ಪಿಎಂ ಕಿಸಾನ್‌ ಇ-ಕೆವೈಸಿ ಗಡುವು ವಿಸ್ತರಣೆ: ಇ-ಕೆವೈಸಿ ಮಾಡುವುದು ಹೇಗೆ?

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಇಕೆವೈಸಿ ಗಡುವನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಇನ್ನೂ ಕೂಡಾ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇಕೆವೈಸಿ ಮಾಡದ ರೈತರಿಗೆ ಒಂದು ಅವಕಾಶ ನೀಡಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು 2019 ರಲ್ಲಿ ಪ್ರಧಾನಿ ಮೋದಿಯವರು ಪ್ರಾರಂಭಿಸಿದರು. ಕೆಲವು ವಿನಾಯಿತಿಗಳಿಗೆ ಒಳಪಟ್ಟು ಕೃಷಿಯೋಗ್ಯ ಭೂಮಿಯೊಂದಿಗೆ ದೇಶಾದ್ಯಂತ ಎಲ್ಲಾ ಭೂಮಾಲೀಕ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.

ಪಿಎಂ ಕಿಸಾನ್‌ ಯೋಜನೆಯಡಿಯಲ್ಲಿ, ಪ್ರತಿ ವರ್ಷಕ್ಕೆ ರೂ 6000 ಮೊತ್ತವನ್ನು ಮೂರು ಮಾಸಿಕ ಕಂತುಗಳಲ್ಲಿ ನೀಡಲಾಗುತ್ತದೆ. ತಲಾ ರೂ 2000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ, ಪಿಎಂ ಕಿಸಾನ್ ಕಂತು ಮೂರು ಬಾರಿ ಲಭಿಸುತ್ತದೆ. ಅವಧಿ 1 ಏಪ್ರಿಲ್‌ನಿಂದ ಜುಲೈ, ಅವಧಿ 2 ಆಗಸ್ಟ್‌‌ನಿಂದ ನವೆಂಬರ್‌‌ವರೆಗೆ ಮತ್ತು ಅವಧಿ 3 ಡಿಸೆಂಬರ್ ನಿಂದ ಮಾರ್ಚ್‌‌‌‌ವರೆಗೆ ಆಗಿರುತ್ತದೆ.

PM KISAN eKYC Deadline Extended: Know How to Complete e-KYC

"ಎಲ್ಲಾ ಪಿಎಂ ಕಿಸಾನ್‌ ಫಲಾನುಭವಿಗಳಿಗೆ ಇಕೆವೈಸಿಯ ಗಡುವನ್ನು 22 ನೇ ಮೇ 2022 ರವರೆಗೆ ವಿಸ್ತರಿಸಲಾಗಿದೆ," ಎಂದು ಪಿಎಂ ಕಿಸಾನ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಪಿಎಂ ಕಿಸಾನ್‌ ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. ಹಲವಾರು ಮಂದಿ ಇನ್ನೂ ಕೂಡಾ ಇಕೆವೈಸಿ ಮಾಡಿಕೊಂಡಿಲ್ಲ. ನೀವು ಕೂಡಾ ಈವರೆಗೆ ಪಿಎಂ ಕಿಸಾನ್‌ ಇಕೆವೈಸಿ ಮಾಡಿಕೊಂಡಿಲ್ಲವೇ, ಹಾಗಾದರೆ ಈ ಕೆಳಗಿನ ಹಂತಗಳನ್ನು ನೋಡಿ ಶೀಘ್ರ ಇಕೆವೈಸಿ ಮಾಡಿಕೊಳ್ಳಿ.

ಪಿಎಂ ಕಿಸಾನ್‌ ಇಕೆವೈಸಿ ಮಾಡುವುದು ಹೇಗೆ?

* ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ
* ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.
* ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ
* ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ
* ಆಧಾರ್ Ekyc ಯ ಪುಟ ತೆರೆಯಲಿದೆ
* ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು
* ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು
* ಬಳಿಕ search ಬಟನ್‌ ಕ್ಲಿಕ್‌ ಮಾಡಬೇಕು
* ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು
* ಬಳಿಕ Get OTP ಅನ್ನು ಕ್ಲಿಕ್‌ ಮಾಡಿ
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ
* ಒಟಿಪಿಯನ್ನು ನಮೂದಿಸಿ, Submit ಮಾಡಿ
* ನೀವು Submit ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ

PM KISAN eKYC Deadline Extended: Know How to Complete e-KYC

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಗೆ ನಿಮ್ಮ ಹೆಸರನ್ನು ಸೇರಿಸುವುದು ಹೇಗೆ?

* www.pmkisan.gov.in ವೆಬ್‌ಸೈಟ್‌ಗೆ ಭೇಟಿ ನೀಡಿ
* ಈಗ, ಮುಖಪುಟದಲ್ಲಿ, ನೀವು Farmers Corner ಅನ್ನು ಕಾಣಬಹುದು. ಅದರ ಮೇಲೆ ಕ್ಲಿಕ್ ಮಾಡಿ.
* ನಂತರ New farmer registration ಮೇಲೆ ಕ್ಲಿಕ್ ಮಾಡಿ
* ನೋಂದಣಿ ನಮೂನೆಯು ಇದೀಗ ನಿಮಗೆ ಕಾಣಲಿದೆ
* ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
* ಭರ್ತಿ ಮಾಡಿದ ಬಳಿಕ ಪರಿಶೀಲನೆ ಮಾಡಿ Submit ಮೇಲೆ ಕ್ಲಿಕ್‌ ಮಾಡಿದರೆ ಪ್ರಕ್ರಿಯೆ ಪೂರ್ಣವಾಗಲಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+