ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೂರೈಕೆ ಕೊರತೆ: ಬೆಂಗಳೂರಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16: ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಬೆಂಗಳೂರಿನಲ್ಲಿ ಕೆಜಿ ಈರುಳ್ಳಿ ಬೆಲೆ 75 ರೂ,ಗೆ ತಲುಪಿದೆ.

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಈರುಳ್ಳಿ ಬೆಲೆ ನೆಲಕಚ್ಚಿರುವುದರಿಂದ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆ ಉಂಟಾಗಿ ಬೆಲೆ ಹೆಚ್ಚಾಗಿದೆ.

ಹಾಪ್‌ಕಾಮ್ಸ್‌ನಲ್ಲಿ ಈರುಳ್ಳಿ ಕೆಜಿ 75 ರೂ. ತಲುಪಿದೆ.ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರು ರೋಸ್ ಈರುಳ್ಳಿ ,ಕೃಷ್ಣಪುರಂ ಈರುಳ್ಳಿ ರಫ್ತಿಗೆ ಕೇಂದ್ರ ಒಪ್ಪಿಗೆ ಬೆಂಗಳೂರು ರೋಸ್ ಈರುಳ್ಳಿ ,ಕೃಷ್ಣಪುರಂ ಈರುಳ್ಳಿ ರಫ್ತಿಗೆ ಕೇಂದ್ರ ಒಪ್ಪಿಗೆ

ರಾಜ್ಯದಲ್ಲಿ ಬಂದಿರುವ ಹೊಸ ಬೆಳೆ ಅತಿವೃಷ್ಟಿಗೆ ನಾಶವಾಗಿದೆ. ಈರುಳ್ಳಿ ಬೆಳೆಯುವ ವಿವಿಧ ಜಿಲ್ಲೆಗಳಲ್ಲಿ ಮಳೆಗೆ ಬೆಳೆ ಭೂಮಿಯಲ್ಲೇ ಕೊಳೆಯುತ್ತಿದೆ. ಕಳೆದ ವರ್ಷವೂ ಸಹ ಮಳೆಗೆ ಈರುಳ್ಳಿ ಬೆಳೆ ನಾಶವಾಗಿ ಕೆಜಿಗೆ ನೂರು ರೂ. ದಾಟಿತ್ತು. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರೆದರೆ ಬೆಲೆ ಮತ್ತಷ್ಟು ಹೆಚ್ಚಾಗಬಹುದು ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸಾಧಾರಣದಿಂದ ಗುಣಮಟ್ಟದ ಈರುಳ್ಳಿವರೆಗೆ ಮಾರಾಟ

ಸಾಧಾರಣದಿಂದ ಗುಣಮಟ್ಟದ ಈರುಳ್ಳಿವರೆಗೆ ಮಾರಾಟ

ನಗರದ ಬಹುತೇಕ ಮಾರುಕಟ್ಟೆ, ಬೀದಿಬದಿ ವ್ಯಾಪಾರಿಗಳ ಬಳಿ ಸಾಧಾರಣ ಈರುಳ್ಳಿಯಿಂದ ಗುಣಮಟ್ಟದ ಈರುಳ್ಳಿವರೆಗೆ ಮಾರಾಟ ಮಾಡಲಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.
ಇನ್ನೊಂದೆಡೆ ಈರುಳ್ಳಿ ಕೊರತೆ ನೀಗಿಸಲು ಈಜಿಪ್ಟ್ ಈರುಳ್ಳಿ ಆಮದು ಮಾಡಿಕೊಳ್ಳುವ ಪ್ರಯತ್ನವೂ ಕೂಡ ನಡೆಯುತ್ತಿದೆ.

ಮಾರುಕಟ್ಟೆಗೆ ಡ್ಯಾಮೇಜ್ ಈರುಳ್ಳಿ

ಮಾರುಕಟ್ಟೆಗೆ ಡ್ಯಾಮೇಜ್ ಈರುಳ್ಳಿ

ಮಾರುಕಟ್ಟೆಗೆ ಡ್ಯಾಮೇಜ್ ಈರುಳ್ಳಿ ಬರುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ಅಂದಾಜು 80 ಸಾವಿರ ಚೀಲ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಇದೀಗ 50 ಚೀಲ ಮಾತ್ರ ಬರುತ್ತಿದೆ.

ಈ ವರ್ಷ ಶೇ.50ರಷ್ಟು ಬೆಳೆಗೆ ಹಾನಿ

ಈ ವರ್ಷ ಶೇ.50ರಷ್ಟು ಬೆಳೆಗೆ ಹಾನಿ

ಈ ವರ್ಷ ಶೇ.50ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದೆ. ಸಗಟು ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿ ಕೆಜಿಗೆ 50-55 ರೂ.ಮಧ್ಯಮ ಕೆ.ಜಿ. 30-45 ರೂ.ವರೆಗೆ ಬೆಲೆ ನಿಗದಿಯಾಗಿದೆ. ಮಹಾರಾಷ್ಟ್ರದ ಹಳೆಯ ಈರುಳ್ಳಿ ಹೆಚ್ಚು ಬಂದರೆ ಬೆಲೆ ಇಳಿಕೆಯಾಗಬಹುದು. ಇಲ್ಲದಿದ್ದರೆ ಮುಂದಿನ 2-3 ತಿಂಗಳು ಬೆಲೆ ಏರಿಳಿತ ಉಂಟಾಗಲಿದೆ.

Recommended Video

Kusuma ಗೆ ದೊಡ್ಡ Shock | Oneindia Kannada
ಈಜಿಪ್ಟ್‌ನಿಂದ ಈರುಳ್ಳಿ ಆಮದು

ಈಜಿಪ್ಟ್‌ನಿಂದ ಈರುಳ್ಳಿ ಆಮದು

ಈರುಳ್ಳಿ ಕೊರತೆ ನೀಗಿಸಲು ಈಜಿಪ್ಟ್‌ನಿಂದ ಆಮದು ಮಾಡಿಕೊಳ್ಳಲು ಸಿದ್ಧತೆ ನಡೆಯುತ್ತಿದೆ. ಮಳೆಯಿಂದ ತರಕಾರಿ ಬೆಲೆಯೂ ಹೆಚ್ಚಾಗಿದೆ. ಇನ್ನೊಂದೆಡೆ ಮಾರುಕಟ್ಟೆಗೆ ಉತ್ತಮ ಗುಣಮಟ್ಟದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ರಾಜ್ಯದ ಕೆಲ ಜಿಲ್ಲೆಗಳಿಂದ ಹೊಸ ಈರುಳ್ಳಿ ಬರುತ್ತಿದ್ದರೂ ಹಸಿಯಾಗಿರುವುದರಿಂದ ಬಹುಬೇಗ ಕೊಳೆಯುತ್ತಿದೆ. ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಪೂರೈಕೆ ಕಡಿಮೆಯಾಗಿದೆ.

English summary
Price of onion shot up to a whopping Rs. 70 per kg in Bengaluru due to severe short supply in the market.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X