ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ; ಜನವರಿಯಿಂದ ಭತ್ತ, ರಾಗಿ ಮತ್ತು ಜೋಳ ಖರೀದಿ ಕೇಂದ್ರ ಆರಂಭ

|
Google Oneindia Kannada News

ಬಳ್ಳಾರಿ, ಡಿಸೆಂಬರ್ 13; ಬಳ್ಳಾರಿ ಜಿಲ್ಲೆಯಲ್ಲಿ ಭತ್ತ, ಮೆಣಸಿನಕಾಯಿ ಹಾಗೂ ಇನ್ನಿತರ ಬೆಳೆಗಳ ಕೊಯ್ಲು ಚಟುವಟಿಕೆಗಳನ್ನು ಬೇಗನೇ ಮುಗಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ. ಮಲ್ಲಿಕಾರ್ಜುನ ರೈತರಿಗೆ ಕರೆ ನೀಡಿದ್ದರು. ಈಗ ಜಿಲ್ಲಾಡಳಿತ ರೈತರಿಗೆ ಸಿಹಿಸುದ್ದಿಯನ್ನು ನೀಡಿದೆ.

ಸೋಮವಾರ ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯೂ ಜಿಲ್ಲಾಧಿಕಾರಿ ಪವನ್‍ ಕುಮಾರ್ ಮಾಲಪಾಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಬಳ್ಳಾರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಖರೀದಿ ಕೇಂದ್ರಗಳು ತೆರೆಯಲಾಗಿದೆ. ರೈತರು ಬೆಳೆದ ಬೆಳೆಗಳನ್ನು ನೋಂದಾಯಿಸಿಕೊಳ್ಳಲು ಡಿಸೆಂಬರ್ 15ರಿಂದ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ; ಜನವರಿ 1ರಿಂದಲೇ ಬೆಂಬಲ ಬೆಲೆಯಡಿ ಭತ್ತ ಖರೀದಿ ಶಿವಮೊಗ್ಗ; ಜನವರಿ 1ರಿಂದಲೇ ಬೆಂಬಲ ಬೆಲೆಯಡಿ ಭತ್ತ ಖರೀದಿ

ರೈತರು ಬೆಳೆದ ಬೆಳೆಗಳ ಕಟಾವು ಪ್ರಕ್ರಿಯೆ ಮುಕ್ತಾಯವಾಗಿದೆ. ಬೆಂಬಲ ಬೆಲೆಯಲ್ಲಿ ಬೆಳೆಗಳನ್ನು ಖರೀದಿಸಲು ರೈತರು ಡಿಸೆಂಬರ್ 15ರಿಂದ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಮತ್ತು ಖರೀದಿ ಕೇಂದ್ರವಿರುವ ಎಪಿಎಂಸಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಕಾಫಿನಾಡಿನಲ್ಲಿ ಧಾರಾಕಾರ ಮಳೆ: ಸಂಕಷ್ಟದಲ್ಲಿ ಭತ್ತ, ಕಾಫಿ, ಅಡಿಕೆ ಬೆಳೆಗಾರರುಕಾಫಿನಾಡಿನಲ್ಲಿ ಧಾರಾಕಾರ ಮಳೆ: ಸಂಕಷ್ಟದಲ್ಲಿ ಭತ್ತ, ಕಾಫಿ, ಅಡಿಕೆ ಬೆಳೆಗಾರರು

