ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಡಿಕೇರಿ; ಎಂಎಸ್‌ಪಿ ಅಡಿ ಭತ್ತ, ರಾಗಿ ಖರೀದಿಗೆ ನೋಂದಾಯಿಸಿ

|
Google Oneindia Kannada News

ಮಡಿಕೇರಿ, ಜನವರಿ 12; ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೊಡಗು ಜಿಲ್ಲೆಯಲ್ಲಿ ರೈತರಿಂದ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಭತ್ತ ಮತ್ತು ರಾಗಿಯನ್ನು ಖರೀದಿ ಮಾಡಲಾಗುತ್ತಿದೆ.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಮಾತನಾಡಿದರು.

ಮಕರ ಸಂಕ್ರಾಂತಿ ವಿಶೇಷ ಪುಟ

"ಕೇಂದ್ರ ಸರ್ಕಾರದ ಆದೇಶದಂತೆ 2022-23ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್ 15ರಿಂದ ನೋಂದಣಿ ಆರಂಭವಾಗಿದೆ" ಎಂದು ಹೇಳಿದರು.

ಭಾರತದಲ್ಲಿ ಈವರೆಗೆ 541.90 ಲಕ್ಷ ಟನ್‌ ಭತ್ತ ಖರೀದಿ, ಶೇ.9.58 ಏರಿಕೆಭಾರತದಲ್ಲಿ ಈವರೆಗೆ 541.90 ಲಕ್ಷ ಟನ್‌ ಭತ್ತ ಖರೀದಿ, ಶೇ.9.58 ಏರಿಕೆ

Paddy And Ragi Purchase Process In Kodagu District Begins

ಕೊಡಗು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆ ನಡೆಯಲಿದೆ.

ಧಾರವಾಡ; ಎಂಎಸ್‌ಪಿ ಅಡಿ ಭತ್ತ, ಬಿಳಿಜೋಳ ಖರೀದಿ ಆರಂಭ ಧಾರವಾಡ; ಎಂಎಸ್‌ಪಿ ಅಡಿ ಭತ್ತ, ಬಿಳಿಜೋಳ ಖರೀದಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಠ 10ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ.

2023ರ ಜನವರಿ 9ರಂತೆ ಜಿಲ್ಲೆಯಲ್ಲಿ ಒಟ್ಟು 358 ರೈತರು, ಅಂದಾಜು 13131 ಕ್ವಿಂಟಾಲ್ ಭತ್ತ, ಹಾಗೂ 2 ರೈತರು ಅಂದಾಜು 38 ಕ್ವಿಂಟಲ್ ರಾಗಿ ಖರೀದಿ ಮಾಡಲು ನೋಂದಣಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Paddy And Ragi Purchase Process In Kodagu District Begins

ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‍ಗೆ 3578 ರೂ. ನಿಗದಿಪಡಿಸಲಾಗಿದೆ. ರೈತರ ನೋಂದಣಿಗೆ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದ್ದಾರೆ.

ಮ್ಯಾಂಡಸ್ ಅಬ್ಬರ; ರಾಗಿ ಬೆಳೆದ ರೈತರಿಗೆ ಜಿಲ್ಲಾಡಳಿತದಿಂದ ಸಿಹಿಸುದ್ದಿ ಮ್ಯಾಂಡಸ್ ಅಬ್ಬರ; ರಾಗಿ ಬೆಳೆದ ರೈತರಿಗೆ ಜಿಲ್ಲಾಡಳಿತದಿಂದ ಸಿಹಿಸುದ್ದಿ

ಖರೀದಿ ಕೇಂದ್ರಗಳು; ರೈತರಿಗೆ ಅನುಕೂಲ ಆಗುವಂತೆ 4 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೆಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ.

ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಲು ಸೂಚನೆ ನೀಡಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಪ್ರದೇಶದಲ್ಲಿ ರೈತರು ನೋಂದಣಿ ಕೇಂದ್ರ ತೆರೆಯಲು ಬೇಡಿಕೆಯನ್ನು ಸಲ್ಲಿಸಿದ್ದು, ಅದೇ ರೀತಿ ಕೊಡ್ಲಿಪೇಟೆ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನೋಂದಣಿ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು.

ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸರಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಸಭೆಯಲ್ಲಿ ಡಿಸಿ ಹೇಳಿದ್ದಾರೆ.

English summary
Kodagu deputy commissioner Dr. Sateesha B. C. said farmer registration and Paddy and Ragi purchase process under MSP began in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X