಾರೆ. [ಪಾರ್ಕಿನಲ್ಲಿ ಸಂಡೇ ಸಂಚಾರ ಬಂದ್ ಸಿಹಿ ಹಂಚಿಕೆ]

ಪ್ರತಿ ತಿಂಗಳ ಎರಡನೇ ಶನಿವಾರ ರಜಾ ದಿನವಾಗಿರುವುದರಿಂದ ಕಬ್ಬನ್ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಇರುತ್ತದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಾನಕ್ಕೆ ಬರುತ್ತಾರೆ. ಆದ್ದರಿಂದ, ವಾಹನ ಸಂಚಾರ ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. [ಭಾನುವಾರ ವಾಹನ ಸಂಚಾರ ಶಾಶ್ವತ ನಿಷೇಧ]
ಭಾನುವಾರ ಸಂಚಾರ ನಿಷೇಧ : ತೋಟಗಾರಿಕಾ ಇಲಾಖೆ ಮತ್ತು ಬೆಂಗಳೂರು ಸಂಚಾರಿ ಪೊಲೀಸರು 2015ರ ಮೇ 24ರ ಭಾನುವಾರದಿಂದ ಮೂರು ವಾರಗಳ ಕಾಲ ಪ್ರಾಯೋಗಿಕವಾಗಿ ಕಬ್ಬನ್ ಪಾರ್ಕ್ನಲ್ಲಿ ವಾಹನ ಸಂಚಾರ ನಿಷೇಧಿಸಿದ್ದರು. ಇದಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸದ್ಯ, ಭಾನುವಾರ ಕಬ್ಬನ್ ಪಾರ್ಕ್ ವಾಹನಗಳಿಂದ ಮುಕ್ತವಾಗಿರುತ್ತದೆ.
ಕಬ್ಬನ್ ಪಾರ್ಕ್ನಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ತಡೆಗಟ್ಟಲು ಭಾನುವಾರ ವಾಹನ ಸಂಚಾರ ನಿಷೇಧಕ್ಕೆ ಅನುಮತಿ ನೀಡಬೇಕು ಎಂದು ತೋಟಗಾರಿಕಾ ಇಲಾಖೆ 2014ರ ಡಿಸೆಂಬರ್ನಲ್ಲಿ ಸರ್ಕಾರ ಮತ್ತು ಸಂಚಾರಿ ಪೊಲೀಸರಿಗೆ ಮನವಿ ಮಾಡಿತ್ತು. 2015ರಲ್ಲಿ ಅದು ಜಾರಿಗೆ ಬಂದಿದೆ. ಸದ್ಯ, ಎರಡನೇ ಶನಿವಾರವೂ ವಾಹನ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
Presently Cubbon park is closed for traffic on every Sunday. We are planning to close Cubbon park on 2nd Saturday of November on the experimental basis.
Posted by Bengaluru Traffic Police onThursday, October 29, 2015
-
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications