ವಿರೋಧಕ್ಕೆ ಮಣಿದ ಪೆಪ್ಸಿಕೋ: ರೈತರ ಮೇಲಿನ ಕೇಸ್ ವಾಪಸ್
ನವದೆಹಲಿ, ಮೇ 2: ತನ್ನ ಅನುಮತಿ ಇಲ್ಲದೆ ನೋಂದಾಯಿತ ಆಲೂಗಡ್ಡೆಯನ್ನು ಬೆಳೆದಿದ್ದಕ್ಕಾಗಿ ಗುಜರಾತ್ನ ಅಹಮದಾಬಾದ್ನ ನಾಲ್ವರು ಬಡ ರೈತರ ಮೇಲೆ ಹೂಡಿದ್ದ ದಾವೆಯನ್ನು ಪೆಪ್ಸಿಕೋ ಇಂಡಿಯಾ ವಾಪಸ್ ಪಡೆದುಕೊಂಡಿದೆ.
ಇದರಿಂದ ಪೆಪ್ಸಿಕೋ ವಿರುದ್ಧ ವ್ಯಕ್ತವಾಗಿದ್ದ ಆಕ್ರೋಶ ಮತ್ತು ಅಭಿಯಾನಕ್ಕೆ ಯಶಸ್ಸು ಸಿಕ್ಕಿದೆ. ದಾವೆಯಿಂದ ಕಂಗಾಲಾಗಿದ್ದ ಬಡ ರೈತರು ನಿಟ್ಟುಸಿರುಬಿಟ್ಟಿದ್ದಾರೆ.
'ಸರ್ಕಾರದೊಂದಿಗಿನ ಚರ್ಚೆಗಳ ಬಳಿಕ ರೈತರ ವಿರುದ್ಧ ಪ್ರಕರಣಗಳನ್ನು ಹಿಂದಕ್ಕೆ ಪಡೆದುಕೊಳ್ಳಲು ಕಂಪೆನಿ ನಿರ್ಧರಿಸಿದೆ' ಎಂದು ಪೆಪ್ಸಿಕೋ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ.

ಪೆಪ್ಸಿಕೋ ತನ್ನ ಉತ್ಪನ್ನವಾದ 'ಲೇಸ್' ಚಿಪ್ಸ್ ತಯಾರಿಕೆಗೆಂದೇ ಬಳಸುವ ಎಫ್ಸಿ5 ನೋಂದಾಯಿತ ಆಲೂಗಡ್ಡೆ ತಳಿಯನ್ನು ತನ್ನ ಅನುಮತಿಯಿಲ್ಲದೆ ಬೆಳೆದು ಮಾರಾಟ ಮಾಡುತ್ತಿರುವುದಕ್ಕೆ ನಾಲ್ವರು ರೈತರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನ್ನ ಹೆಸರಿನಲ್ಲಿ ಇರುವ ಆಲೂಗಡ್ಡೆಯನ್ನು ನಿಮಯ ಮೀರಿ ಬೆಳೆದಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಹೀಗಾಗಿ ಪರಿಹಾರಕ್ಕಾಗಿ ನಾಲ್ವರು ರೈತರು ತಲಾ 1.05 ಕೋಟಿ ರೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿತ್ತು.
ಇದು ವಿವಾದಕ್ಕೆ ಕಾರಣವಾಗಿತ್ತು. ಪೆಪ್ಸಿಕೋ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಪೆಪ್ಸಿಕೋ, ಈ ರೈತರು ತನ್ನೊಂದಿಗೆ ಒಪ್ಪಂದ ಮಾಡಿಕೊಂಡು ಆಲೂಗಡ್ಡೆ ಬೆಳೆದು ತನಗೆ ಮಾರಾಟ ಮಾಡಬೇಕು ಎಂದು ನ್ಯಾಯಾಲಯದ ಆಚೆಗೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವ ಷರತ್ತು ಒಡ್ಡಿತ್ತು. ಆದರೆ, ಇದಕ್ಕೆ ಒಪ್ಪಂದ ರೈತ ಸಂಘಟನೆಗಳು ರೈತರ ಮೇಲಿನ ದಾವೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಪಟ್ಟು ಹಿಡಿದಿತ್ತು.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications