ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಡುಪಿ; ನ. 21ರಿಂದ ಭತ್ತ ಖರೀದಿಗೆ ನೋಂದಣಿ ಕೇಂದ್ರ ಆರಂಭ

|
Google Oneindia Kannada News

ಉಡುಪಿ, ನವೆಂಬರ್ 16; ಉಡುಪಿ ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಖರೀದಿ ಮಾಡಲಾಗುತ್ತದೆ. ಆದರೆ ಇದಕ್ಕೆ ಮೊದಲು ರೈತರು ನೋಂದಣಿ ಮಾಡಿಸಬೇಕಿದೆ.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಈ ಕುರಿತು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ , ಜಿಲ್ಲೆಯ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ಜಿಲ್ಲೆಯಲ್ಲಿ ನವೆಂಬರ್ 21 ರಿಂದ ನೋಂದಣಿ ಕೇಂದ್ರಗಳನ್ನು ತರೆದು, ನೋಂದಣಿ ಆರಂಭಿಸುವಂತೆ ಅವರು ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಸ್ಥಳೀಯವಾಗಿ ಬೆಳೆಯುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಷಾ, ಅಭಿಲಾಷ ಮತ್ತು ಎಂಓ4 ತಳಿಯ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದೆ. ಸಾಮಾನ್ಯ ಭತ್ತಕ್ಕೆ ರೂ. 2540 ದರವನ್ನು ನಿಗದಿಪಡಿಸಲಾಗಿದೆ.

Paddy Purchase Registration In Udupi From November 21st

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 10 ಕಡೆಗಳಲ್ಲಿ ಭತ್ತ ನೋಂದಣಿ ಕೇಂದ್ರಗಳನ್ನು ಹಾಗೂ 7 ಕಡೆಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಆದರೆ ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸೂಕ್ತ ದಾಸ್ತಾನು; ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ಗುರುತಿಸುವಂತೆ ಸೂಚನೆ ಕೊಡಲಾಗಿದೆ.

ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ.

Paddy Purchase Registration In Udupi From November 21st

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಮಾರಾಟ ಸಮಯದಲ್ಲಿ ರೈತರು ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೃಷಿ ಇಲಾಖೆ, ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧಿಕಾರಿಗಳು, ಎಪಿಎಂಸಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಭತ್ತ ಖರೀದಿ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಸೂಚಿಸಲಾಗಿದೆ.

ರೈತರಿಂದ ಖರೀದಿಸಿದ ಭತ್ತವನ್ನು ಜಿಲ್ಲೆಯ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮತ್ತು ಕುಚ್ಚಲಕ್ಕಿಯಾಗಿ ಪರಿವರ್ತಿಸಲು ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ಅಕ್ಕಿ ಗಿರಣಿಗಳ ಮಾಲೀಕರು ಸಭೆಯಲ್ಲಿ ಭರವಸೆ ನೀಡಿದ್ದಾರೆ.

English summary
Udupi deputy commissioner Kurma Rao M. said that paddy crop purchase registration will be start in district from November 21st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X