ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಂ-ಕಿಸಾನ್ ಕರ್ನಾಟಕ ಯೋಜನೆ: 47.86 ಲಕ್ಷ ರೈತರ ಖಾತೆಗೆ ಹಣ ಬಿಡುಗಡೆ ಮಾಡಿದ್ದೆಷ್ಟು?

|
Google Oneindia Kannada News

ಬೆಂಗಳೂರು, ಜೂ.2 : ಪಿಎಂ-ಕಿಸಾನ್ ಕರ್ನಾಟಕ ಯೋಜನೆಯಡಿ ರಾಜ್ಯದ ಕಂತು 2000 ರೂ. ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ 47.86 ಲಕ್ಷ ರೈತರಿಗೆ ಒಟ್ಟು 956.71 ಕೋಟಿ ರೂ. ಮೊತ್ತವನ್ನು ರಾಜ್ಯದ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು. ಇಲ್ಲಿಯವರೆಗೆ ರಾಜ್ಯ ಸರ್ಕಾರವು ಒಟ್ಟು 3861.66 ಕೋಟಿ ರೂ. ನೆರವನ್ನು ರೈತರಿಗೆ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2019ರಿಂದ ಮಾರ್ಚ್‍ ವರೆಗೆ 53.83 ಲಕ್ಷ ರೈತರಿಗೆ 8702.29 ಕೋಟಿ ರೂ. ನೆರವು ಬಿಡುಗಡೆ ಮಾಡಿದೆ. ಮೇ 31 ರಂದು ಮಾನ್ಯ ಪ್ರಧಾನ ಮಂತ್ರಿಗಳು ರಾಜ್ಯದ 49.30 ಲಕ್ಷ ರೈತರಿಗೆ 1279.86 ಕೋಟಿ ರೂ. ಬಿಡುಗಡೆ ಮಾಡಿದರು.

PM-Kisan Karnataka Project: State release of Rs 956.71 crore to 47.86 lakh farmers

ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿಯು ಲಭಿಸಿದೆ.

2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.

PM-Kisan Karnataka Project: State release of Rs 956.71 crore to 47.86 lakh farmers

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ , ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

English summary
Chief Minister Basavaraja Bommai has transferred Rs.956.71 crore to 47.83 lack farmers accounts in under of PM-Kisan Karnataka Project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X