Paddy Ragi Purchase At Ballari Under Minimum Support Price From January 1st

ಖರೀದಿ ಪ್ರಕ್ರಿಯೆಯನ್ನು 2023ರ ಜನವರಿ 1ರಿಂದ ಆರಂಭವಾಗಿ 2023ರ ಮಾರ್ಚ್ ಅಂತ್ಯದವರೆಗೆ ಖರೀದಿ ಮಾಡಲಾಗುತ್ತದೆ. ಇದಕ್ಕೆ ಬೇಕಾದ ನೋಂದಣಿ ಮತ್ತು ಖರೀದಿ ಸಿದ್ದತೆ, ಸಂಗ್ರಹಕ್ಕೆ ಗೋದಾಮುಗಳನ್ನು ಸಿದ್ದಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕಟಾವಿಗೆ ಬಂದ ಭತ್ತ: ದೇವದುರ್ಗ ತಾಲೂಕಿನಲ್ಲಿ ಖರೀದಿ ಕೇಂದ್ರಕ್ಕಾಗಿ ರೈತರ ಒತ್ತಾಯ ಕಟಾವಿಗೆ ಬಂದ ಭತ್ತ: ದೇವದುರ್ಗ ತಾಲೂಕಿನಲ್ಲಿ ಖರೀದಿ ಕೇಂದ್ರಕ್ಕಾಗಿ ರೈತರ ಒತ್ತಾಯ

ಭತ್ತ ಮಳೆಗೆ ಸಿಲುಕುವ ಸಾಧ್ಯತೆ; ಬಳ್ಳಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯು 91041 ಹೆಕ್ಟೇರ್‌ನಷ್ಟು ಬಿತ್ತನೆಯಾಗಿದ್ದು, ಕಟಾವು ಹಂತದಲ್ಲಿರುತ್ತದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಸೃಷ್ಠಿಯಾಗಿದ್ದು, ಈ ತಿಂಗಳ 14ರವರೆಗೆ ಜಿಲ್ಲೆಯಾದ್ಯಂತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ರೈತರು ತಮ್ಮ ಜಮೀನಿನಲ್ಲಿರುವ ಕೃಷಿ ಬೆಳೆಯಾದ ಭತ್ತ, ತೋಟಗಾರಿಕೆ ಬೆಳೆಯಾದ ಮೆಣಸಿನಕಾಯಿ ಹಾಗೂ ಇನ್ನಿತ್ತರ ಬೆಳೆಗಳ ಕೊಯ್ಲು ಮುಗಿಸಿಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

2022-23ನೇ ಸಾಲಿಗೆ ಎಂಎಸ್‌ಪಿ ಕಾರ್ಯಾಚರಣೆಗೆ ಖರೀದಿ ಕೇಂದ್ರಗಳಾಗಿ ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ ಯಾರ್ಡ್, ಕಂಪ್ಲಿಯ ಎಪಿಎಂಸಿ ಯಾರ್ಡ್, ಸಂಡೂರು ಎಪಿಎಂಸಿ ಯಾರ್ಡ್, ಸಿರುಗುಪ್ಪ ಎಪಿಎಂಸಿ ಯಾರ್ಡ್ ಸೇರಿದಂತೆ 4 ಕೇಂದ್ರಗಳನ್ನು ತೆರೆಯಲಾಗಿದೆ. ಕುರುಗೋಡಿನ ಎಪಿಎಂಸಿ ಯಾರ್ಡ್‍ನಲ್ಲಿ ಗೋದಾಮುಗಳ ಗುಣಮಟ್ಟ ಮಳಿಗೆಗಳನ್ನು ನೋಡಿಕೊಂಡು ಅಲ್ಲಿಯು ತೆರೆಯುವಂತೆ ನಿರ್ದೇಶನ ನೀಡಲಾಗಿದೆ.

ಬೆಂಬಲ ಬೆಲೆ ಮಾಹಿತಿ; 2022-23ನೇ ಸಾಲಿಗೆ ಖರೀದಿಸುವ ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಲ್‍ಗೆ ರೂ. 2040, ಗ್ರೇಡ್ 'ಎ' ಭತ್ತಕ್ಕೆ ರೂ. 2060, ರಾಗಿಗೆ ರೂ. 3578, ಹೈಬ್ರೀಡ್-ಬಿಳಿ ಜೋಳಕ್ಕೆ ರೂ. 2970, ಮಾಲ್ದಂಡಿ-ಬಿಳಿ ಜೋಳಕ್ಕೆ ರೂ. 2990 ಬೆಂಬಲ ಬೆಲೆ ನಿಗದಿ ಮಾಡಲಾಗಿದೆ.

