Onion Price: ಈರುಳ್ಳಿ ಬೆಲೆ ಮತ್ತಷ್ಟು ಹೆಚ್ಚುವ ಸಾಧ್ಯತೆ: ಕಾರಣ ತಿಳಿಯಿರಿ
ದೇಶಾದ್ಯಂತ ಮಳೆಯ ಅನಿಶ್ಚಿತ ಕೃಷಿ ವಲಯದ ಮೇಲೆ ಭಾರಿ ಪರಿಣಾಮ ಬೀರಿದೆ. ಮಳೆ ಆಧಾರಿತ ಬೆಳೆಗಳ ಉತ್ಪಾದನೆ ತೀವ್ರವಾಗಿ ಕುಂಠಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಾಸ ಉಂಟು ಮಾಡಲಿದೆ. ಅಕ್ಕಿ, ಬೇಳೆ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಈರುಳ್ಳಿ ಕೂಡ ಇದೇ ಸಾಲಿನಲ್ಲಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಅದರಲ್ಲೂ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯುವ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಗದಗ, ವಿಜಯಪುರ ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಕಾಡುತ್ತಿರುವ ಕಾರಣ ಈರುಳ್ಳಿ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹೊಸ ಈರುಳ್ಳಿ ಬೆಳೆಯ ಒಟ್ಟು ಇಳುವರಿ ಕೇವಲ ಶೇ.40ರಷ್ಟಿದ್ದು, ಈಗಾಗಲೇ ಶೇ.25ರಷ್ಟು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಬೆಳೆಯುವ ಈರುಳ್ಳಿ ಬೆಳೆ ಹೊರತುಪಡಿಸಿ, ಇಡೀ ಈರುಳ್ಳಿ ಮಾರುಕಟ್ಟೆ ನಾಸಿಕ್ ಮತ್ತು ಮಹಾರಾಷ್ಟ್ರದ ಇತರ ಈರುಳ್ಳಿ ಬೆಳೆಯುವ ಪ್ರದೇಶಗಳನ್ನು ಅವಲಂಬಿಸಿದೆ.
ದಿನದಿಂದ ಬೆಲೆ ಏರಿಕೆ
ಕಳೆದ 15 ದಿನಗಳಿಂದ ಶಿವಮೊಗ್ಗ ಸಗಟು ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಸುಮಾರು 25 ರಿಂದ 30 ರೂ.ಗಳಿದ್ದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 30 ರಿಂದ 35 ರೂ. ಮಾರಾಟವಾಗುತ್ತಿತ್ತು. ಪ್ರಸ್ತುತ ಶಿವಮೊಗ್ಗದ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 32 ರಿಂದ 35 ರೂ.ಗೆ ಏರಿಕೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಈರುಳ್ಳಿ ವ್ಯಾಪಾರಿ ರಾಮು ಮಾತನಾಡಿ, ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಶೇ 40ರಷ್ಟು ತೆರಿಗೆ ವಿಧಿಸಿದೆ. ಈ ಕ್ರಮವು ಮಹಾರಾಷ್ಟ್ರದ ಪ್ರಮುಖ ಮಾರಾಟಗಾರರು ರಫ್ತು ಮಾಡಲು ಕಡಿವಾಣ ಹಾಕಿದ್ದಾರೆ.
ಕೇಂದ್ರ ಸರ್ಕಾರವು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ (ಎನ್‌ಸಿಸಿಎಫ್) ಬೆಂಬಲದೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಿಂದ ಈರುಳ್ಳಿಯನ್ನು ಖರೀದಿಸುವ ಮೂಲಕ ಬೆಲೆಯನ್ನು ನಿಯಂತ್ರಿಸುತ್ತಿದೆ. ನವೆಂಬರ್‌ನಿಂದ ಈರುಳ್ಳಿ ಬೆಲೆ ಸ್ಥಿರವಾದ ಏರಿಕೆಗೆ ಸಾಕ್ಷಿಯಾಗಬಹುದು ಮತ್ತು ಮಹಾರಾಷ್ಟ್ರದಿಂದ ಪೂರೈಕೆಯ ಆಧಾರದ ಮೇಲೆ ಬೆಲೆ ಏರಿಕೆ ನಿರ್ಧಾರವಾಗಲಿದೆ.
ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ
ಈರುಳ್ಳಿ ಬೆಲೆ ಹೆಚ್ಚಳವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಮಾಡಿದ್ದು, ಬೆಲೆ ಹೆಚ್ಚಳವಾಗುವಾಗ ಮಾರುಕಟ್ಟೆಗೆ ಈರುಳ್ಳಿ ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತಿದೆ.












Click it and Unblock the Notifications