ಎಪಿಎಂಸಿ ಸ್ಥಳದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಖರೀದಿ ಕೇಂದ್ರಗಳಿಗೆ ನುರಿತ ಗುಣಮಟ್ಟ ಪರೀಕ್ಷಕರನ್ನು ನೇಮಿಸಬೇಕು ಹಾಗೂ ಗುಣಮಟ್ಟ ಪರಿಶೀಲನೆ ಹೆಸರಲ್ಲಿ ರೈತರಿಗೆ ಯಾವುದೇ ಅನಾನುಕೂಲವಾಗದಂತೆ ಎಚ್ಚರವಹಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

paddy purchase centre

ರೈತರು ಮಾರಾಟ ಮಾಡಲು ಬಯಸುವ ಕೃಷಿ ಉತ್ಪನ್ನಗಳ ಸ್ಯಾಂಪಲ್ ಪರೀಕ್ಷೆಯ ಬಗ್ಗೆ ಪ್ರತಿ ಖರೀದಿ ಕೇಂದ್ರದಲ್ಲಿ ಒಂದು 'ಸ್ಯಾಂಪಲ್ ಪರೀವಿಕ್ಷಣಾ ವಹಿ' ಇಡಬೇಕು. ಸ್ಯಾಂಪಲ್ ಪರೀಕ್ಷಿಸಿದ ಬಗ್ಗೆ ಪ್ರತಿದಿನ ದಾಖಲಿಸಿ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.

ಖರೀದಿ ಕೇಂದ್ರದ ಕೊಠಡಿ, ಖರೀದಿ ಪ್ರಾಂಗಣ, ಬೆಳಕು, ಕುಡಿಯುವ ನೀರು, ನೆರಳು, ರೈತ ವಿಶ್ರಾಂತಿ, ತುರ್ತು ಟಾರ್ಪಲಿನ್, ರಕ್ಷಣಾ ವ್ಯವಸ್ಥೆ ಮಾಡುವ ಜವಾಬ್ದಾರಿ ಹೊಂದಬೇಕು. ಗಾಳಿ, ಮಳೆ, ಬೆಳಕು ಮುಂತಾದ ಪ್ರಕೃತಿ ಅಥವಾ ಮಾನವ ವಿಕೋಪಗಳಿಂದ ಕೃಷಿ ಉತ್ಪನ್ನ ರಕ್ಷಿಸಲು ಅವಶ್ಯವಿರುವ ಹೊದಿಕೆ, ಹಾಸುಗಳು, ರಕ್ಷಣಾ ಸಾಮಗ್ರಿಗಳನ್ನು ಹಾಗೂ ಸ್ವಂತ ಕೇಂದ್ರಗಳಲ್ಲಿ ಎಲ್ಲಾ ಮೂಲ ಸೌಕರ್ಯಗಳನ್ನು ಮಾಡುವ ಜವಾಬ್ದಾರಿಯನ್ನು ಎಪಿಎಂಸಿ ಅಧಿಕಾರಿಗಳು ನೋಡಿಕೊಳ್ಳಬೇಕು.

ಖರೀದಿ ಪ್ರಕ್ರಿಯೆಗೆ ತಗಲುವ ಎಲ್ಲಾ ವೆಚ್ಚಗಳನ್ನು ಎಪಿಎಂಸಿ ಆವರ್ತ ನಿಧಿಯಿಂದ ಭರಿಸಬೇಕು. ಪ್ರತಿದಿನ ಖರೀದಿಸುವ ಕೃಷಿ ಉತ್ಪನ್ನಗಳ ವಿವರಗಳನ್ನು ಖರೀದಿ ಏಜೆನ್ಸಿ ಪತ್ರದಲ್ಲಿ ಕೃಷಿ ಉತ್ಪನ್ನ ಖರೀದಿ ವಹಿಯಲ್ಲಿ ದಾಖಲಿಸಬೇಕಿದೆ.

English summary
Ballari deputy commissioner Pavan Kumar Malapati said that under minimum support price Paddy, Ragi purchase centre to open at district from January 1st, 2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X